ಪ್ರತ್ಯೇಕ ಪ್ರಕರಣ: ಮಹಿಳೆ ಸಹಿತ ಇಬ್ಬರ ಆತ್ಮಹತ್ಯೆ

ಕೋಟ, ಸೆ.10: ವೈಯಕ್ತಿಕ ಕಾರಣದಿಂದ ಮನನೊಂದ ಆಚ್ಲಾಡಿ ಗ್ರಾಮದ ಚಂದ್ರ ಕೊರಗ(60) ಎಂಬವರ ಮಗಳು ಗೀತಾ(28) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಸೆ.9ರಂದು ಮಧ್ಯಾಹ್ನ ವೇಳೆ ಮನೆಯ ಜಗುಲಿ ಕೋಣೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿರಿಯಡ್ಕ: ವೈಯಕ್ತಿಕ ಕಾರಣದಿಂದ ಮನನೊಂದ ಪೆರ್ಡೂರಿನ ದಯಾನಂದ ಶಂಕರರಾವ್(51) ಎಂಬವರು ಸೆ.8ರಂದು ಸಂಜೆ ವೇಳೆ ಮನೆಯ ಕೋಣೆಯಲ್ಲಿ ಫ್ಯಾನಿನ ಹುಕ್ಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




