Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಯುವ...

ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಯುವ ಸಂಸತ್ತು ಸಭೆ:ಸ್ವರೂಪ ಟಿ.ಕೆ

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ11 Sept 2026 7:57 PM IST
share
ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಯುವ ಸಂಸತ್ತು ಸಭೆ:ಸ್ವರೂಪ ಟಿ.ಕೆ

ಉಡುಪಿ, ಸೆ.11: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ತಾಲೂಕು ಮಟ್ಟದ ಯುವ ಸಂಸತ್ತು ಸಭೆಗೆ ಸೆಪ್ಟಂಬರ್ 15ರಂದು ಚಾಲನೆ ನೀಡಲಾಗುವುದು ಎಂದು ಡಿಸಿ ಸ್ವರೂಪ ಟಿ. ಕೆ ಹೇಳಿದ್ದಾರೆ.

ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಯುವ ಸಂಸತ್ತು ಸಭೆಯ ಕುರಿತ ಮಾಹಿತಿ ಗಳನ್ನು ನೀಡುತ್ತಾ ಅವರು ಈ ವಿಷಯ ತಿಳಿಸಿದರು.

ಪ್ರಜಾಪ್ರಭುತ್ವ ತತ್ವದ ಅನುಸರಣೆಯಲ್ಲಿ ರಾಜ್ಯವು ದೇಶಕ್ಕೆ ಮಾದರಿ ಯಾಗಿದೆ. ಐತಿಹಾಸಿಕ ಪ್ರಜಾಪ್ರಭುತ್ವ ಚಲನಶೀಲತೆಯನ್ನು ಮತ್ತಷ್ಟು ವಿಸ್ತರಿಸುವ ಹಾಗೂ ಯುವ ಸಮುದಾಯಕ್ಕೆ ದೇಶದ ಸಂಸದೀಯ ವ್ಯವಸ್ಥೆಯನ್ನು ಪರಿಚಯಿಸುವ ಉದ್ದೇಶದಿಂದ ಜಿಲ್ಲೆಯ ಶಾಲಾ ಹಾಗೂ ಕಾಲೇಜು ಮಕ್ಕಳಿಗೆ ಯುವ ಸಂಸತ್ತು ಸಭೆಯನ್ನು ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾಗುತ್ತಿದೆ ಎಂದರು.

ಸೆಪ್ಟಂಬರ್ 15ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಯನ್ನು ಆಯೋಜಿಸಬೇಕು. ಶಿಷ್ಟಾಚಾರ ದಂತೆ ಜನಪ್ರತಿನಿಧಿಗಳನ್ನು ಆಹ್ವಾನಿಸ ಬೇಕು. ಸೆ.16ರಿಂದ ತಾಲೂಕು ಮಟ್ಟದ ಯುವ ಸಂಸತ್ತು ಸಭೆಗಳ ಸ್ಫರ್ಧೆಗಳು ಆರಂಭವಾಗಲಿದ್ದು, ಅಕ್ಟೋಬರ್ 10ರ ಒಳಗೆ ತಾಲೂಕು ಮಟ್ಟದ ಸ್ಪರ್ಧೆ ಗಳನ್ನು ಪೂರ್ಣಗೊಳಿಸ ಬೇಕು. ಉತ್ತಮ ವಾಕ್ ಚಾತುರ್ಯ ಇರುವ ಮಕ್ಕಳನ್ನು ಪ್ರೇರೇಪಿಸಿ, ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಮಾಡಬೇಕು ಎಂದ ಜಿಲ್ಲಾಧಿಕಾರಿಗಳು, ಸಂಸತ್ತು/ ವಿಧಾನಸಭೆ ಮಾದರಿಯಲ್ಲಿ ಸಭಾಂಗಣವನ್ನು ಸಿದ್ಧಪಡಿಸಿ ಯುವ ಸಂಸತ್ತು ಸಭೆಗಳನ್ನು ಆಯೋಜಿಸಬೇಕು ಎಂದರು.

ಜಿಲ್ಲಾ ಮಟ್ಟದಲ್ಲಿ ನಡೆಯುವ ಯುವ ಸಂಸತ್ತು ಸಭೆಗೆ ಪ್ರತಿ ತಾಲೂಕಿನಿಂದ ಆಯ್ದ ವಿದ್ಯಾರ್ಥಿಗಳನ್ನು ಕಳುಹಿಸಿಕೊಡ ಬೇಕು. ಅ.11ರಿಂದ 30ರ ಒಳಗೆ ಜಿಲ್ಲಾ ಯುವ ಸಂಸತ್ತು ಸಭೆಗಳನ್ನು ಆಯೋಜಿಸಬೇಕು. ಅತ್ಯುತ್ತಮವಾಗಿ ಚರ್ಚೆ ಯಲ್ಲಿ ಪಾಲ್ಗೊಂಡ ಪ್ರತಿ ವಿಧಾನಸಭಾ ಕ್ಷೇತ್ರದಿಂದ ಒಬ್ಬ ವಿದ್ಯಾರ್ಥಿ ಯನ್ನು ಆಯ್ಕೆ ಮಾಡಿ, ರಾಜ್ಯ ಮಟ್ಟದ ಯುವ ಸಂಸತ್ತು ಸಭೆಗೆ ಕಳುಹಿಸಿ ಕೊಡಲಾಗುವುದು ಎಂದರು.

ಸಂವಿಧಾನ ದಿನಾಚರಣೆ ದಿನವಾದ ನವೆಂಬರ್ 26ರಂದು ಎಲ್ಲಾ 224 ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿ ಬಂದ ವಿದ್ಯಾರ್ಥಿಗಳನ್ನು ಒಳಗೊಂಡ ರಾಜ್ಯ ಮಟ್ಟದ ಯುವ ಸಂಸತ್ ಸಭೆಯು ಬೆಂಗಳೂರಿನಲ್ಲಿ ನಡೆಯಲಿದೆ ಎಂದ ಹೇಳಿದ ಅವರು, ಸರಕಾರದ ನಿರ್ದೇಶನದಂತೆ ತಾಲೂಕು ಹಾಗೂ ಜಿಲ್ಲಾ ಮಟ್ಟದ ಯುವ ಸಂಸತ್ತು ಸಭೆಯನ್ನು ಜಿಲ್ಲಾ ವಕೀಲರ ಸಂಘದ ಸಮನ್ವಯದೊಂದಿಗೆ ಅಚ್ಚುಕಟ್ಟಾಗಿ ನಡೆಸಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಎಎಸ್‌ಪಿ ಸುಧಾಕರ್ ನಾಯಕ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ. ಉದಯ್ ಶೆಟ್ಟಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ತಹಶೀಲ್ದಾರ್, ಇಓಗಳು ಉಪಸ್ಥಿತರಿದ್ದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X