ಪದ್ಮಶ್ರೀ ಹರೇಕಳ ಹಾಜಬ್ಬ ಹದ್ದಿನಬೆಟ್ಟು ಶ್ರೀಗಣೇಶ ಆರಾಧನೋತ್ಸವ ಪುರಸ್ಕಾರಕ್ಕೆ ಆಯ್ಕೆ

ಕೋಟ, ಸೆ.11: ಗುಂಡ್ಮಿ ಸಮೀಪದ ಹದ್ದಿನಬೆಟ್ಟು ಯಡಬೆಟ್ಟು ಸಾಮೂಹಿಕ ಶ್ರೀಗಣೇಶೋತ್ಸವ ಆರಾಧನೋತ್ಸವ ಸಮಿತಿಯ ಆಶ್ರಯದಲ್ಲಿ ಸೆ.14ರಂದು ಸಂಜೆ 7ಗಂಟೆಗೆ ಹದ್ದಿನಬೆಟ್ಟು ಪರಿಸರದಲ್ಲಿ ನಡೆಯುವ 29ನೇ ವರ್ಷದ ಶ್ರೀ ಗಣೇಶ ಆರಾಧನೋತ್ಸವ ಕಾರ್ಯಕ್ರಮದಲ್ಲಿ ಪದ್ಮಶ್ರೀ ಅಕ್ಷರಸಂತ ಹರೇಕಳ ಹಾಜಬ್ಬರಿಗೆ ಹದ್ದಿನಬೆಟ್ಟು ಆರಾಧ ನೋತ್ಸವ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ಆರಾಧನೋತ್ಸವ ಸಮಿತಿ ಅಧ್ಯಕ್ಷ ಅವಿನಾಶ್ ಶೆಟ್ಟಿ ಗುಂಡ್ಮಿ ತಿಳಿಸಿದ್ದಾರೆ.
ಈ ಪುರಸ್ಕಾರ 50ಸಾವಿರ ನಗದು ಒಳಗೊಂಡ ಶಾಶ್ವತ ಫಲಕ ನೀಡಿ ಗೌರವಿಸಲಿದೆ ಅಲ್ಲದೆ ಈ ಕಾರ್ಯಕ್ರಮದಲ್ಲಿ ಶೈಕ್ಷಣಿಕ ದತ್ತು ಸ್ವೀಕಾರ ಕಾರ್ಯಕ್ರಮದ ಅಂಗವಾಗಿ ಬ್ರಹ್ಮಾವರ ತಾಲೂಕಿನ ವ್ಯಾಪ್ತಿಯ 30 ವಿದ್ಯಾರ್ಥಿಗಳಿಗೆ 5ಸಾವಿರ ರೂ.ಗಳಂತೆ ವಿದ್ಯಾರ್ಥಿ ವೇತನ ವಿತರಣೆ, ಎರಡು ಸ್ಥಳೀಯ ಸರಕಾರಿ ಶಾಲೆಗಳ ಅತಿಥಿ ಶಿಕ್ಷಕರಿಗೆ ಒಂದು ವರ್ಷದ ಮಾಸಿಕ ಗೌರವ ವೇತನ, 6 ಜನ ಅನಾರೋಗ್ಯ ಪೀಡಿತರಿಗೆ ಸಹಾಯನಿಧಿ ವಿತರಣೆ ಜತೆಗೆ ಹಲವು ಸಾಮಾ ಜಿಕ ಕಾರ್ಯಗಳು ಈ ವೇದಿಕೆಯಲ್ಲಿ ನಡೆಯಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




