ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು

ಮಲ್ಪೆ, ಸೆ.12: ಬೋಟಿನಲ್ಲಿ ಮೀನುಗಾರಿಕೆಗೆ ಬಿಟ್ಟ ಬಲೆಯನ್ನು ಎಳೆಯುತ್ತಿದ್ದ ಮೀನುಗಾರರೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಸಮುದ್ದದ ನೀರಿಗೆ ಬಿದ್ದು ಮೃತಪಟ್ಟ ಬಗ್ಗದೆ ವರದಿಯಾಗಿದೆ.
ಮೃತರನ್ನು ಕೊಪ್ಪಳ ಜಿಲ್ಲೆಯ ಅಶೋಕ(42) ಎಂದು ಗುರುತಿಸಲಾಗಿದೆ. ಇವರು ಸೆ.8ರಂದು ಪ್ರಕಾಶ ಎಂಬವರ ಮಾಲಕತ್ವದ ಜೈ ಗಣೇಶ ಹೆಸರಿನ ಬೋಟಿನಲ್ಲಿ ಮೀನುಗಾರಿಕೆ ಕೆಲಸ ತೆರಳಿದ್ದು, ಸಮುದ್ರದ ಮಧ್ಯೆ ಬಲೆ ಎಳೆಯುತ್ತಿದ್ದಾಗ ಅಕಸ್ಮಿಕವಾಗಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದರು. ಸೆ.11 ರಂದು ಬೆಳಗ್ಗೆ ಇವರ ಮೃತದೇದ ಪತ್ತೆಯಾಗಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




