ಕರಾವಳಿಯಲ್ಲಿ ಹೈಕೋರ್ಟ್ ಪೀಠಕ್ಕಾಗಿ ಮನವಿ

ಉಡುಪಿ, ಸೆ.13: ಕರಾವಳಿ ಹೈಕೋರ್ಟ್ ಪೀಠಕ್ಕೆ ಸಂಬಂಧಿಸಿದಂತೆ ಹೋರಾಟ ಸಮಿತಿ ವತಿಯಿಂದ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಹಾಗೂ ಕಾಪು ಶಾಸಕ ಗುರ್ಮೆ ಸುರೇಶ ಶೆಟ್ಟಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.
ಮಂಗಳೂರಿನಲ್ಲಿ ಆಯೋಜನೆಗೊಂಡಿರುವ ಸೆ.18ರ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹೈಕೋರ್ಟ್ ಪೀಠ ವಿಷಯ ವನ್ನು ಸೇರಿಸಿ ಈ ಬಗ್ಗೆ ರಾಜ್ಯ ಸರಕಾರಕ್ಕೆ ನಿರ್ಣಯ ಕೈಗೊಳ್ಳುವಂತೆ ಪ್ರಯತ್ನಿಸಲು ಮನವಿಯಲ್ಲಿ ಸಲ್ಲಿಸಲಾಗಿದೆ.
ಈ ಸಂದರ್ಭದಲ್ಲಿ ಸಮಿತಿಯ ಉಡುಪಿ ಜಿಲ್ಲಾ ಸಂಚಾಲಕ ಪ್ರೇಮ್ ಪ್ರಸಾದ್ ಶೆಟ್ಟಿ, ಪ್ರಮುಖರಾದ ವಿಜಯ್ ಡಿಸೋಜ, ಮಾಧವ, ಸುರೇಶ ಕಾಮತ್, ಸರಿತಾ, ಪೌರ್ಣಮಿ ಹಾಗೂ ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಹಾಜರಿದ್ದರು.
Next Story




