ಕುಂದಾಪುರ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

ಕುಂದಾಪುರ, ಸೆ.13: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಉಡುಪಿ ಜಿಲ್ಲೆ ಮತ್ತು ಕುಂದಾಪುರ ಸಂತ ಮೇರಿಸ್ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ 2026ನೆ ಸಾಲಿನ ಕುಂದಾಪುರ ತಾಲೂಕು ಮಟ್ಟದ ಪದವಿ ಪೂರ್ವ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟವು ಕುಂದಾಪುರದ ಗಾಂಧಿ ಮೈದಾನದಲ್ಲಿ ಶನಿವಾರ ನಡೆಯಿತು.
ಕಾರ್ಯಕ್ರಮವನ್ನು ಹಂಗಳೂರು ಲಯನ್ಸ್ ಕ್ಲಬ್ ಅಧ್ಯ ಹಂಸರಾಜ ಶೆಟ್ಟಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಸೇಂಟ್ ಮೇರಿಸ್ ವಿದ್ಯಾ ಸಂಸ್ಥೆಗಳ ಜಂಟಿ ಕಾರ್ಯದರ್ಶಿ ಹಾಗೂ ರೋಜರಿ ಚರ್ಚಿನ ಪ್ರಧಾನ ಧರ್ಮಗುರು ರೆ.ಫಾ.ಪಾವ್ಲ್ ರೇಗೊ ವಹಿಸಿದ್ದರು.
ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಸುಕೇಶ್ ಶೆಟ್ಟಿ ಹೊಸಮಠ, ಉಡುಪಿ ಜಿಲ್ಲಾ ಕಬ್ಬಡ್ಡಿ ರೆಫ್ರಿ ಬೋರ್ಡಿನ ಅರುಣ್ ಕುಮಾರ್ ಶೆಟ್ಟಿ, ಹಿರಿಯ ದೈಹಿಕ ಶಿಕ್ಷಣ ನಿರ್ದೇಶಕ ಉಮೇಶ್ ಶೆಟ್ಟಿ ಉಪಸ್ಥಿತರಿದ್ದರು.
ಕುಂದಾಪುರ ತಾಲೂಕು ಪದವಿ ಪೂರ್ವ ವಿಭಾಗದ ಕ್ರೀಡಾ ಸಂಯೋಜಕ ಶ್ರೀರಾಮ್ ಶೆಟ್ಟಿ ಪ್ರಸ್ತಾವಿಕ ಮಾತುಗಳ ನ್ನಾಡಿದರು. ಕಾಲೇಜಿನ ಪ್ರಾಂಶುಪಾಲ ಫಾ.ರಾಲ್ವಿನ್ ಫರ್ನಾಂಡಿಸ್ ಸ್ವಾಗತಿಸಿದರು. ಉಪನ್ಯಾಸಕ ನಾಗರಾಜ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಶೈಕ್ಷಣಿಕ ಮಾರ್ಗದರ್ಶಕಿ ರೇಷ್ಮಾ ಫರ್ನಾಂಡಿಸ್ ವಂದಿಸಿದರು. ಸೈಂಟ್ ಮೇರಿಸ್ ಪ್ರೌಢಶಾಲೆಯ ದೈಹಿಕ ಶಿಕ್ಷಕ ಚಂದ್ರಶೇಖರ್ ಬಿಜಾಡಿ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಕರಾದ ಚಿದಾನಂದ, ಶಾಂತಿ ರಾಣಿ ಬರೆಟ್ಟೋ ಸಹಕರಿಸಿದರು.
ಬಾಲಕರ ವಿಭಾಗದಲ್ಲಿ ಜನತಾ ಪಿಯು ಕಾಲೇಜು, ಹೆಮ್ಮಾಡಿ ಪ್ರಥಮ, ಎಸ್‌ವಿ ಪಿಯು ಕಾಲೇಜು, ಗಂಗೊಳ್ಳಿ ದ್ವಿತೀಯ, ಬಾಲಕಿಯರ ವಿಭಾಗದಲ್ಲಿ ಜನತಾ ಪಿಯು ಕಾಲೇಜು, ಹೆಮ್ಮಾಡಿ ಪ್ರಥಮ, ಸರಕಾರಿ ಪಿಯು ಕಾಲೇಜು ಕುಂದಾಪುರ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.






