Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಲ್ಪೆ- ಕರಾವಳಿ ಜಂಕ್ಷನ್ ಭೂಸ್ವಾಧೀನ...

ಮಲ್ಪೆ- ಕರಾವಳಿ ಜಂಕ್ಷನ್ ಭೂಸ್ವಾಧೀನ ಪ್ರಕ್ರಿಯೆ ಚುರುಕುಗೊಳಿಸಿ: ಎನ್‌ಎಚ್ ಅಧಿಕಾರಿಗಳಿಗೆ ಸಂಸದ ಕೋಟ ಸೂಚನೆ

ವಾರ್ತಾಭಾರತಿವಾರ್ತಾಭಾರತಿ15 Sept 2026 9:09 PM IST
share
ಮಲ್ಪೆ- ಕರಾವಳಿ ಜಂಕ್ಷನ್ ಭೂಸ್ವಾಧೀನ ಪ್ರಕ್ರಿಯೆ ಚುರುಕುಗೊಳಿಸಿ: ಎನ್‌ಎಚ್ ಅಧಿಕಾರಿಗಳಿಗೆ ಸಂಸದ ಕೋಟ ಸೂಚನೆ

ಉಡುಪಿ, ಸೆ.15: ರಾಷ್ಟ್ರೀಯ ಹೆದ್ದಾರಿ 169ಎಯಲ್ಲಿ ಮಲ್ಪೆಯಿಂದ ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂ ಸ್ವಾಧೀನ ಪ್ರಕ್ರಿಯೆಯನ್ನು ಅತೀ ಶೀಘ್ರದಲ್ಲಿ ಪೂರ್ಣಗೊಳಿಸಿ ಹೆದ್ದಾರಿ ಕಾಮಗಾರಿಗಳನ್ನು ನಡೆಸುವಂತೆ ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದಾರೆ.

ಬುಧವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್‌ಹಾಲ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ 169ಎ ಕಾಮಗಾರಿಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಭೂಮಿ ಕಳೆದು ಕೊಳ್ಳುವ ಭೂಮಾಲಕರಿಗೆ ಪರಿಹಾರ ಧನ ಪಾವತಿಗೆ ಕೂಡಲೇ ಕ್ರಮ ಕೈಗೊಳ್ಳುವಂತೆಯೂ ಅವರು ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 169ಎಯಲ್ಲಿ ಮಲ್ಪೆ- ತೀರ್ಥಹಳ್ಳಿವರೆಗಿನ ಕಾಮಗಾರಿ ಜಿಲ್ಲೆಯಲ್ಲಿ ಅಂತಿಮ ಹಂತದಲ್ಲಿದೆ. ಆದರೆ ಕಾಮಗಾರಿ ನಡೆಯುತ್ತಿರುವ ಕೆಲವು ಕಡೆಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ಪೂರ್ಣ ಪ್ರಮಾಣದಲ್ಲಿ ಆಗದ ಕಾರಣ ಕಾಮಗಾರಿಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಭೂಸ್ವಾಧೀನ ಕಾರ್ಯಗಳನ್ನು ಕಂದಾಯ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಅಭಿಯಂತರ ಇಲಾಖೆ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಿ ಪೂರ್ಣ ಗೊಳಿಸಬೇಕು ಎಂದರು.

ಭೂಮಾಲಕರು ವೈಜ್ಞಾನಿಕವಾಗಿ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸುತ್ತಿದ್ದಾರೆ. ಹೆದ್ದಾರಿ ಕಾಮಗಾರಿ ವಿಳಂಬ ಗತಿಯಲ್ಲಿ ಸಾಗುತ್ತಿರುವುದು ಸರಿಯಲ್ಲ. ಪದೇ ಪದೇ ಸಭೆ ಕರೆದು ಸಮಸ್ಯೆ ಬಗ್ಗೆ ಚರ್ಚಿಸಿದರೂ ಅಧಿಕಾರಿಗಳು ನಿರ್ಲಕ್ಷ್ಯತೋರುತ್ತಿರುವುದು ಸರಿಯಲ್ಲ ಎಂದರು.

ನೆನೆಗುದಿಗೆ ಬಿದ್ದಿರುವ ಪರ್ಕಳ ಭೂಸ್ವಾಧೀನ ಪ್ರಕ್ರಿಯೆಯಲ್ಲಿ 8.25 ಕೋಟಿ ರೂ. ಅನ್ನು ಕೋರ್ಟ್‌ಗೆ ಜಮಾ ಮಾಡಲಾಗಿದೆ. 13 ಜನರಿಗೆ ಸಂಬಂಧಿಸಿದ 419ಮೀ.ನಲ್ಲಿ ಒಬ್ಬರು ಮಾತ್ರ ಕೋರ್ಟ್‌ಗೆ ಹೋಗಿದ್ದು, ಈ ಬಗ್ಗೆ ಮರು ಸರ್ವೆ ಮಾಡಿ ಸಮಸ್ಯೆ ಇತ್ಯರ್ಥಗೊಳಿಸಿ ಕಾಮಗಾರಿ ಪ್ರಾರಂಭಿಸಲು ಸೂಚನೆ ನೀಡಿದರು.

ಹಿರಿಯಡ್ಕದಿಂದ ಪೆರ್ಡೂರುವರೆಗೆ ಬಾಕಿ ಇದ್ದ 2.69 ಕಿ.ಮೀ. ಭಾಗ ಸ್ವಾಧೀನವಾಗಿದೆ. ಹೆಬ್ರಿಯ ಪಾಡಿಗಾರು ಪ್ರದೇಶದಲ್ಲಿ 1.4 ಕಿ.ಮೀ. ಪ್ರದೇಶದಲ್ಲಿ ಅರಣ್ಯ ಇಲಾಖೆ ಮರ ಕಡಿಯಲು ಅನುಮತಿ ನೀಡಿದೆ. ಆದರೆ ಮರ ತೆರವು ಕಾರ್ಯ ಬಾಕಿ ಇದೆ. ಮರಗಳ ತೆರವು ಕಾರ್ಯವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಪೂರ್ಣಗೊಳಿಸಬೇಕೆಂದು ದೂರವಾಣಿ ಮೂಲಕ ಸಂಸದರು ಸೂಚನೆ ನೀಡಿದರು.

ಹೆಬ್ರಿಯಿಂದ ಆಗುಂಬೆ ಘಾಟಿವರೆಗೆ ಕಾಮಗಾರಿಗೆ 72 ಕೋಟಿ ಬಿಡುಗಡೆ ಯಾಗಿದೆ. ಹೆಬ್ರಿ ಬಳಿಕ ಆಗುಂಬೆವರೆಗೆ ಕಾಮಗಾರಿಗೆ ಡಿಪಿಆರ್‌ನ್ನು ತ್ವರಿತವಾಗಿ ತಯಾರಿಸಿ, ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದರು.

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮಾತನಾಡಿ, ಭೂಸ್ವಾಧೀನ ಆದ ಭೂ ಮಾಲಕರಿಗೆ ನೋಟಿಸ್ ನೀಡಿ, ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣ ಗಳನ್ನು ಶೀಘ್ರ ಇತ್ಯರ್ಥಗೊಳಿಸಿ. ವಿನಾಕಾರಣ ಕಾಮಗಾರಿಯಲ್ಲಿ ವಿಳಂಬ ತೋರಿಸಬಾರದು ಎಂದರು.

ಕಲ್ಮಾಡಿಯಿಂದ ಮಲ್ಪೆ ಬಂದರುವರೆಗಿನ 1.18 ಕಿ.ಮೀ. ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದೆ. ನಾಳೆಯಿಂದಲೇ ಕಾಮಗಾರಿ ಪ್ರಾರಂಭಿಸಬೇಕು ಎಂದು ಅವರು ಅಭಿಯಂತರರಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಕಾರ್ಕಳ ಶಾಸಕ ಸುನಿಲ್ ಕುಮಾರ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಕುಂದಾಪುರ ಸಹಾಯಕ ಕಮಿಷನರ್ ರಶ್ಮಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯಕ್, ನಗರಸಭೆ ಪೌರಾಯುಕ್ತ ಮಹಾಂತೇಶ್ ಹಂಗರಗಿ, ಶೃಂಗೇರಿ- ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರರು ಹಾಗೂ ಇತರರು ಉಪಸ್ಥಿತರಿದ್ದರು.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X