Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಹಕಾರಿ ಸಂಸ್ಥೆಗಳಲ್ಲಿ ಕಾಲಕ್ಕೆ ತಕ್ಕಂತೆ...

ಸಹಕಾರಿ ಸಂಸ್ಥೆಗಳಲ್ಲಿ ಕಾಲಕ್ಕೆ ತಕ್ಕಂತೆ ಬದಲಾವಣೆ ಅಗತ್ಯ: ಜಯಕರ ಶೆಟ್ಟಿ ಇಂದ್ರಾಳಿ

ವಾರ್ತಾಭಾರತಿವಾರ್ತಾಭಾರತಿ16 Sept 2026 7:06 PM IST
share
ಸಹಕಾರಿ ಸಂಸ್ಥೆಗಳಲ್ಲಿ ಕಾಲಕ್ಕೆ ತಕ್ಕಂತೆ ಬದಲಾವಣೆ ಅಗತ್ಯ: ಜಯಕರ ಶೆಟ್ಟಿ ಇಂದ್ರಾಳಿ

ಉಡುಪಿ, ಸೆ.17: ಸಹಕಾರಿ ಕ್ಷೇತ್ರದಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹಲವು ಬದಲಾವಣೆಗಳನ್ನು ತರುತ್ತಿದ್ದು, ಸಹಕಾರಿ ಸಂಸ್ಥೆಗಳು ಕಾಲಕ್ಕೆ ತಕ್ಕಂತೆ ಬದಲಾಗಬೇಕು. ಆಧುನಿಕ ವ್ಯವಸ್ಥೆಗಳನ್ನು ಅಳವಡಿಸಿಕೊಂಡು ಸೇವೆ ನೀಡದಿದ್ದರೆ ಖಾಸಗಿ ಹಾಗೂ ವಾಣಿಜ್ಯ ಬ್ಯಾಂಕ್‌ಗಳ ಪೈಪೋಟಿ ನಡುವೆ ವ್ಯವಹಾರ ನಡೆಸುವುದು ಕಷ್ಟವಾ ಗಲಿದೆ ಎಂದು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಹೇಳಿದ್ದಾರೆ.

ಉಡುಪಿಯ ಅಜ್ಜರಕಾಡು ಪುರಭವನದ ಮಿನಿ ಹಾಲ್‌ನಲ್ಲಿ ಬುಧವಾರ ನಡೆದ ಉಡುಪಿ ಜಿಲ್ಲಾ ಸಹಕಾರ ಯೂನಿಯನ್‌ನ 2025-26ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಎಲ್ಲ ಸಹಕಾರಿ ಸಂಸ್ಥೆಗಳು ವಿವಿಧೋದ್ದೇಶ ಸಹಕಾರಿ ಸಂಸ್ಥೆಗಳಾಗಿ ಪರಿವರ್ತನೆಗೊಂಡು ಹೆಚ್ಚಿನ ರೀತಿಯ ವ್ಯವಹಾರ ಹಾಗೂ ಸೇವೆಗಳನ್ನು ಒದಗಿಸುವುದು ಸರಕಾರದ ಉದ್ದೇಶವಾಗಿದೆ. ಪ್ರಸ್ತುತ ಠೇವಣಿ ಸ್ವೀಕರಿಸಿ ಅಗತ್ಯವಿರುವವರಿಗೆ ಸಾಲ ನೀಡುವುದು ಸಹಕಾರಿ ಸಂಸ್ಥೆಗಳ ಪ್ರಮುಖ ವ್ಯವಹಾರವಾಗಿದೆ. ಆದರೆ, ಮುಂದಿನ ದಿನಗಳಲ್ಲಿ ಜನರ ವಿವಿಧ ಅಗತ್ಯತೆಗಳಿಗೆ ಬೇಕಾದ ಸೌಲಭ್ಯಗಳನ್ನು ಸಹಕಾರಿ ಸಂಸ್ಥೆಗಳ ಮೂಲಕವೇ ಒದಗಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುತ್ತಿದೆ. ಇದಕ್ಕೆ ಪೂರಕವಾಗಿ ಸಹಕಾರಿ ಸಂಸ್ಥೆಗಳು ಸಿದ್ಧಗೊಳ್ಳಬೇಕು ಎಂದರು.

ಖಾಸಗಿ ಹಾಗೂ ವಾಣಿಜ್ಯ ಬ್ಯಾಂಕ್‌ಗಳ ಪೈಪೋಟಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಹಕಾರಿ ಸಂಸ್ಥೆಗಳು ತಂತ್ರಜ್ಞಾನ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಅಪ್‌ಡೇಟ್ ಆಗಬೇಕು. ಕಾಲಕ್ಕೆ ತಕ್ಕ ಬದಲಾವಣೆಗಳನ್ನು ತಮ್ಮ ಸಂಸ್ಥೆಗಳಲ್ಲಿ ಅನುಷ್ಠಾನಗೊಳಿಸುವ ಮೂಲಕ ಸದಸ್ಯರಿಗೆ ಉತ್ತಮ ಸೇವೆ ನೀಡುವುದರೊಂದಿಗೆ ಸಹಕಾರಿ ಸಂಸ್ಥೆಗಳ ಬೆಳವಣಿ ಗೆಗೆ ಶ್ರಮಿಸಬೇಕು. ಈ ಮೂಲಕ ಸಹಕಾರಿ ಕ್ಷೇತ್ರದಲ್ಲಿ ಉಡುಪಿ ಜಿಲ್ಲೆಯನ್ನು ಉತ್ತಮ ಜಿಲ್ಲೆಯನ್ನಾಗಿ ರೂಪಿಸಬೇಕು ಎಂದು ಅವರು ತಿಳಿಸಿದರು.

ಸಭೆಯನ್ನು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಹಾಗೂ ಶಾಸಕ ಯಶ್ಪಾಲ್ ಸುವರ್ಣ ಉದ್ಘಾಟಿಸಿ ದರು. ಈ ಸಂದರ್ಭದಲ್ಲಿ 72ನೇ ಅಖಿಲ ಭಾರತ ಸಹಕಾರಿ ಸಪ್ತಾಹಕ್ಕೆ ಸಹಯೋಗ ವಹಿಸಿಕೊಂಡ ಸಹಕಾರ ಸಂಘಗಳನ್ನು ಸನ್ಮಾನಿಸಲಾಯಿತು.

ಸಹಕಾರ ಸಂಘಗಳ ಉಪನಿಬಂಧಕಿ ಲಾವಣ್ಯ, ಯೂನಿಯನ್ ಉಪಾಧ್ಯಕ್ಷ ಅಶೋಕ್ ಕುಮಾರ್ ಬಲ್ಲಾಳ್, ನಿರ್ದೇಶಕ ರಾದ ಎಚ್. ಗಂಗಾಧರ ಶೆಟ್ಟಿ, ಸುಧೀರ್ ವೈ., ಅನಿಲ್ ಎಸ್.ಪೂಜಾರಿ, ಪ್ರಸಾದ್ ಎಸ್. ಶೆಟ್ಟಿ, ಎನ್.ಮಂಜಯ್ಯ ಶೆಟ್ಟಿ, ಬಿ.ಪ್ರದೀಪ್ ಯಡಿಯಾಳ, ಅರುಣ್ ಕುಮಾರ್ ಹೆಗ್ಡೆ, ಬಿ. ಕರುಣಾಕರ ಶೆಟ್ಟಿ, ಸುರೇಶ್ ರಾವ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಅಶೋಕ್ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನುಷಾ ಕೋಟ್ಯಾನ್ ವಾರ್ಷಿಕ ವರದಿ ಮಂಡಿಸಿದರು. ನಿರ್ದೇಶಕ ಹರೀಶ್ ಕಿಣಿ ಅಲೆವೂರು ವಂದಿಸಿದರು. ನಿರ್ದೇಶಕ ಶ್ರೀಧರ ಪಿ.ಎಸ್. ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X