Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು...

ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ವಾರ್ತಾಭಾರತಿವಾರ್ತಾಭಾರತಿ16 Sept 2026 8:04 PM IST
share
ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಉಡುಪಿ, ಸೆ.17: ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ ಹಕ್ಕಿನ ಸಮಸ್ಯೆಗೆ ಅಂತಿಮ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ರಾಜ್ಯ ಸಂಘಟನಾ ಸಮಿತಿಯ ನಿಯೋಗವು ಬೆಂಗಳೂರಿನ ಲಕ್ಕಸಂದ್ರದಲ್ಲಿರುವ ಅರಣ್ಯ, ಪರಿಸರ ಮತ್ತು ಪರಿಸರಶಾಸ್ತ್ರ ಸಚಿವ ರಾಮಲಿಂಗಾರೆಡ್ಡಿ ಅವರ ನಿವಾಸದಲ್ಲಿ ಅವರನ್ನು ಭೇಟಿ ಮಾಡಿ ಅಹವಾಲು ಸಲ್ಲಿಸಿತು.

ಆಲೂರು ಹಾಗೂ ಹರ್ಕೂರು ಗ್ರಾಮದ ಡಿಸಿ ಮನ್ನಾ ಭೂಮಿಯನ್ನು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಈಕ್ವಿಟಿ/ಗುತ್ತಿಗೆ ನವೀಕರಣದಿಂದ ಕೈಬಿಟ್ಟು, ಕೊರಗ ಕುಟುಂಬಗಳಿಗೆ ಭೂಮಿ ಒದಗಿಸುವಂತೆ ನಿಯೋಗವು ಮನವಿ ಮಾಡಿತು.

ಈ ಕುರಿತು ಸಚಿವ ರಾಮಲಿಂಗಾರೆಡ್ಡಿಯವರು ಸಕಾರಾತ್ಮಕವಾಗಿ ಸ್ಪಂದಿಸಿ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಈಕ್ವಿಟಿ/ಗುತ್ತಿಗೆ ನವೀಕರಣ ಸಂದರ್ಭದಲ್ಲಿ ಆಲೂರು ಮತ್ತು ಹರ್ಕೂರು ಗ್ರಾಮದ ಡಿಸಿ ಮನ್ನಾ ಭೂಮಿಯನ್ನು ಕೈಬಿಡುವ ಕುರಿತು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಜಿಲ್ಲಾಡಳಿತದಿಂದ ಅಗತ್ಯ ಪ್ರಸ್ತಾವನೆ ರಾಜ್ಯ ಸರಕಾರಕ್ಕೆ ಬಂದ ಕೂಡಲೇ ಈ ಪ್ರಕರಣದಲ್ಲಿ ಕ್ರಮ ವಹಿಸುವುದಾಗಿ ಸಚಿವರು ತಿಳಿಸಿದರು.

ಇದೇ ಸಂದರ್ಭದಲ್ಲಿ, ಕೊರಗ, ಹಸ್ಲರ್, ಹಸಲ, ಕುಣುಬಿ, ಹಾಲಕ್ಕಿ ಸೇರಿದಂತೆ ಅರಣ್ಯ ಆಧಾರಿತ ಬುಡಕಟ್ಟು ಸಮುದಾಯಗಳ ವಿವಿಧ ಸಮಸ್ಯೆಗಳ ಇತ್ಯರ್ಥಕ್ಕಾಗಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಶೀಘ್ರದಲ್ಲೇ ಸಭೆ ನಡೆಸಲಾಗುವುದು ಎಂದು ಸಚಿವರು ತಿಳಿಸಿದರು.

ಅರಣ್ಯ ಆಧಾರಿತ ಬುಡಕಟ್ಟು ಸಮುದಾಯಗಳ ಅರಣ್ಯ ಹಕ್ಕು ಮತ್ತು ಅರಣ್ಯ ಸಂಪನ್ಮೂಲಗಳ ಹಕ್ಕುಗಳನ್ನು ರಕ್ಷಿಸಲು ಸರ್ಕಾರ ಬದ್ಧವಾಗಿದೆ ಎಂದು ಸಚಿವರು ಭರವಸೆ ನೀಡಿದರು.

ಅದೇ ರೀತಿ ಕಸ್ತೂರಿರಂಗನ್ ವರದಿ ಕುರಿತು ವಿಶೇಷ ಅಧಿವೇಶನದಲ್ಲಿ ಚರ್ಚೆ ನಡೆಯಲಿದ್ದು, ಜನರ ಹಕ್ಕುಗಳು ಮತ್ತು ಬದುಕಿನ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಜನಪರವಾದ ನಿರ್ಧಾರವನ್ನು ಅಧಿವೇಶನದಲ್ಲಿ ಕೈಗೊಳ್ಳಲಾಗು ವುದು ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ನಿಯೋಗದಲ್ಲಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ರಾಜ್ಯ ಸಂಘಟನಾ ಸಮಿತಿ ಸಹ ಸಂಚಾಲಕ ಶ್ರೀಧರ ನಾಡ, ಡಾ.ಎಸ್.ವೈ. ಗುರುಶಾಂತ್, ಉತ್ತರ ಕನ್ನಡ ಜಿಲ್ಲೆಯ ಕಾರ್ಮಿಕ ಸಂಘಟನೆಯ ಮುಖಂಡರಾದ ಯಮುನಾ ಗಾವಂಕರ್, ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡ ಟಿ.ಯಶವಂತ್, ಸಿಪಿಎಂ ಪಕ್ಷದ ರಾಜ್ಯ ಕಾರ್ಯದರ್ಶಿ ಕೆ. ಪ್ರಕಾಶ್, ಸಿಪಿಎಂ ರಾಜ್ಯ ಸಮಿತಿ ಸದಸ್ಯ ಬಾಲಕೃಷ್ಣ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X