ಪ್ರತ್ಯೇಕ ಪ್ರಕರಣ; ಇಬ್ಬರು ಆತ್ಮಹತ್ಯೆ

ಶಂಕರನಾರಾಯಣ, ಸೆ.19: ಪತ್ನಿಯ ಮರಣದ ಬಳಿಕ ಮಾನಸಿಕವಾಗಿ ಕುಗ್ಗಿದ್ದ ಕುಂದಾಪುರ ತಾಲೂಕು ಆಜ್ರಿ ನಿವಾಸಿ ಎ.ಸುಂದರ (63) ಎಂಬವರು ರಬ್ಬರ್ ತೋಟಕ್ಕೆ ಬಳಸುವ ಆಸಿಡ್ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸುಂದರ್ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡಿದ್ದರು. ಪುತ್ರ ಗಣೇಶ್ ನೀಡಿದ ದೂರಿನಂತೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿರಿಯಡ್ಕ: ವ್ಯಕ್ತಿಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ನೇಣಿಗೆ ಶರಣಾದ ಘಟನೆ ಹಿರಿಯಡ್ಕ ಬೊಮ್ಮರಬೆಟ್ಟು ಗ್ರಾಮ ಮಾಣೈ ಬೋರ್ಗಲ್ ಗುಡ್ಡೆ ಎಂಬಲ್ಲಿ ನಡೆದಿದೆ. ಸಾಧು ಕುಲಾಲ್ (51) ಮೃತರು. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




