ಕೊಲೆ ಬೆದರಿಕೆ ಆರೋಪ: ದೂರು ದಾಖಲು

ಕುಂದಾಪುರ, ಸೆ.19: ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಹಲ್ಲೆ ನಡೆಸಿದ್ದಲ್ಲದೆ ಕೊಲೆಬೆದರಿಕೆ ಹಾಕಿದ ಬಗ್ಗೆ ಮಧು ಕೆ. ಎನ್ನುವರು ಕೋಟ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ತೆಕ್ಕಟ್ಟೆ ಸಮೀಪದ ಕಣ್ಣುಕೆರೆಯ ಗಣೇಶ ವಿಸರ್ಜನಾ ಮೆರವಣಿಗೆ ತೆರಳಿದ್ದಾಗ ಕ್ಷುಲ್ಲಕ ಕಾರಣವನ್ನಿಟ್ಟುಕೊಂಡು ವಿಶುಕುಮಾರ್ ಎಂಬಾತ ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿರುವುದಾಗಿ ಆರೋಪಿಸಲಾಗಿದೆ. ಈ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




