Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ವಿಶ್ವ ಹಿರಿಯ ನಾಗರಿಕರ ದಿನಾಚರಣೆ:...

ವಿಶ್ವ ಹಿರಿಯ ನಾಗರಿಕರ ದಿನಾಚರಣೆ: ಪೂರ್ವಭಾವಿ ಸಭೆ

ವಾರ್ತಾಭಾರತಿವಾರ್ತಾಭಾರತಿ21 Sept 2026 7:50 PM IST
share
ವಿಶ್ವ ಹಿರಿಯ ನಾಗರಿಕರ ದಿನಾಚರಣೆ: ಪೂರ್ವಭಾವಿ ಸಭೆ

ಉಡುಪಿ, ಸೆ.21: ವಿಶ್ವ ಹಿರಿಯ ನಾಗರಿಕ ದಿನಾಚರಣೆ ಹಾಗೂ ಹಿರಿಯ ನಾಗರಿಕರ ರಾಜ್ಯ ಕ್ರಿಯಾ ಯೋಜನೆ ಯಡಿಯಲ್ಲಿ ವಿವಿಧ ಕಾರ್ಯಕ್ರಮ ಆಯೋಜನೆ ಕುರಿತು ಚರ್ಚಿಸುವ ಸಲುವಾಗಿ ಪೂರ್ವಭಾವಿ ಸಭೆಯು ಇಂದು ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಕೆಸ್ವಾನ್ ವೀಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರೇಮಮೂರ್ತಿ ಕೆ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಜಿಲ್ಲಾ ಮಟ್ಟದಲ್ಲಿ ಅಕ್ಟೋಬರ್ 1ರಂದು ನಗರದ ಬನ್ನಂಜೆ ನಾರಾಯಣಗುರು ಸಭಾಭವನದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿದ್ದು, ಅಂದು ಬೆಳಗ್ಗೆ 9:00ರಿಂದ ಹಿರಿಯ ನಾಗರಿಕರ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ ಎಂದರು.

ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಸೆಪ್ಟೆಂಬರ್ 28ರಂದು ಬೆಳಗ್ಗೆ 9ರಿಂದ ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಹಿರಿಯ ನಾಗರಿಕರಿಗೆ ಬಿರುಸಿನ ನಡಿಗೆ, ಬಕೆಟ್‌ಗೆ ಬಾಲ್ ಎಸೆಯುವುದು, ಕೇರಂ ಹಾಗೂ ರಂಗೋಲಿ ಸ್ಪರ್ಧೆಗಳು ಮತ್ತು ಸಾಂಸ್ಕೃತಿಕ ವಿಭಾಗದಲ್ಲಿ ಪುರುಷ ಹಾಗೂ ಮಹಿಳಾ ಹಿರಿಯ ನಾಗರಿಕರಿಗೆ ಗಾಯನ ಹಾಗೂ ಏಕ ಪಾತ್ರಾಭಿನಯ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಸ್ಪರ್ಧೆಗಳಲ್ಲಿ ಭಾಗವಹಿ ಸುವಂತೆ ನೋಡಿಕೊಳ್ಳಬೇಕು ಎಂದ ಅವರು ಕ್ರೀಡಾಕೂಟಗಳು ನಡೆಯುವ ದಿನದಂದು ಹಿರಿಯ ನಾಗರಿಕರಿಗೆ ತುರ್ತು ಚಿಕಿತ್ಸೆ ನೀಡಲು ಪ್ರಥಮ ಚಿಕಿತ್ಸಾ ಕಿಟ್‌ಗಳನ್ನು ಸ್ಥಳದಲ್ಲಿ ಇಟ್ಟುಕೊಳ್ಳಬೇಕು ಎಂದರು.

ಜಿಲ್ಲಾ ಮಟ್ಟದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯಂದು ಸಭಾ ಕಾರ್ಯಕ್ರಮದ ನಂತರ ಬಾಂಡಿಂಗ್ ಮೇಳ ಆಯೋಜಿಸಲಾಗುತ್ತಿದ್ದು, ಇದರಲ್ಲಿ ಮೂರು ತಲೆಮಾರುಗಳ ಪ್ರತಿನಿಧಿಗಳಾದ ಹಿರಿಯ ನಾಗರಿಕರು, ಪೋಷಕರು/ಮಧ್ಯಮ ವಯಸ್ಕರು ಹಾಗೂ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಒಂದೇ ವೇದಿಕೆಯಲ್ಲಿ ಸಂವಾದ ಕಾರ್ಯಕ್ರಮ ನಡೆಯಲಿದೆ.

ಹಿರಿಯ ನಾಗರಿಕರು ತಮ್ಮ ಜೀವನ ಮೌಲ್ಯಗಳು, ವಿಚಾರಧಾರೆ, ಉಡುಗೆ-ತೊಡುಗೆ, ಆಹಾರದ ಪದ್ಧತಿ ಮಹತ್ವ ಸೇರಿದಂತೆ ಮತ್ತಿತರ ವಿಷಯಗಳ ಕುರಿತು ಮಾಹಿತಿ ಹಂಚಿಕೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಶತಾಯುಷಿಗಳನ್ನು ಸಹ ಸನ್ಮಾನ ಮಾಡಲಾಗುವುದು ಎಂದು ಪ್ರೇಮಮೂರ್ತಿ ತಿಳಿಸಿದರು.

ಹಿರಿಯ ನಾಗರಿಕರಿಗೆ ಯಾವುದೇ ಕುಂದುಕೊರತೆ ಉಂಟಾಗದಂತೆ ಕುಡಿಯುವ ನೀರು, ಊಟೋಪಚಾರ, ಆಸನ ಸೇರಿದಂತೆ ಎಲ್ಲ ಮೂಲಭೂತ ಅವಶ್ಯಕತೆಗಳ ಪಟ್ಟಿ ಮಾಡಿ ವಿವಿಧ ಇಲಾಖೆ ಹಾಗೂ ಸ್ವಯಂ ಸೇವಾ ಸಂಘಟನೆಗಳ ಸಹಯೋಗದೊಂದಿಗೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಬೇಕು. ಹಿರಿಯ ನಾಗರಿಕರ ಕುರಿತು ಉಪನ್ಯಾಸ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು ಎಂದ ಅವರು, ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಅಂಗಕಲರ ಕಲ್ಯಾಣಾಧಿಕಾರಿ ರತ್ನ, ಧಾರ್ಮಿಕ ಮತ್ತು ದತ್ತಿ ಇಲಾಖೆಯ ಸಹಾಯಕ ಆಯುಕ್ತೆ ಟಿ.ಎನ್ ಮಂಜುಳಾ, ಲೀಡ್ ಬ್ಯಾಂಕ್ ಮ್ಯಾನೇಜರ್ ಹರೀಶ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು, ಲೀಡ್ ಕಾಲೇಜು ಪ್ರಾಂಶುಪಾಲೆ ಡಾ. ನಿಕೇತನಾ, ಹಿರಿಯ ನಾಗರಿಕರ ಜಿಲ್ಲಾ ಒಕ್ಕೂಟದ ಅಧ್ಯಕ್ಷ ವಿಶ್ವನಾಥ ಹೆಗಡೆ, ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X