ಶಾಲಾ ಶಿಕ್ಷಕರ ಪರೀಕ್ಷಾ ಪೂರ್ವ ತರಬೇತಿ: ಉಚಿತ ಕಾರ್ಯಾಗಾರದ ಸಮಾರೋಪ

ಕೋಟ, ಸೆ.21: ಶೈನ್ ಕೋಚಿಂಗ್ ಸೆಂಟರ್ ಕೋಟ ಇವರ ಸಹಯೋಗ ದೊಂದಿಗೆ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರು, ದೈಹಿಕ ಶಿಕ್ಷಕರು ಹಾಗೂ ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆಯೋಜಿ ಸಲಾಗಿದ್ದ ಶಾಲಾ ಶಿಕ್ಷಕರ ಪರೀಕ್ಷಾ ಪೂರ್ವ ಉಚಿತ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭವು ಸೆ.20ರಂದು ಕೋಟ ಶಿವರಾಮ ಕಾರಂತ ಥೀಂ ಪಾರ್ಕ್‌ನಲ್ಲಿ ನಡೆಯಿತು.
ತರಬೇತಿ ಕಾರ್ಯಾಗಾರದಲ್ಲಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಲಿಖಿತ ಪರೀಕ್ಷೆಯನ್ನು ಆಯೋಜಿಸಲಾಗಿದ್ದು, ಲಿಖಿತ ಪರೀಕ್ಷೆಯಲ್ಲಿ ಮಂಗಳೂರು ಗುರುಪುರದ ನೇಹಾ ಅವರು ಅತ್ಯಧಿಕ ಅಂಕಗಳನ್ನು ಗಳಿಸಿದರು. ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಸಮಾರೋಪ ಸಮಾರಂಭವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕೋಟದ ಗೀತಾನಂದ ಫೌಂಡೇಶನ್ ಟ್ರಸ್ಟ್‌ನ ಪ್ರವರ್ತಕರಾದ ಆನಂದ್ ಸಿ. ಕುಂದರ್, ಉದ್ಯಮಿಗಳುದ ಬೆಳ್ವೆಯ ಗಣೇಶ್ ಕಿಣಿ, ಡಯಟ್ ಉಡುಪಿ ಪ್ರಾಂಶುಪಾಲ ಅಶೋಕ್ ಕಾಮತ್ ಹಾಗೂ ಬ್ರಹ್ಮಾವರ ತಾಲೂಕು ಪಂಚಾಯತ್‌ನ ಯೋಜನಾ ನಿರ್ದೇಶಕ ಸಂದೇಶ ಶೆಟ್ಟಿ ಉಪಸ್ಥಿತರಿದ್ದರು.
ಶೈನ್ ಕೋಚಿಂಗ್ ಸೆಂಟರ್‌ನ ನಿರ್ದೇಶಕ ಹರೀಶ್ ಕುಮಾರ್ ಶೆಟ್ಟಿ ಕಾರ್ಯಕ್ರಮದ ನಿರೂಪಿಸಿದರೆ, ವಿವೇಕ್ ಅಮೀನ್ ಸ್ವಾಗತಿಸಿ, ಗಿರೀಶ್ ಕುಮಾರ್ ಶೆಟ್ಟಿ ವಂದಿಸಿದರು.






