Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲಾಸ್ಪತ್ರೆ ಲೋಕಾರ್ಪಣೆಗೆ...

ಉಡುಪಿ ಜಿಲ್ಲಾಸ್ಪತ್ರೆ ಲೋಕಾರ್ಪಣೆಗೆ ಆರೋಗ್ಯ ಸಚಿವರಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ22 Sept 2026 6:58 PM IST
share
ಉಡುಪಿ ಜಿಲ್ಲಾಸ್ಪತ್ರೆ ಲೋಕಾರ್ಪಣೆಗೆ ಆರೋಗ್ಯ ಸಚಿವರಿಗೆ ಮನವಿ

ಉಡುಪಿ: ಉಡುಪಿ ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ ಲೋಕಾರ್ಪಣೆ ಹಾಗೂ ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಗೆ ಮೇಲ್ದರ್ಜೆಗೇರಿಸುವಂತೆ ಆಗ್ರಹಿಸಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಆರೋಗ್ಯ ಸಚಿವ ಯು.ಟಿ. ಖಾದರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಉಡುಪಿ ಜಿಲ್ಲೆಯು ಜನತೆಯ ಬಹುಕಾಲದ ಕನಸಾದ ಜಿಲ್ಲಾಸ್ಪತ್ರೆಯ ನಿರ್ಮಾಣ ಕಾಮಗಾರಿಯನ್ನು ಡಿಸೆಂಬರ್ 2021ರಲ್ಲಿ ಪ್ರಾರಂಭಿಸಲಾಗಿದ್ದು, ಪ್ರಸ್ತುತ ಕಾಮಗಾರಿಯು ಮುಕ್ತಾಯದ ಹಂತದಲ್ಲಿದೆ. ಬಾಕಿ ಕಾಮಗಾರಿ ಯನ್ನು ಶೀಘ್ರ ಪೂರ್ಣಗೊಳಿಸಿ, ಜಿಲ್ಲಾಸ್ಪತ್ರೆಯನ್ನು ಪೂರ್ಣ ಪ್ರಮಾಣದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಮತ್ತು ಚಿಕಿತ್ಸೆ ಗಳನ್ನು ಒಳಗೊಂಡಂತೆ ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಿ 250 ಹಾಸಿಗೆಗಳ ಸೌಕರ್ಯ ಗಳನ್ನೊಳಗೊಂಡ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಆರೋಗ್ಯ ಸೇವೆಗಾಗಿ ಶೀಘ್ರವಾಗಿ ಲೋಕಾರ್ಪಣೆಗೊಳಿಸುವಂತೆ ಸಚಿವರಿಗೆ ಮನವಿ ಮಾಡಿದರು.

ಉಡುಪಿ ಜಿಲ್ಲೆಯ ಬ್ರಹ್ಮಾವರವು ನೂತನ ತಾಲೂಕಾಗಿ ರಚನೆಯಾಗಿ ಸುಮಾರು ಎಂಟು ವರ್ಷಗಳು ಕಳೆದಿದ್ದು, ತಾಲೂಕು ಕೇಂದ್ರವಾಗಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ಬ್ರಹ್ಮಾವರ ಪಟ್ಟಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರವು ತಾಲೂಕಿನ 30ಕ್ಕೂ ಅಧಿಕ ಗ್ರಾಮಗಳ ಜನರಿಗೆ ಪ್ರಮುಖ ಆರೋಗ್ಯ ಸೇವೆ ಒದಗಿಸುತ್ತಿದ್ದು, ತಾಲೂಕಿನ ತಾಲೂಕಿನ ಜನರಿಗೆ ಸಮಗ್ರ ಹಾಗೂ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಸ್ಥಳೀಯ ವಾಗಿಯೇ ಒದಗಿಸುವ ನಿಟ್ಟಿನಲ್ಲಿ, ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲೂಕು ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿಸುವಂತೆ ಸಚಿವರಿಗೆ ಮನವಿ ಮಾಡಿದರು.

ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ, ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸಮರ್ಪಕ ನಿರ್ವಹಣೆಗೆ ಅಗತ್ಯ ಅನುದಾನ ಮಂಜೂರು ಹಾಗೂ ಕೂಸಮ್ಮ ಶಂಭು ಶೆಟ್ಟಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮುಂಭಾಗದಲ್ಲಿ ಪಿಪಿಪಿ ಮಾದರಿಯಲ್ಲಿ ಬಿ.ಆರ್.ಶೆಟ್ಟಿ ಹೈಟೆಕ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಕಾಮಗಾರಿಯ ಉದ್ದೇಶಕ್ಕೆ ಭೂಮಿಯ ಕೆಲಸ ಪ್ರಾರಂಭಿಸಿ ಕಟ್ಟಡದ ಪಾರ್ಕಿಂಗ್ ಉದ್ದೇಶಕ್ಕೆ ಸುಮಾರು 30 ಅಡಿಗಳಿಗೂ ಹೆಚ್ಚು ಅಗೆತ ಮಾಡಿ ರುವ ಪ್ರದೇಶದಲ್ಲಿ ವಾಹನಗಳ ಪಾರ್ಕಿಂಗ್ ಮತ್ತು ಸರಕಾರಿ ನರ್ಸಿಂಗ್ ಹಾಗೂ ಪ್ಯಾರಾ ಮೆಡಿಕಲ್ ಕಾಲೇಜು ಸ್ಥಾಪನೆಗೆ ವಿಶೇಷ ಮುತುವರ್ಜಿ ವಹಿಸುವಂತೆ ಸಚಿವರಿಗೆ ತಿಳಿಸಿದರು. ಶಾಸಕರ ಮನವಿಗೆ ಸ್ಪಂದಿಸಿದ ಸಚಿವ ಯು.ಟಿ.ಖಾದರ್ ಬೇಡಿಕೆಗಳ ಬಗ್ಗೆ ಅಗತ್ಯ ಕ್ರಮ ವಹಿಸುವ ಭರವಸೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X