ಯುವತಿ ನಾಪತ್ತೆ

ಉಡುಪಿ, ಸೆ.22: ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ ಹೊಲಿಗೆ ತರ ಬೇತಿ ಕಲಿಯುತ್ತಿದ್ದ ನಗರದ ಎಂಜಿಎಂ ಬಳಿಯ ನಿವಾಸಿ ಭಾಗ್ಯಶ್ರೀ ಶರಣಪ್ಪ ಮಾದರ (21) ಎಂಬ ಯುವತಿ ಸೆ.12ರಂದು ಬೆಳಗ್ಗೆ 11:30ರ ಸುಮಾರಿಗೆ ಟೈಲರಿಂಗ್ ಕ್ಲಾಸ್‌ಗೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
5 ಅಡಿ ಎತ್ತರ, ಸಪೂರ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2520444, ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಪೊಲೀಸ್ ನಿರೀಕ್ಷಕರು ಮೊ.ನಂ: 9480805408 ಹಾಗೂ ಪೊಲೀಸ್ ಉಪ ನಿರೀಕ್ಷಕರು ಮೊ.ನಂ: 9080805445 ಅನ್ನು ಸಂಪರ್ಕಿಸಬಹುದು ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Next Story




