ಯುವಕ ನಾಪತ್ತೆ

ಉಡುಪಿ, ಸೆ.22: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್‌ನ ಆಶೀರ್ವಾದ ಹೌಸ್ ನಿವಾಸಿ ಹರ್ಷಲ್ ಅಮೀನ್ (32) ಎಂಬ ಯುವಕ ಸೆಪ್ಟಂಬರ್ 2ರಿಂದ ನಾಪತ್ತೆಯಾಗಿದ್ದಾರೆ. 5 ಅಡಿ 5 ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ, ತುಳು, ಹಿಂದಿ ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪಡುಬಿದ್ರಿ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ.
Next Story




