ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಮಂಗಳೂರು, ಸೆ.22:ನಗರದ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2017ರಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಕಾರ್ಕಳದ ಕುಕ್ಕುಂದೂರು ಕೆಳಗಿನ ಅಂಗಡಿ ಮನೆಯ ಪಾರ್ಥ ಯಾನೆ ಪಾರ್ಥಸಾರಥಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯು ಕಳೆದ 9 ವರ್ಷದಿಂದ ತಲೆಮರೆಸಿಕೊಂಡಿದ್ದ. ಈ ಬಗ್ಗೆ ಮಂಗಳೂರಿನ 2ನೆ ಸಿಜೆಎಂ ನ್ಯಾಯಾಲಯ ಬಂಧನಕ್ಕೆ ಆದೇಶ ಹೊರಡಿಸಿತ್ತು. ಅದರಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಕದ್ರಿ ಮೈದಾನ ಬಳಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
Next Story




