Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾನೂನುಗಳ ಜತೆಗೆ ಮನಸ್ಥಿತಿಯೂ...

ಕಾನೂನುಗಳ ಜತೆಗೆ ಮನಸ್ಥಿತಿಯೂ ಬದಲಾಗಬೇಕು: ಸುಚಿತ್ರ

ವಾರ್ತಾಭಾರತಿವಾರ್ತಾಭಾರತಿ24 Sept 2026 6:28 PM IST
share
ಕಾನೂನುಗಳ ಜತೆಗೆ ಮನಸ್ಥಿತಿಯೂ ಬದಲಾಗಬೇಕು: ಸುಚಿತ್ರ

ಉಡುಪಿ, ಸೆ.24: ಕಾನೂನುಗಳು ಇದ್ದರಷ್ಟೇ ಸಾಲದು. ಸಮಾಜದ ಮನಸ್ಥಿತಿಯೂ ಬದಲಾಗಬೇಕು. ಕಾನೂನಿನ ಅರಿವಿನ ಜತೆಗೆ ದೌರ್ಜನ್ಯಕ್ಕೆ ಒಳಗಾದವರು ತಮ್ಮ ಹಕ್ಕುಗಳ ಬಗ್ಗೆಯೂ ತಿಳಿದುಕೊಳ್ಳಬೇಕು ಎಂದು ವಕೀಲೆ ಸುಚಿತ್ರ ಹೇಳಿದ್ದಾರೆ.

ಉಡುಪಿ ಸಮಾಜ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಅಜ್ಜರ ಕಾಡಿನ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ರಾಷ್ಟ್ರೀಯ ಸೇವಾ ಯೋಜನೆ, ಮಾದಕ ವ್ಯಸನ ವಿರೋಧಿ ಸಮಿತಿ ಹಾಗೂ ಐಕ್ಯೂಎಸಿ ಆಶ್ರಯದಲ್ಲಿ ಗುರುವಾರ ಕಾಲೇಜಿನ ಎವಿ ಹಾಲ್‌ನಲ್ಲಿ ಆಯೋಜಿಸಲಾದ ಮಾದಕ ವ್ಯಸನ ಮುಕ್ತ ಸಮಾಜ, ದೌರ್ಜನ್ಯ ತಡೆ ಹಾಗೂ ಅಸ್ಪೃಶ್ಯತೆ ನಿವಾರಣೆ ಕುರಿತ ಅರಿವು ಕಾರ್ಯಕ್ರಮದಲ್ಲಿ ಅವರು ದೌರ್ಜನ್ಯ ತಡೆ ಹಾಗೂ ತ್ವರಿತ ನ್ಯಾಯದ ಕುರಿತು ಮಾಹಿತಿ ನೀಡಿದರು.

ಉಡುಪಿ ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕ ಭರತೇಶ್ ಮಾತನಾಡಿ, ದೇಶದ ಅಭಿವೃದ್ಧಿಗೆ ನಾವು ನೀಡಬಹು ದಾದ ಮಹತ್ವದ ಕೊಡುಗೆ ಎಂದರೆ ಮಾದಕ ದ್ರವ್ಯಗಳಿಂದ ದೂರವಿರುವುದು. ಮಾದಕ ವ್ಯಸನವು ವ್ಯಕ್ತಿಯ ಆರೋಗ್ಯ, ಶಿಕ್ಷಣ, ಉದ್ಯೋಗ ಮತ್ತು ಭವಿಷ್ಯದ ಮೇಲೆ ದುಷ್ಪರಿಣಾಮ ಬೀರುವುದರ ಜತೆಗೆ ಕುಟುಂಬ ಹಾಗೂ ಸಮಾಜದ ಮೇಲೂ ಗಂಭೀರ ಪರಿಣಾಮ ಬೀರುತ್ತದೆ ಎಂದರು. ಯುವಜನರು ಮಾದಕ ವಸ್ತುಗಳ ಬಳಕೆ ಮತ್ತು ಅಕ್ರಮ ಚಟುವಟಿಕೆಗಳಿಂದ ದೂರವಿದ್ದು, ಆರೋಗ್ಯಕರ ಹಾಗೂ ಜವಾಬ್ದಾರಿಯುತ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಆರೋಗ್ಯ ಇಲಾಖೆಯ ಮನಶಾಸ್ತ್ರ ತಜ್ಞೆ ಕ್ಯಾಥರಿನ್ ಮಾತನಾಡಿ, ಹೊಸ ಅನುಭವಗಳನ್ನು ಪಡೆಯುವ ಕುತೂಹಲ, ಅಪಾಯವನ್ನು ಸ್ವೀಕರಿಸುವ ಪ್ರವೃತ್ತಿ ಹಾಗೂ ಗೆಳೆಯರ ಒತ್ತಡ ಯುವಜನರು ಮಾದಕ ವಸ್ತುಗಳನ್ನು ಪ್ರಯೋಗಿ ಸಲು ಕಾರಣವಾಗಬಹುದು. ಯುವಜನರು ಆರೋಗ್ಯಕರ ಜೀವನಶೈಲಿ ಹಾಗೂ ಸಕಾರಾತ್ಮಕ ಚಟುವಟಿಕೆಗಳನ್ನು ರೂಢಿಸಿಕೊಳ್ಳಬೇಕು ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲೆ ಪ್ರೊ.ನಿಕೇತನ ಮಾತನಾಡಿ, ಯುವ ಜನರು ಮಾದಕ ವ್ಯಸನಕ್ಕೆ ಒಳಗಾಗುತ್ತಿರು ವುದು ಆತಂಕಕಾರಿ ಬೆಳವಣಿಗೆಯಾಗಿದೆ. ವಿದ್ಯಾರ್ಥಿಗಳು ತಮ್ಮ ಅಮೂಲ್ಯ ಸಮಯ ಮತ್ತು ಶಕ್ತಿಯನ್ನು ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಸೃಜನಶೀಲ ಚಟುವಟಿಕೆಗಳತ್ತ ಬಳಸಿಕೊಳ್ಳಬೇಕು ಎಂದರು.

ಉಡುಪಿ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಾಘವೇಂದ್ರ ವರ್ಣೇಕರ್ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಲಲಿತಾ ಭಟ್ ಸ್ವಾಗತಿಸಿದರು. ಸಮಾಜ ಕಲ್ಯಾಣ ಇಲಾಖೆಯ ವಿನಾಯಕ್ ವಂದಿಸಿದರು. ವಿದ್ಯಾರ್ಥಿನಿ ಸಮೀಕ್ಷಾ ಕಾರ್ಯಕ್ರಮ ನಿರೂಪಿಸಿದರು.

ರಮೇಶ್, ವಿಜಯಲಕ್ಷ್ಮಿ, ಉಮಾಕಾಂತಿ, ಮಾದಕ ವ್ಯಸನ ವಿರೋಧಿ ಸಮಿತಿ ಸಂಚಾಲಕ ಡಾ.ರವೀಶ ಬಿ., ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಅಧಿಕಾರಿಗಳಾದ ರಾಕೇಶ್ ಹಾಗೂ ಡಾ.ಸಫಿಯಾ ಮತ್ತಿತರರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಎನ್‌ಎಸ್‌ಎಸ್ ದಿನಾಚರಣೆಯನ್ನೂ ಆಚರಿಸಲಾಯಿತು. ಪ್ರಸಕ್ತ ಶೈಕ್ಷಣಿಕ ವರ್ಷದ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ಮಾದಕ ವ್ಯಸನಮುಕ್ತ ಸಮಾಜದ ಸಂದೇಶ ಸಾರುವ ಉದ್ದೇಶದಿಂದ ವಿದ್ಯಾರ್ಥಿನಿಯರು ಕಾಲೇಜಿನಿಂದ ಭುಜಂಗ ಪಾರ್ಕ್‌ವೆರೆಗೆ ಜಾಥಾ ನಡೆಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X