ಉಡುಪಿ ಶ್ರೀಕೃಷ್ಣ ಮಠಕ್ಕೆ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ

ಉಡುಪಿ, ಸೆ.24: ಮಾಜಿ ಕ್ರಿಕೆಟಿಗ ಹಾಗೂ ವೀಕ್ಷಕ ವಿವರಣೆಕಾರ ರವಿಶಾಸ್ತ್ರಿ ಬುಧವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು.
ದೇವರ ದರ್ಶನ ಪಡೆದ ಅವರು, ಪರ್ಯಾಯ ಶಿರೂರು ಮಠಾಧೀಶ ಶ್ರೀವೇದವರ್ಧನ ತೀರ್ಥ ಸ್ವಾಮೀಜಿ ಅವರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು. ಈ ಸಂದರ್ಭದಲ್ಲಿ ಪಾರುಪತ್ಯೆಗಾರ ಶ್ರೀಶ ಭಟ್ ಕಡೇಕಾರು ಉಪಸ್ಥಿತರಿದ್ದರು.
Next Story




