ಅಪಘಾತ: ಗಾಯಾಳು ಮೃತ್ಯು

ಮಲ್ಪೆ, ಸೆ.25: ಲಕ್ಷ್ಮೀನಗರ ಅಂಬೇಡ್ಕರ್ ರಿಕ್ಷಾ ನಿಲ್ದಾಣದ ಬಳಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ತೀವ್ರ ಅಸ್ವಸ್ಥರಾಗಿ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ವೆಂಕಟೇಶ್ ನಾಯ್ಕ್ ಎಂದು ಗುರುತಿಸಲಾಗಿದೆ. ಇವರು ಸೆ.24ರಂದು ರಸ್ತೆ ದಾಟುತ್ತಿರುವಾಗ ಬೈಕೊಂದು ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ವೆಂಕಟೇಶ್ ನಾಯ್ಕ್ ಗಂಭೀರವಾಗಿ ಗಾಯಗೊಂಡು ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಸೆ.24ರಂದು ರಾತ್ರಿ ವೆಂಕಟೇಶ್ ನಾಯ್ಕ್‌ಗೆ ವಿಪರೀತ ಜ್ವರ ಹಾಗೂ ಅಸ್ವಸ್ಥತೆ ಕಾಣಿಸಿಕೊಂಡಿದ್ದು, ಅವರನ್ನು ಕೂಡಲೇ ಚಿಕಿತ್ಸೆ ಬಗ್ಗೆ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅವರು ಸೆ.25ರಂದು ಬೆಳಗ್ಗೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




