Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹಳೆಗನ್ನಡವನ್ನು ಅರಿವಿನ ಓದಾಗಿಸಬೇಕು:...

ಹಳೆಗನ್ನಡವನ್ನು ಅರಿವಿನ ಓದಾಗಿಸಬೇಕು: ಡಾ.ರವಿರಾಜ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ26 Sept 2026 9:33 PM IST
share
ಹಳೆಗನ್ನಡವನ್ನು ಅರಿವಿನ ಓದಾಗಿಸಬೇಕು: ಡಾ.ರವಿರಾಜ ಶೆಟ್ಟಿ

ಉಡುಪಿ, ಸೆ.26: ಹಳೆಗನ್ನಡ ಸಾಹಿತ್ಯಕ್ಕೆ ವಿಶಾಲವಾದ ವ್ಯಾಪ್ತಿಯಿದೆ. ಕೇವಲ ಪಠ್ಯವನ್ನು ಹಿಡಿದು ಕಂಠಪಾಠ ಮಾಡುವುದರಿಂದ ಹಳೆಗನ್ನಡದ ಓದು ಪೂರ್ಣವಾಗುವುದಿಲ್ಲ. ಅದರಲ್ಲಿರುವ ಅರ್ಥವನ್ನು ಮೀರಿ ಅಧ್ಯಯನಶೀಲ ವಾಗಿ ಓದುವ ಅಗತ್ಯವಿದೆ. ಕವಿ ಕೃತಿಯಲ್ಲಿ ನೇರವಾಗಿ ಕಾಣಿಸದಿರುವ ಅಂಶಗಳನ್ನು ಸೂಕ್ಷ್ಮವಾಗಿ ಗ್ರಹಿಸಿ ಹಳೆಗನ್ನಡವನ್ನು ಅರಿವಿನ ಓದಾಗಿಸಬೇಕು ಎಂದು ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ. ರವಿರಾಜ ಶೆಟ್ಟಿ ಅಭಿಪ್ರಾಯಪಟ್ಟಿದ್ದಾರೆ.

ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕನ್ನಡ ವಿಭಾಗ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ಕಬ್ಬದುಳುಮೆ ಹಳೆಗನ್ನಡ ಕಾವ್ಯದ ಓದು ಕಮ್ಮಟ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಸಾಹಿತ್ಯವನ್ನು ವರ್ತಮಾನದೊಂದಿಗೆ ಮುಖಾಮುಖಿಯಾಗಿಸುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು. ಪುರಾಣದ ಕಥೆಗಳಲ್ಲಿರುವ ಪಾತ್ರಗಳನ್ನು ವರ್ತಮಾನದ ಮನುಷ್ಯರೊಂದಿಗೆ ಹೋಲಿಸಿ, ಅವುಗಳ ಆಶಯಗಳನ್ನು ಇಂದಿನ ಬದುಕಿನ ಸಂದರ್ಭದಲ್ಲಿ ಅರ್ಥೈಸಿಕೊಳ್ಳುವ ಬಗೆಯನ್ನು ಅರಿಯ ಬೇಕು. ನಮ್ಮೊಳಗಿನ ‘ಅರಿವಿನ ಕಣ್ಣು’ ತೆರೆದಾಗ ಮಾತ್ರ ಇಂತಹ ಓದು ಸಾಧ್ಯ. ಪಂಪ ಜೈನಧರ್ಮದ ಕವಚವನ್ನು ಬದಿಗೆ ಸರಿಸಿ ಕಾವ್ಯವನ್ನು ರಚಿಸಿದ ಕವಿ. ಕನ್ನಡ ಸಾಹಿತ್ಯ ಲೋಕಕ್ಕೆ ಕವಿರಾಜಮಾರ್ಗ ಉದಾತ್ತವಾದ ಕೊಡುಗೆ ಯನ್ನು ನೀಡಿದೆ ಎಂದು ಅವರು ಹೇಳಿದರು.

ಪ್ರಾಸ್ತಾವಿಕ ನುಡಿಗಳನ್ನಾಡಿದ ಸ್ನಾತಕೋತ್ತರ ವಿಭಾಗದ ಸಂಯೋಜಕರಾದ ರತ್ನಮಾಲ, ‘ಕಬ್ಬದುಳುಮೆ’ ಕಮ್ಮಟದ ಉದ್ದೇಶ ಮತ್ತು ಆಶಯಗಳನ್ನು ವಿವರಿಸಿದರು. ಹಳೆಗನ್ನಡ ಕಾವ್ಯವನ್ನು ಸರಳವಾಗಿ ಓದಿ ಅರ್ಥೈಸಿ ಕೊಳ್ಳುವ ಸಾಮರ್ಥ್ಯವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವುದು ಮತ್ತು ಅವರಲ್ಲಿ ಆತ್ಮ ವಿಶ್ವಾಸವನ್ನು ತುಂಬುವುದು ಕಮ್ಮಟದ ಪ್ರಮುಖ ಆಶಯವಾಗಿದೆ ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ನಿತ್ಯಾನಂದ ವಿ ಗಾಂವಕರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸ್ನಾತಕೋತ್ತರ ವಿಭಾಗದ ಶೈಕ್ಷಣಿಕ ಸಲಹೆಗಾರರಾದ ಪ್ರೊ. ಶ್ರೀಧರ ಭಟ್ ಹಾಗೂ ಕನ್ನಡ ವಿಭಾಗದ ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದರು.

ಕನ್ನಡ ವಿಭಾಗದ ಮುಖ್ಯಸ್ಥರಾದ ಮಾರುತಿ ಸ್ವಾಗತಿಸಿದರು. ಉಪನ್ಯಾಸಕಿ ಅರ್ಚನಾ ವಂದಿಸಿ ಉಪನ್ಯಾಸಕಿ ಶರಿತಾ ಕಾರ್ಯಕ್ರಮವನ್ನು ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X