ಆತ್ಮಹತ್ಯೆ ತಡೆಗಟ್ಟುವಿಕೆ ಮಾಸಾಚರಣೆ ಜಾಗೃತಿ ಕಾರ್ಯಕ್ರಮ

ಉಡುಪಿ, ಸೆ.28: ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್‌ನ ಬಿ.ಎಸ್ಸಿ. ನರ್ಸಿಂಗ್ 6ನೇ ಸೆಮಿಸ್ಟರ್ ವಿದ್ಯಾರ್ಥಿಗಳ ವತಿಯಿಂದ ರಾಷ್ಟ್ರೀಯ ಆತ್ಮಹತ್ಯೆ ತಡೆಗಟ್ಟುವಿಕೆ ಮಾಸಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮವನ್ನು ಸೆ.28ರಂದು ಉಡುಪಿ ದೊಡ್ಡಣಗುಡ್ಡೆ ಎ.ವಿ.ಬಾಳಿಗ ಆಸ್ಪತ್ರೆಯ ಕಮಲಾ ಬಾಳಿಗ ಮೆಮೋರಿಯಲ್ ಹಾಲ್‌ನಲ್ಲಿ ಆಯೋಜಿಸಲಾಗಿತ್ತು.
ಮುಖ್ಯ ಅತಿಥಿಗಳಾಗಿ ಎ.ವಿ.ಬಾಳಿಗ ಆಸ್ಪತ್ರೆಯ ಆಡಳಿತಾಧಿಕಾರಿ ಸೌಜನ್ಯ ಶೆಟ್ಟಿ ಹಾಗೂ ನರ್ಸಿಂಗ್ ಸೂಪರಿಂಟೆಂಡೆಂಟ್ ಪ್ರಮೀಳಾ ಡಿಸೋಜ ಮಾತನಾಡಿದರು. ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್‌ನ್ನ ಸಹಾಯಕ ಉಪನ್ಯಾಸಕಿ ಚೇತನಾ ಆರ್. ಉಪಸ್ಥಿತರಿದ್ದರು.
ಅಂಕಿತಾ ಸ್ವಾಗತಿಸಿದರು. ಶೋಭಾ ಕಾರ್ಯಕ್ರಮದ ಮಹತ್ವವನ್ನು ವಿವರಿಸಿದರು. ಸಿಂಚನಾ ಕಾರ್ಯಕ್ರಮ ನಿರೂಪಿಸಿದರು. ಶ್ರೇಯಾ ವಂದಿಸಿದರು. ವಿದ್ಯಾರ್ಥಿಗಳಿಂದ ನೃತ್ಯ, ಮನೋವೈಜ್ಞಾನಿಕ ಆಟ, ಆತ್ಮಹತ್ಯೆ ತಡೆಗಟ್ಟುವಿಕೆ ಕುರಿತ ಕಿರು ನಾಟಕವನ್ನು ಪ್ರದರ್ಶಿಸಲಾಯಿತು.
ಕಿರು ನಾಟಕದ ಮೂಲಕ ಸಂಕಷ್ಟದಲ್ಲಿರುವವರೊಂದಿಗೆ ಸಹಾನುಭೂತಿ ಯಿಂದ ನಡೆದುಕೊಳ್ಳುವುದು, ಪರಿಣಾಮ ಕಾರಿ ಸಂವಹನ, ಭಾವನಾತ್ಮಕ ಬೆಂಬಲ ನೀಡುವುದು, ಎಚ್ಚರಿಕೆಯ ಲಕ್ಷಣಗಳನ್ನು ಗುರುತಿಸುವುದು ಹಾಗೂ ಅಗತ್ಯವಿದ್ದಾಗ ಸಮಯೋಚಿತ ವೃತ್ತಿಪರ ಸಹಾಯ ಪಡೆಯುವುದು ಮುಂತಾದ ಪ್ರಮುಖ ಸಂದೇಶಗಳನ್ನು ನೀಡಲಾಯಿತು.






