Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯಲ್ಲಿ ಕೃಷಿ...

ಉಡುಪಿ ಜಿಲ್ಲೆಯಲ್ಲಿ ಕೃಷಿ ಪ್ರವಾಸೋದ್ಯಮಕ್ಕೆ ಒತ್ತು ನೀಡಲು ಚಿಂತನೆ: ಸಿಇಓ ಪ್ರತೀಕ್ ಬಾಯಲ್

ವಿಶ್ವ ಪ್ರವಾಸೋದ್ಯಮ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ28 Sept 2026 7:57 PM IST
share
ಉಡುಪಿ ಜಿಲ್ಲೆಯಲ್ಲಿ ಕೃಷಿ ಪ್ರವಾಸೋದ್ಯಮಕ್ಕೆ ಒತ್ತು ನೀಡಲು ಚಿಂತನೆ: ಸಿಇಓ ಪ್ರತೀಕ್ ಬಾಯಲ್

ಉಡುಪಿ, ಸೆ.28: ಜಿಲ್ಲೆಯ ನೈಸರ್ಗಿಕ ಸೌಂದರ್ಯ, ಧಾರ್ಮಿಕ ಕ್ಷೇತ್ರಗಳು ಹಾಗೂ ಕಡಲತೀರಗಳ ಜೊತೆಗೆ ಗ್ರಾಮೀಣ ಬದುಕು ಮತ್ತು ಕೃಷಿ ಸಂಸ್ಕೃತಿ ಯನ್ನು ಪ್ರವಾಸೋದ್ಯಮದೊಂದಿಗೆ ಬೆಸೆಯಲು ಕೃಷಿ ಪ್ರವಾಸೋದ್ಯ ಮಕ್ಕೆ ಹೆಚ್ಚಿನ ಒತ್ತು ನೀಡುವ ಚಿಂತನೆ ಹೊಂದಲಾಗಿದೆ ಎಂದು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರತೀಕ್ ಬಾಯಲ್ ಹೇಳಿದ್ದಾರೆ.

ಕಾಪುವಿನ ಪ್ಯಾಲೇಸ್ ಗಾರ್ಡನ್‌ನಲ್ಲಿ ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಹಾಗೂ ಅಸೋಸಿಯೇಷನ್ ಆಫ್ ಕೋಸ್ಟಲ್ ಟೂರಿಸಂ ಸಹಯೋಗದಲ್ಲಿ ರವಿವಾರ ಆಯೋಜಿಸಲಾಗಿದ್ದ ‘ಉಡುಪಿ ಟೂರಿಸಂ ಇನ್‌ಫ್ಲುಯೆನ್ಸರ್ಸ್‌ ಆ್ಯಂಡ್ ಸ್ಟೇಕ್ ಹೋಲ್ಡ್‌ರ್ಸ್ ಮೀಟ್-2026’ನ್ನು ಉದ್ಘಾಟಿಸಿ ಅವರುಮಾತನಾಡುತ್ತಿದ್ದರು.

ಪ್ರವಾಸಿಗರಿಗೆ ಪ್ರವಾಸಿ ತಾಣಗಳು ಕೇವಲ ವೀಕ್ಷಣೆಗೆ ಮಾತ್ರ ಸೀಮಿತ ವಾಗದೇ, ಸ್ಥಳೀಯ ಗ್ರಾಮೀಣ ಜೀವನ ಶೈಲಿ, ಅಲ್ಲಿನ ಕೃಷಿ ಚಟುವಟಿಕೆಗಳು, ಸ್ಥಳೀಯ ಆಹಾರ ಪದ್ಧತಿ ಹಾಗೂ ಕರಾವಳಿಯ ಸಾಂಸ್ಕೃತಿಕ ವೈಶಿಷ್ಟ್ಯಗಳನ್ನು ನೇರವಾಗಿ ಅನುಭವಿಸುವ ಅವಕಾಶ ಕಲ್ಪಿಸಬೇಕು ಎಂಬುದು ಚಿಂತನೆಯ ಭಾಗವಾಗಿದೆ ಎಂದರು.

ಇದರ ಭಾಗವಾಗಿ ವಿಲೇಜ್ ವಾಕ್, ಫಾರ್ಮ್ ವಿಸಿಟ್, ಸ್ಥಳೀಯ ಆಹಾರ ಪರಿಚಯ ಹಾಗೂ ಸಾಂಪ್ರದಾಯಿಕ ಕೃಷಿ ಪದ್ಧತಿಗಳ ಅನುಭವ ಸೇರಿದಂತೆ ವಿವಿಧ ಚಟುವಟಿಕೆಗಳನ್ನು ಪ್ರವಾಸೋದ್ಯಮ ಪ್ಯಾಕೇಜ್‌ಗಳಲ್ಲಿ ಅಳವಡಿಸುವ ಸಾಧ್ಯತೆಗಳ ಕುರಿತು ಚರ್ಚಿಸಲಾಗಿದೆ ಎಂದರು.

ಕರಾವಳಿಯ ಜಾನಪದ ಕಲೆ, ಯಕ್ಷಗಾನ, ಸ್ಥಳೀಯ ಸಂಸ್ಕೃತಿ ಹಾಗೂ ಗ್ರಾಮೀಣ ಪರಂಪರೆಗಳ ಪರಿಚಯದ ಮೂಲಕ ಪ್ರವಾಸಿಗರಿಗೆ ವಿಭಿನ್ನ ಅನುಭವ ನೀಡುವ ಉದ್ದೇಶವಿದೆ. ಕೃಷಿ ಪ್ರವಾಸೋದ್ಯಮದಿಂದ ಸ್ಥಳೀಯ ರೈತರು, ಗ್ರಾಮೀಣ ಉದ್ಯಮಗಳು, ಮಹಿಳಾ ಸ್ವಸಹಾಯ ಸಂಘಗಳು ಹಾಗೂ ಕಲಾವಿದರಿಗೆ ಹೆಚ್ಚು ಆರ್ಥಿಕ ಅವಕಾಶಗಳು ಸೃಷ್ಟಿಯಾಗುತ್ತವೆ. ‘ಉಡುಪಿ-ಸೀ ಬ್ರಾಂಡ್’ ಜೊತೆಗೆ ಕೃಷಿ ಮತ್ತು ಗ್ರಾಮೀಣ ಪ್ರವಾಸೋದ್ಯಮಕ್ಕೂ ಹೆಚ್ಚಿನ ಪ್ರಚಾರ ನೀಡುವ ಮೂಲಕ ಜಿಲ್ಲೆಯನ್ನು ವೈವಿಧ್ಯಮಯ ಪ್ರವಾಸಿ ಅನುಭವದ ತಾಣವನ್ನಾಗಿ ರೂಪಿಸಲಾಗುವುದು ಎಂದರು.

ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಮಾತನಾಡಿ, ಸ್ಥಳೀಯ ಪ್ರವಾಸಿ ತಾಣಗಳು, ಕೃಷಿ ಮತ್ತು ಗ್ರಾಮೀಣ ಬದುಕಿನ ವೈಶಿಷ್ಟ್ಯಗಳನ್ನು ಪರಿಣಾಮಕಾರಿಯಾಗಿ ಪರಿಚಯಿಸುವ ಮೂಲಕ ಪ್ರವಾಸಿಗರನ್ನು ಆರ್ಕಷಿಸ ಬೇಕು. ಸ್ಥಳೀಯರು ಹಾಗೂ ಪ್ರವಾಸೋದ್ಯಮ ಕ್ಷೇತ್ರದ ವಿವಿಧ ಪಾಲುದಾರರು ಒಗ್ಗೂಡಿ ಕಾರ್ಯನಿರ್ವಹಿಸಿದರೆ ಜಿಲ್ಲೆಯ ಪ್ರವಾಸೋದ್ಯಮ ಇನ್ನಷ್ಟು ಅಭಿವೃದ್ಧಿಯಾಗಲಿದೆ ಎಂದರು.

ಕರಾವಳಿ ಪ್ರವಾಸೋದ್ಯಮ ಸಂಘದ ಅಧ್ಯಕ್ಷ ಮನೋಹರ್ ಶೆಟ್ಟಿ ಮಾತನಾಡಿ, ಕರಾವಳಿ ಉಡುಪಿಯ ಪ್ರವಾಸೋ ದ್ಯಮ ಕ್ಷೇತ್ರದಲ್ಲಿ ಅಪಾರ ಅವಕಾಶಗಳಿವೆ. ಕಡಲತೀರಗಳು, ಧಾರ್ಮಿಕ ಹಾಗೂ ಸಾಂಸ್ಕೃತಿಕ ಪ್ರವಾಸಿ ತಾಣಗಳು ಮತ್ತು ಕರಾವಳಿಯ ನೈಸರ್ಗಿಕ ಸೌಂದರ್ಯವನ್ನು ದೇಶ- ವಿದೇಶಗಳ ಪ್ರವಾಸಿಗರಿಗೆ ಪರಿಣಾಮಕಾರಿಯಾಗಿ ಪರಿಚಯಿಸಬೇಕು. ಅಧಿಕಾರಿಗಳು ಹಾಗೂ ಕಂಟೆಂಟ್ ಕ್ರಿಯೇಟರ್‌ಗಳು ಒಟ್ಟಾಗಿ ಕಾರ್ಯ ನಿರ್ವಹಿಸುವ ಮೂಲಕ ಕರಾವಳಿಯೊಂದಿಗೆ ಉಡುಪಿಯನ್ನು ಪ್ರಮುಖ ಪ್ರವಾಸಿ ತಾಣವಾಗಿ ಇನ್ನಷ್ಟು ಅಭಿವೃದ್ಧಿಪಡಿಸಬಹುದು ಎಂದು ಸಲಹೆ ನೀಡಿದರು.

ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕಿ ಂಧ್ಯ ಮಾತನಾಡಿ, ಪ್ರವಾಸೋದ್ಯಮ ಇನ್‌ಫ್ಲುಯೆನ್ಸರ್‌ ಗಳು, ಕಂಟೆಂಟ್ ಕ್ರಿಯೇಟರ್‌ಗಳು ಹಾಗೂ ಪ್ರವಾಸೋದ್ಯಮ ಕ್ಷೇತ್ರದ ವಿವಿಧ ಪಾಲುದಾರರ ಸಹಕಾರ ಜಿಲ್ಲೆಯ ಪ್ರವಾಸೋದ್ಯಮ ಬೆಳವಣಿಗೆಗೆ ಅತ್ಯಂತ ಮಹತ್ವದ್ದಾಗಿದೆ. ಜಿಲ್ಲೆಯ ಕಡಲತೀರಗಳು, ಧಾರ್ಮಿಕ ಕ್ಷೇತ್ರಗಳು, ನೈಸರ್ಗಿಕ ತಾಣಗಳು ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಸಾಮಾಜಿಕ ಜಾಲತಾಣಗಳ ಮೂಲಕ ಪರಿಣಾಮಕಾರಿಯಾಗಿ ಪ್ರಚಾರ ಮಾಡುವ ಮೂಲಕ ದೇಶ-ದೇಶಗಳ ಪ್ರವಾಸಿಗರನ್ನು ಸೆಳೆಯಬಹುದಾಗಿದೆ. ಉತ್ತಮ ಗುಣಮಟ್ಟದ ಸ್ಥಳೀಯ ಕಂಟೆಂಟ್ ಸೃಷ್ಟಿಸುವಲ್ಲಿ ಕಂಟೆಂಟ್ ಕ್ರಿಯೇಟರ್‌ಗಳ ಪಾತ್ರ ಮಹತ್ವದ್ದಾಗಿದೆ ಎಂದರು.

ಕೃಷಿ ಪ್ರವಾಸೋದ್ಯಮದ ಕುರಿತು ಕಾರ್ಯದರ್ಶಿ ಗೌರವ ಶೇಣವ ಮಾತನಾಡಿದರು.ಇದೇ ಸಂದರ್ಭದಲ್ಲಿ ಜಿಲ್ಲೆಯ 20 ಇನ್‌ಫ್ಲುಯೆನ್ಸರ್‌ಗಳನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮ ಕ್ಷೇತ್ರದ ವಿವಿಧ ಪಾಲುದಾರರು, ಪ್ರವಾಸೋದ್ಯಮ ಇನ್‌ಫ್ಲುಯೆನ್ಸರ್‌ಗಳು, ಕಂಟೆಂಟ್ ಕ್ರಿಯೇಟರ್‌ಗಳು ಹಾಗೂ ಇತರರು ಉಪಸ್ಥಿತರಿದ್ದರು. ಸುದೀಪ್ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ಕೊನೆಯಲ್ಲಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X