Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ‘ಕ್ಷಮತ್ವಂ’ ಅಂತಾರಾಷ್ಟ್ರೀಯ ಸಮ್ಮೇಳನದ...

‘ಕ್ಷಮತ್ವಂ’ ಅಂತಾರಾಷ್ಟ್ರೀಯ ಸಮ್ಮೇಳನದ ಪೂರ್ವಭಾವಿ ಕಾರ್ಯಕ್ರಮಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ29 Sept 2026 6:12 PM IST
share
‘ಕ್ಷಮತ್ವಂ’ ಅಂತಾರಾಷ್ಟ್ರೀಯ ಸಮ್ಮೇಳನದ ಪೂರ್ವಭಾವಿ ಕಾರ್ಯಕ್ರಮಕ್ಕೆ ಚಾಲನೆ

ಉಡುಪಿ, ಸೆ.29: ಉಡುಪಿಯ ಎಸ್‌ಡಿಎಂ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಕ್ಷಮತ್ವಂ 2026- ಸ್ವಯಂ ರೋಗನಿರೋಧಕ ಕಾಯಿಲೆಗಳಲ್ಲಿ ಅನುವಾದಾತ್ಮಕ ಆಯುರ್ವೇದ ಅಂತರರಾಷ್ಟ್ರೀಯ ಸಮ್ಮೇಳನದ ಅಂಗವಾಗಿ ಆಯೋಜಿಸಿದ್ದ ಪೂರ್ವಭಾವಿ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮವು ಮಂಗಳವಾರ ಜರಗಿತು.

ಅಧ್ಯಕ್ಷತೆಯನ್ನು ವಹಿಸಿದ್ದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಆಯುಷ್ ವಿಭಾಗದ ಡೀನ್ ಮತ್ತು ಕುಂದಾಪುರ ರೂರಲ್ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲ ಡಾ.ಸಂಜಯ್ ಕೆ.ಎಸ್. ಸಮ್ಮೇಳನದ ಶೈಕ್ಷಣಿಕ ಮಹತ್ವ ಹಾಗೂ ಆಯುರ್ವೇದದಲ್ಲಿ ಸಂಶೋಧನೆಯನ್ನು ಮುನ್ನಡೆಸುವ ಅಗತ್ಯದ ಕುರಿತು ಮಾತನಾಡಿದರು.

ಕ್ಷಮತ್ವಂ 2026 ಸಮ್ಮೇಳನವು ಸಂಶೋಧನೆಯ ಮೂಲಕ ಆಯುರ್ವೇದ ಜ್ಞಾನವನ್ನು ಬಲಪಡಿಸಲು, ವೈಜ್ಞಾನಿಕ ಆಧಾರಗಳನ್ನು ಸ್ಥಾಪಿಸಲು ಮತ್ತು ಆಯುರ್ವೇದದ ಕೊಡುಗೆಗಳನ್ನು ಜಾಗತಿಕ ಆರೋಗ್ಯ ಕ್ಷೇತ್ರಕ್ಕೆ ತಲುಪಿಸಲು ಒಂದು ಪ್ರಮುಖ ವೇದಿಕೆಯನ್ನು ಒದಗಿಸುವ ನಿರೀಕ್ಷೆಯಿದೆ ಎಂದು ಅವರು ಹೇಳಿದರು.

ಕಾಲೇಜಿನ ಪ್ರಾಂಶುಪಾಲೆ ಡಾ.ಮಮತಾ ಕೆ.ವಿ. ಮಾತನಾಡಿ, ಆಯು ರ್ವೇದದ ತತ್ವಗಳು, ಚಿಕಿತ್ಸಾ ಪದ್ಧತಿಗಳು ಮತ್ತು ಔಷಧಗಳನ್ನು ವೈಜ್ಞಾನಿಕವಾಗಿ ದೃಢೀಕರಿಸಲು ದೊಡ್ಡ ಪ್ರಮಾಣದ ಬಹುಕೇಂದ್ರೀಯ ಸಂಶೋಧನೆ ಅತೀ ಅಗತ್ಯವಾಗಿದೆ. ಆಯುರ್ವೇದ ಜ್ಞಾನವನ್ನು ಸಮಕಾಲೀನ ಸಂಶೋಧನಾ ವಿಧಾನಗಳೊಂದಿಗೆ ಸಂಯೋಜಿಸಿ, ಅದರ ಪರಿಣಾಮ ಕಾರಿತ್ವವನ್ನು ವೈಜ್ಞಾನಿಕವಾಗಿ ಸ್ಥಾಪಿಸುವ ಅಗತ್ಯವಿದೆ ಎಂದರು.

ಸಂಪನ್ಮೂಲ ವ್ಯಕ್ತಿಗಳಾಗಿ ನವದೆಹಲಿಯ ಅಖಿಲ ಭಾರತ ಆಯುರ್ವೇದ ಸಂಸ್ಥೆಯ ಪ್ರಾಧ್ಯಾಪಕ ಡಾ.ರವಿಶಂಕರ್ ಬಿ., ಪಾಲಕ್ಕಾಡ್‌ನ ಸ್ವಾಸ್ಥ್ಯಕ್ಷೇತ್ರಂ ಆಯುರ್ವೇದ ಆರೋಗ್ಯ ಕೇಂದ್ರದ ಮುಖ್ಯ ಸಲಹೆಗಾರ ವೈದ್ಯ ಡಾ.ಎನ್.ವಿ. ಶ್ರೀವತ್ಸ, ಕಾಲೇಜಿನ ಉಪಪ್ರಾಂಶುಪಾಲ(ಕ್ಲಿನಿಕಲ್) ಡಾ.ನಿರಂಜನ್ ರಾವ್, ಕೊಯಮತ್ತೂರಿನ ಸೆಂರ್ಟ ಫಾರ್ ಇಂಡಿಯನ್ ಮೆಡಿಕಲ್ ಹೆರಿಟೇಜ್‌ನ ಅಧ್ಯಕ್ಷ ಡಾ. ಅಜಯನ್ ಸದಾನಂದನ್ ಭಾಗವಹಿಸಿದ್ದರು.

ಎಸ್‌ಡಿಎಂ ಕಾಲೇಜಿನ ಉಪಪ್ರಾಂಶುಪಾಲ(ಶೈಕ್ಷಣಿಕ) ಡಾ.ನಾಗರಾಜ್ ಎಸ್., ಕ್ಷಮತ್ವಂ ಸಮ್ಮೇಳನದ ಸಂಘಟನಾ ಕಾರ್ಯದರ್ಶಿಗಳಾದ ಡಾ. ಪ್ರಸನ್ನ ಎನ್.ಮೊಗಸಾಲೆ ಮತ್ತು ಡಾ.ಅರ್ಹಂತ್ ಕುಮಾರ್ ಎ. ಉಪಸ್ಥಿತರಿದ್ದರು. ಡಾ.ಅರುಣ್ ಕುಮಾರ್ ಮತ್ತು ಡಾ.ಶುಭಾ ಪಿ.ಯು. ಕಾರ್ಯಕ್ರಮ ನಿರೂಪಿಸಿದರು. ದ್ರವ್ಯಗುಣ ವಿಭಾಗದ ಮುಖ್ಯಸ್ಥ ಮತ್ತು ಪ್ರಾಧ್ಯಾಪಕ ಡಾ. ಶ್ರೀಕಾಂತ್ ಪಿ. ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X