ಸಂಗೊಳ್ಳಿ ರಾಯಣ್ಣ ಪುರಸ್ಕಾರಕ್ಕೆ ರವಿರಾಜ್ ಎಚ್.ಪಿ. ಆಯ್ಕೆ

ಉಡುಪಿ : ಸಂಘಟಕ, ರಂಗಕರ್ಮಿ, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಅಧ್ಯಕ್ಷ, ರವಿರಾಜ್ ಎಚ್.ಪಿ. ಅವರನ್ನು ಈ ಬಾರಿಯ ಸಂಗೊಳ್ಳಿ ರಾಯಣ್ಣ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ ಎಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನ ಬಳಗ ದ.ಕ ಮತ್ತು ಉಡುಪಿ ಜಿಲ್ಲೆಯ ಅಧ್ಯಕ್ಷ ಸಿದ್ಧಬಸಯ್ಯ ಸ್ವಾಮಿ ಚಿಕ್ಕಮಠ ತಿಳಿಸಿದ್ದಾರೆ.
ಹಲವಾರು ನಾಟಕಗಳಲ್ಲಿ ನಟಿಸಿದ ಇವರು ಹಲವು ನಾಟಕಗಳನ್ನು ನಿರ್ದೇಶಿಸಿದ್ದಾರೆ. ರಂಗಭೂಮಿ ಉಡುಪಿಯ ಸದಸ್ಯನಾಗಿ, ಕೋಶಾಧಿಕಾರಿ ಯಾಗಿ, ಕಾರ್ಯದರ್ಶಿಯಾಗಿ, ಶಿಬಿರಗಳ ಸಂಚಾಲಕನಾಗಿ, ನಾಟಕಗಳ ನಿರ್ದೇಶಕ ನಾಗಿ 25 ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದರು. ಉಡುಪಿಯ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಹುಟ್ಟು ಹಾಗೂ ಬೆಳವಣಿಗೆಗೆ ಕಾರಣರಾಗಿರುವ ಇವರು ಪ್ರಸ್ತುತ ಸಂಚಾಲಕರಾಗಿ ಕಾರ್ಯನಿರ್ವಹಿ ಸುತ್ತಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story




