Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ತೆಂಗಿನ ಕಪ್ಪುತಲೆ ಹುಳುವಿನ...

ತೆಂಗಿನ ಕಪ್ಪುತಲೆ ಹುಳುವಿನ ನಿಯಂತ್ರಣಕ್ಕೆ ರೈತರಿಗೆ ಪ್ರಾಯೋಗಿಕ ತರಬೇತಿ

ವಾರ್ತಾಭಾರತಿವಾರ್ತಾಭಾರತಿ30 Sept 2026 7:25 PM IST
share
ತೆಂಗಿನ ಕಪ್ಪುತಲೆ ಹುಳುವಿನ ನಿಯಂತ್ರಣಕ್ಕೆ ರೈತರಿಗೆ ಪ್ರಾಯೋಗಿಕ ತರಬೇತಿ

ಬೈಂದೂರು, ಸೆ.30: ನಾಡ ಗ್ರಾಪಂ ವ್ಯಾಪ್ತಿಯ ಹಡವು ಹಾಗೂ ಹತ್ತಿಕೋಣೆ ಭಾಗದಲ್ಲಿ ತೆಂಗಿನ ಬೆಳೆಗೆ ಕಪ್ಪುತಲೆ ಹುಳುವಿನ ಬಾಧೆ ಕಂಡುಬಂದ ಹಿನ್ನೆಲೆಯಲ್ಲಿ ಕುಂದಾಪುರ ತೋಟಗಾರಿಕೆ ಇಲಾಖೆ ಹಾಗೂ ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಬುಧವಾರ ಹಡವು ಗ್ರಾಮದಲ್ಲಿ ರೈತರಿಗಾಗಿ ಪ್ರಾಯೋಗಿಕ ತರಬೇತಿ ಕಾರ್ಯಕ್ರಮ ನಡೆಯಿತು.

ಅಧಿಕಾರಿಗಳು ರೈತರ ತೋಟಗಳಿಗೆ ಭೇಟಿ ನೀಡಿ, ಕಪ್ಪುತಲೆ ಹುಳುವಿನ ಬಾಧೆಗೊಳಗಾದ ತೆಂಗಿನ ಮರಗಳಲ್ಲಿ ಕೈಗೊಳ್ಳಬೇಕಾದ ನಿಯಂತ್ರಣ ಕ್ರಮಗಳ ಕುರಿತು ಸ್ಥಳದಲ್ಲಿಯೇ ಮಾರ್ಗದರ್ಶನ ನೀಡಿದರು. ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದ ಸಹ ಸಂಶೋಧನಾ ನಿರ್ದೇಶಕ ಡಾ.ರೇವಣ್ಣ ರೇವಣ್ಣನವರ್ ಕಪ್ಪುತಲೆ ಹುಳುವಿನ ಬಾಧೆ, ಅದರ ಜೀವನ ಚಕ್ರ ಹಾಗೂ ಪರಿಣಾಮಕಾರಿ ನಿಯಂತ್ರಣ ಕ್ರಮಗಳ ಕುರಿತು ರೈತರಿಗೆ ಮಾಹಿತಿ ನೀಡಿದರು.

ಕೀಟದ ಬಾಧೆಗೊಳಗಾದ ತೆಂಗಿನ ಮರಗಳಲ್ಲಿ ಗೋನಿಯೋಜಸ್ ಪರಾವಲಂಬಿ ಜೈವಿಕ ಕೀಟ ನಿಯಂತ್ರಕವನ್ನು ಬಳಸುವ ವಿಧಾನವನ್ನು ವಿವರಿಸಿ, ಕ್ಷೇತ್ರದಲ್ಲಿಯೇ ಪ್ರಾಯೋಗಿಕವಾಗಿ ಪರಾವಲಂಬಿ ಕೀಟಗಳನ್ನು ಬಿಡುಗಡೆ ಮಾಡಲಾಯಿತು. ಅಲ್ಲದೆ, ಕಪ್ಪುತಲೆ ಹುಳುವಿನ ನಿಯಂತ್ರಣಕ್ಕಾಗಿ ರಾತ್ರಿ ವೇಳೆ ಬೆಳಕಿನ ಆಕರ್ಷಕ ಬಲೆಗಳನ್ನು ಅಳವಡಿಸುವ ವಿಧಾನ ಹಾಗೂ ಕೀಟಗಳ ಹತೋಟಿಗೆ ಕೈಗೊಳ್ಳಬೇಕಾದ ವಿವಿಧ ಕ್ರಮಗಳ ಕುರಿತು ರೈತರಿಗೆ ಪ್ರಾತ್ಯಕ್ಷಿಕೆಯ ಮೂಲಕ ತರಬೇತಿ ನೀಡಲಾಯಿತು. ಬೇರುಗಳಿಗೆ ಔಷಧಿ ನೀಡುವ ಮೂಲಕ ಕೀಟ ನಿಯಂತ್ರಣ ಕೈಗೊಳ್ಳುವ ವಿಧಾನವನ್ನೂ ಕ್ಷೇತ್ರಮಟ್ಟದಲ್ಲಿ ಪ್ರಾಯೋಗಿಕವಾಗಿ ವಿವರಿಸಲಾಯಿತು.

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಮನು ಎಂ. ಮಾತನಾಡಿ, ಕಪ್ಪುತಲೆ ಹುಳುವಿನ ಬಾಧೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಒಬ್ಬೊಬ್ಬ ರೈತರು ಪ್ರತ್ಯೇಕವಾಗಿ ಕ್ರಮ ಕೈಗೊಳ್ಳುವುದಕ್ಕಿಂತ ಸಾಮೂಹಿಕವಾಗಿ ನಿಯಂತ್ರಣ ಕ್ರಮಗಳನ್ನು ಅನುಸರಿಸುವುದು ಅಗತ್ಯ ಎಂದ ಅವರು, ಇಲಾಖೆಯಿಂದ ಒದಗಿಸಲಾಗುವ ಗೋನಿಯೋಜಸ್ ಪರಾವಲಂಬಿ ಜೈವಿಕ ಕೀಟ ನಿಯಂತ್ರಕವನ್ನು ರೈತರು ತಮ್ಮ ತೋಟಗಳಲ್ಲಿ ತಪ್ಪದೇ ಬಳಸಬೇಕು. ಮುಂದಿನ ದಿನಗಳಲ್ಲಿ ರೈತರ ಅಗತ್ಯಕ್ಕೆ ಅನುಗುಣವಾಗಿ ಹೆಚ್ಚಿನ ಪ್ರಮಾಣದಲ್ಲಿ ಗೋನಿಯೋಜಸ್ ಪರಾವಲಂಬಿ ಕೀಟ ನಿಯಂತ್ರಕವನ್ನು ಒದಗಿಸಲು ತೋಟಗಾರಿಕೆ ಇಲಾಖೆ ವತಿಯಿಂದ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಡಾ.ಮನೋಹರ್, ತೋಟಗಾರಿಕೆ ಇಲಾಖೆಯ ಅಧಿಕಾರಿಗಳಾದ ಮಧುಕರ್ ಹಾಗೂ ಪ್ರವೀಣ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X