Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹಿರಿಯ ನಾಗರಿಕರನ್ನು ಗೌರವಯುತವಾಗಿ...

ಹಿರಿಯ ನಾಗರಿಕರನ್ನು ಗೌರವಯುತವಾಗಿ ನಡೆಸಿಕೊಳ್ಳಿ: ಎಂ.ಎ.ಗಫೂರ್

ವಿಶ್ವ ಹಿರಿಯ ನಾಗರಿಕರ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ1 Oct 2026 7:45 PM IST
share
ಹಿರಿಯ ನಾಗರಿಕರನ್ನು ಗೌರವಯುತವಾಗಿ ನಡೆಸಿಕೊಳ್ಳಿ: ಎಂ.ಎ.ಗಫೂರ್

ಉಡುಪಿ, ಅ.1: ಹಿರಿಯ ನಾಗರಿಕರು ಸಮಾಜದಲ್ಲಿ ತಮ್ಮದೇ ಆದ ಸ್ಥಾನ ವನ್ನು ಹೊಂದಿದ್ದಾರೆ. ಸಮಾಜ ಅವರನ್ನು ಗೌರವಯುತವಾಗಿ ನೋಡಿ ಕೊಳ್ಳಬೇಕು ಎಂದು ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್ ಹೇಳಿದ್ದಾರೆ.

ಗುರುವಾರ ಬನ್ನಂಜೆ ಶ್ರೀನಾರಾಯಣಗುರು ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಉಡುಪಿ ವಕೀಲರ ಸಂಘ, ಹಿರಿಯ ನಾಗರಿಕರ ಸಂಸ್ಥೆ, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ, ವೃದ್ಧಾಶ್ರಮಗಳು ಹಾಗೂ ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ 1 ಮತ್ತು 2 ಆಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಮತ್ತು ಕೇಂದ್ರ ಪ್ರಾಯೋಜಿತ ಅಟಲ್ ವಯೋ ಅಭ್ಯುದಯ ಯೋಜನೆಯ ಉಪಯೋಜನೆಯಡಿ ಅಂತರ್ -ಪೀಳಿಗೆಯ ಬಾಂಧವ್ಯ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಹಿರಿಯ ನಾಗರಿಕರ ಅನುಭವ ಕುಟುಂಬಕ್ಕೆ ಮತ್ತು ಸಮಾಜಕ್ಕೆ ಬೇಕಾಗಿದೆ. ಹಿರಿಯರು ತಮ್ಮ ಆರೋಗ್ಯ ಸದೃಢ ವಾಗಿರುವವರೆಗೆ ಒಂದಲ್ಲ ಒಂದು ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಕಿರಿಯರು ಕೂಡ ಹಿರಿಯರನ್ನು ಪ್ರೀತಿಯಿಂದ ನೋಡಿಕೊಳ್ಳಬೇಕು. ಈ ಬಗ್ಗೆ ಕಿರಿಯ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಆಗಬೇಕು ಎಂದರು.

ಭಾರತೀಯ ಪರಂಪರೆಯು ವಸುದೈವ ಕುಟುಂಬಕಂ ಎನ್ನುವ ಧ್ಯೇಯ ವಾಕ್ಯದಲ್ಲಿ ನಂಬಿಕೆ ಇಟ್ಟಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಕುಟುಂಬ ವ್ಯವಸ್ಥೆ ಶಿಥಿಲವಾಗುತ್ತಿದ್ದು ಹಿರಿಯ ನಾಗರಿಕರು ಅನಾದರಕ್ಕೆ ಒಳಗಾಗುತ್ತಿದ್ದಾರೆ. ತಾವು ಸಾಕಿದ ಮಕ್ಕಳೇ ಹೆತ್ತವರನ್ನು ಕಡೆಗಣಿಸುವ ಘಟನೆಗಳು ಕಂಡು ಬರುತ್ತಿದ್ದು, ಹಿರಿಯ ನಾಗರಿಕರನ್ನು ಗೌರವಯುತವಾಗಿ ನಡೆಸಿಕೊಳ್ಳುವ ಬಗ್ಗೆ ಕಿರಿಯ ನಾಗರಿಕರಿಗೆ ಆಪ್ತ ಸಮಾಲೋಚನೆ ನೀಡುವ ಅಗತ್ಯವಿದೆ ಎಂದರು.

1184 ಹಿರಿಯರ ಮನೆಗೆ ಭೇಟಿ: ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯಕ್ ಮಾತನಾಡಿ, ನಗರೀಕರಣ ದಿಂದ ಹಿರಿಯ ನಾಗರಿಕರು ಮಕ್ಕಳು, ಕುಟುಂಬಿಕರು, ಬಂಧು ಬಾಂಧವರಿಲ್ಲದೆ ಒಂಟಿಯಾಗಿ ಬದುಕುತ್ತಿದ್ದು ಇವರಿಗೆ ಅಭದ್ರತೆ ಕಾಡುತ್ತಿರುವುದನ್ನು ಮನಗಂಡು ಪೊಲೀಸ್ ಇಲಾಖೆಯ ಮಹಾ ನಿರ್ದೇಶಕರ ಆದೇಶದ ಮೇರೆಗೆ ಪೊಲೀಸ್ ಬೀಟ್ ನಡೆಸಿ ಹಿರಿಯ ನಾಗರಿಕರ ಮಾಹಿತಿ ಕಲೆ ಹಾಕಿ ಅವರ ಮನೆಗೆ ತೆರಳಿ ಅವರಿಗೇನಾದರೂ ಸಮಸ್ಯೆಗಳಿದ್ದಲ್ಲಿ ಪೊಲೀಸ್ ಇಲಾಖೆ ಹಾಗೂ ಇತರ ಇಲಾಖೆಗಳ ಮೂಲಕ ಅದನ್ನು ಬಗೆಹರಿಸುವ ಕಾರ್ಯ ನಡೆಯುತ್ತಿದೆ ಎಂದರು.

ಉಡುಪಿ ಜಿಲ್ಲೆಯಲ್ಲಿ ಒಟ್ಟು 1184 ಹಿರಿಯ ನಾಗರಿಕರನ್ನು ಗುರುತಿಸಿ ಅವರ ಮನೆಗಳಿಗೆ ನಿಯಮಿತ ಭೇಟಿ ನೀಡಲಾಗುತ್ತಿದೆ. ಆದ್ದರಿಂದ ಒಂಟಿಯಾಗಿರುವ ಹಿರಿಯ ನಾಗರಿಕರು ಭಯಪಡಬೇಕಾಗಿಲ್ಲ ಇಲಾಖೆ ಅವರ ಬೆಂಬಲಕ್ಕೆ ಸದಾ ಇರುತ್ತದೆ ಎಂದರು.

ಇಂಚರ ಕ್ಲಿನಿಕ್‌ನ ಜನರಲ್ ಫಿಸಿಶಿಯನ್ ಡಾ.ವೈ.ಸುದರ್ಶನ್ ರಾವ್ ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ಹಿರಿಯ ನಾಗರಿಕರಲ್ಲಿ ಅನುಭವ ದಿಂದ ಪಡೆದ ಜ್ಞಾನ ಮತ್ತು ನಿವೃತ್ತ ಜೀವನದ ಸಮಯ ಇರುತ್ತದೆ. ಅವರ ಜ್ಞಾನ ಮತ್ತು ಸಮಯವನ್ನು ಸರಿಯಾಗಿ ಸದುಪಯೋಗ ಪಡಿಸಿಕೊಂಡು ಸಮಾಜಕ್ಕೆ ಕಾಣಿಕೆ ನೀಡಬೇಕು. ಅವರು ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಒಂಟಿತನ ಕಾಡದಂತೆ ಅವರ ಜೊತೆ ಕುಟುಂಬಸ್ಥರು ಸಮಯ ಕಳೆಯಬೇಕು ಎಂದರು.

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ನಡೆದ ವಿವಿಧ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾ ದವರಿಗೆ ಬಹುಮಾನ ವಿತರಿಸಲಾಯಿತು.ಕಾರ್ಯಕ್ರಮಕ್ಕೂ ಮುನ್ನ ಆರೋಗ್ಯ ಇಲಾಖೆ ವತಿಯಿಂದ ಹಿರಿಯ ನಾಗರಿಕರಿಗೆ ವೈದ್ಯಕೀಯ ತಪಾಸಣೆ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್ ಕಾದ್ರೊಳ್ಳಿ, ಲೀಡ್ ಬ್ಯಾಂಕ್ ಮ್ಯಾನೇಜರ್ ಹರೀಶ್ ಬಿ, ಕೆನರಾ ಬ್ಯಾಂಕ್ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಟಿ. ಎಸ್.ಎನ್ ಪೂರ್ಣಾನಂದ, ಹಿರಿಯ ನಾಗರಿಕರ ಒಕ್ಕೂಟದ ಜಿಲ್ಲಾ ಅಧ್ಯಕ್ಷ ಕೆ. ಸದಾನಂದ ಹೆಗಡೆ, ಮಹಿಳಾ ಮಂಡಲಗಳ ಒಕ್ಕೂಟದ ಜಿಲ್ಲಾ ಅಧ್ಯಕ್ಷೆ ವಸಂತಿ ರಾವ್ ಕೊರಡ್ಕಲ್, ಹಾಗೂ ಇತರರು ಉಪಸ್ಥಿತರಿದ್ದರು.

ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರೇಮಮೂರ್ತಿ ಕೆ ಪ್ರಾಸ್ತಾವಿಕವಾಗಿ ಮಾತನಾಡಿ ದರೆ, ಜಿಲ್ಲಾ ಹಿರಿಯ ನಾಗರಿಕರ ಹಾಗೂ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನ ಸ್ವಾಗತಿಸಿದರು. ಹೆಚ್ ರವೀಂದ್ರ ಮತ್ತು ಕಾಂತಿ ಹರೀಶ್ ಕಾರ್ಯಕ್ರಮ ನಿರೂಪಿಸಿ, ಯೋಜನಾ ಸಹಾಯಕ ಶಿವಾಜಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X