Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಮಾಜದಲ್ಲಿ ಸಮಾನತೆಯ ಹಾದಿ ರೂಪಿಸಿದವರು...

ಸಮಾಜದಲ್ಲಿ ಸಮಾನತೆಯ ಹಾದಿ ರೂಪಿಸಿದವರು ಡಾ.ಅಂಬೇಡ್ಕರ್: ಡಾ.ಗಣನಾಥ ಎಕ್ಕಾರು

ವಾರ್ತಾಭಾರತಿವಾರ್ತಾಭಾರತಿ1 Oct 2026 7:49 PM IST
share
ಸಮಾಜದಲ್ಲಿ ಸಮಾನತೆಯ ಹಾದಿ ರೂಪಿಸಿದವರು ಡಾ.ಅಂಬೇಡ್ಕರ್: ಡಾ.ಗಣನಾಥ ಎಕ್ಕಾರು

ಉಡುಪಿ, ಅ.1:ಡಾ.ಬಿ.ಆರ್ ಅಂಬೇಡ್ಕರ್ ಆಗಾಧವಾದ ಜ್ಞಾನ ಭಂಡಾರ. ಅವರ ಬದುಕಿನ ಕುರಿತು ಓದಿ, ಆದರ್ಶ ಸಂದೇಶವನ್ನು ನಮ್ಮ ಜೀವನದಲ್ಲಿ ಆಳವಡಿಸಿಕೊಳ್ಳುವುದರಿಂದ ನಮ್ಮ ವ್ಯಕ್ತಿತ್ವದಲ್ಲಿ ಪರಿಣಾಮಕಾರಿ ಬದಲಾವಣೆ ಕಾಣಲು ಸಾಧ್ಯವಿದೆ. ಸಮಾಜದಲ್ಲಿನ ಅಸಮಾನತೆಯನ್ನು ವಿರೋಧಿಸಿ ಸಾಮಾಜಿಕ ವ್ಯವಸ್ಥೆಯಲ್ಲಿ ಸಮಾನತೆಯ ಹಾದಿಯನ್ನು ರೂಪಿಸಿದವರೇ ಡಾ.ಬಿ.ಆರ್ ಅಂಬೇಡ್ಕರ್ ಎಂದು ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಎಕ್ಕಾರು ಹೇಳಿದ್ದಾರೆ.

ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶಂಕರನಾರಾಯಣ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಇತ್ತೀಚೆಗೆ ನಡೆದ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಓದು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಅಂಬೇಡ್ಕರ್ ಅವರು ಜ್ಞಾನದ ಸಂಕೇತ. ಜಗತ್ತಿನ ಎಲ್ಲಾ ವಿಚಾರಗಳ ಕುರಿತು ಪಾಂಡಿತ್ಯವನ್ನು ಹೊಂದಿದ್ದ ಅವರು ದೇಶಕ್ಕೆ ಶ್ರೇಷ್ಠವಾದ ಸಂವಿಧಾನವನ್ನು ನೀಡಿದ್ದಾರೆ. ಜ್ಞಾನ ಯಾರಿಗೂ ಸೀಮಿತವಲ್ಲ ಪ್ರತಿ ಯೊಬ್ಬರಿಗೂ ಜ್ಞಾನವನ್ನು ಪಡೆದುಕೊಳ್ಳುವ ಹಕ್ಕಿದೆ ಎಂದು ತೋರಿಸಿಕೊಟ್ಟ ಮಹಾನ್ ವ್ಯಕ್ತಿ ಡಾ.ಬಿ.ಆರ್ ಅಂಬೇಡ್ಕರ್ ಎಂದವರು ನುಡಿದರು.

ವಿಶೇಷ ಉಪನ್ಯಾಸ ನೀಡಿ ಮಾತನಾಡಿದ ರಂಗಕರ್ಮಿ ಗಣೇಶ್ ಶೆಟ್ಟಿ, ಗೌರವಯುತವಾಗಿ ಬದುಕಲು ಸಂವಿಧಾನವು ಬುನಾದಿಯನ್ನು ರೂಪಿಸಿದೆ. ಡಾ.ಅಂಬೇಡ್ಕರ್ ಅವರ ಚಿಂತನೆ ಜ್ಞಾನವನ್ನು ನಾವು ಪಡೆದು ಕೊಳ್ಳಬೇಕು. ಶಿಕ್ಷಣ ಕೇವಲ ಉದ್ಯೋಗವನ್ನು ನೀಡುವುದಿಲ್ಲ. ಸರಿ ತಪ್ಪುಗಳ ಕುರಿತು ಅಲೋಚಿಸುವ ಸಾಮರ್ಥ್ಯ ವನ್ನು ವೃದ್ಧಿಸುತ್ತದೆ. ಅಂಬೇಡ್ಕರ್ ಅವರ ಆಶಯದಂತೆ ಪ್ರತಿಯೊಬ್ಬರು ಶಿಕ್ಷಣವನ್ನು ಪಡೆಯುವಂತಾಗಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ.ವೆಂಕಟರಾಮ್ ಭಟ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಕುರಿತು ಅಯೋಜಿಸಲಾಗಿದ್ದ ಪ್ರಬಂಧ, ಭಾಷಣ, ರಸಪ್ರಶ್ನೆ ಸ್ಪರ್ಧೆಯ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ದಿವ್ಯಾ ಎಂ. ಎಸ್, ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಚಾಲಕಿ ಡಾ.ನಳಿನಾಶ್ರೀ ಉಪಸ್ಥಿತರಿದ್ದರು. ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರೆ, ಕಾಲೇಜಿನ ಉಪನ್ಯಾಸಕ ವಸಂತ್ ಜಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X