ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ, ಅ.3: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ ಖಾಯಂ ನಿವಾಸಿಗಳಿಗೆ ನಿವೇಶನ ಒದಗಿಸಲು ನಿವೇಶನರಹಿತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ಪಡಿತರ ಚೀಟಿ, ಆಧಾರ್ ಕಾರ್ಡ್ ಪ್ರತಿ, ಪಾಸ್ ಪೋರ್ಟ್ ಸೈಜ್ ಫೋಟೋ, ಚಾಲ್ತಿಯಲ್ಲಿರುವ ಆದಾಯ ಹಾಗೂ ಜಾತಿ ಪ್ರಮಾಣ ಪತ್ರ ಹಾಗೂ ಕುಟುಂಬದ ಸದಸ್ಯರ ಹೆಸರಿನಲ್ಲಿ ನಿವೇಶನ ಇಲ್ಲದೆ ಇರುವ ಬಗ್ಗೆ ಘೋಷಣಾ ಪತ್ರದೊಂದಿಗೆ ಅಕ್ಟೋಬರ್ 8ರ ಒಳಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಳಿಗೆ ಸಾಲಿಗ್ರಾಮ ಪಟ್ಟಣ ಪಂಚಾಯತ್ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಸಾಲಿಗ್ರಾಮ ಪಟ್ಟಣ ಪಂಚಾಯತ್‌ನ ಮುಖ್ಯಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Next Story




