ಉಡುಪಿ| ಜಿಲ್ಲಾಸ್ಪತ್ರೆಗಾಗಿ ನಾಲ್ಕನೆ ದಿನವೂ ಮುಂದುವರೆದ ಧರಣಿ

ಉಡುಪಿ, ಅ.4: ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಉಡುಪಿ ನೂತನ ಜಿಲ್ಲಾ ಆಸ್ಪತ್ರೆ ಕೂಡಲೇ ಆರಂಭಿಸ ಬೇಕೆಂದು ಹಮ್ಮಿಕೊಂಡಿರುವ ಅಹೋರಾತ್ರಿ ಧರಣಿ ನಾಲ್ಕನೇ ದಿನವೂ ಮುಂದುವರೆದಿದ್ದು, ರವಿವಾರ 8 ಗಂಟೆಗಳ ಉಪವಾಸ ಸತ್ಯಾಗ್ರಹಕ್ಕೆ ಚಾಲನೆ ನೀಡಲಾಯಿತು.
ಸಂಘಟನೆಯ ಉಡುಪಿ ಜಿಲ್ಲಾ ಗೌರವಧ್ಯಕ್ಷ ಅನ್ಸಾರ್ ಅಹಮದ್, ಜಿಲ್ಲಾಧ್ಯಕ್ಷ ಸುಧೀರ್ ಪೂಜಾರಿ ಹಾಗೂ ಉಡುಪಿ ತಾಲೂಕ ಅಧ್ಯಕ್ಷ ಸತೀಶ್ ಸನಿಲ್ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದು, ಕೂಡಲೇ ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡವನ್ನು ಸಾರ್ವಜನಿಕ ಸೇವೆಗೆ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.
Next Story




