Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲಾ ಮಟ್ಟದ ಅತ್ಯುತ್ತಮ...

ಉಡುಪಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ, ಎಸ್‌ಡಿಎಂಸಿ, ಸರಕಾರಿ ಶಾಲಾ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ4 Oct 2026 7:05 PM IST
share
ಉಡುಪಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ, ಎಸ್‌ಡಿಎಂಸಿ, ಸರಕಾರಿ ಶಾಲಾ ಪ್ರಶಸ್ತಿ ಪ್ರದಾನ

ಬ್ರಹ್ಮಾವರ, ಅ.4: ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ಕೇಂದ್ರ ವೇದಿಕೆ ಉಡುಪಿ ಜಿಲ್ಲಾ ಘಟಕ, ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಗೀತಾ ಹೆಚ್.ಎಸ್.ಎನ್ ಫೌಂಡೇಶನ್ ಕೋಟೇಶ್ವರ, ಗೀತಾನಂದ ಫೌಂಡೇಶನ್ ಮಣೂರು-ಪಡುಕೆರೆ, ಕೋಟ, ಕರ್ನಾಟಕ ಶಿಕ್ಷಣ ಸಮನ್ವಯ ಮತ್ತು ತರಬೇತಿ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಮಗು ಮತ್ತು ಕಾನೂನು ಕೇಂದ್ರ, ನ್ಯಾಶನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿರ್ವಸಿಟಿ ಬೆಂಗಳೂರು ಸುಗಮಕಾರರಾಗಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ 2026-27 ನೇ ಸಾಲಿನ ’ಗುರುವಂದನಾ ಕಾರ್ಯಕ್ರಮ’, ’ಉಡುಪಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ’ ಮತ್ತು ’ಜಿಲ್ಲಾ ಮಟ್ಟದ ಅತ್ಯುತ್ತಮ ಎಸ್.ಡಿ.ಎಂ.ಸಿ. ಮತ್ತು ಸರಕಾರಿ ಶಾಲೆ ಪ್ರಶಸ್ತಿ ಪ್ರದಾನ ಸಮಾರಂಭ’ವನ್ನು ರವಿವಾರ ಬ್ರಹ್ಮಾವರ ಬಂಟರ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಕೋಟೇಶ್ವರ ಗೀತಾ ಎಚ್.ಎಸ್.ಎನ್ ಫೌಂಢೇಶನ್ ಅಧ್ಯಕ್ಷ ಶಂಕರ ಐತಾಳ್ ಉದ್ಘಾಟಿಸಿ ದರು. ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯ ದರ್ಶಿ ನಿತಿನ್ ವೈ.ರಾವ್ ಮಾತನಾಡಿದರು. ಉಡುಪಿ ಡಯಟ್ ಪ್ರಾಂಶುಪಾಲ ಅಶೋಕ್ ಕಾಮತ್ ಟಿ.ಆರ್. ಲೋಗೋ ಅನಾವರಣಗೊಳಿಸಿದರು. ಎಸ್.ಡಿ.ಎಂ.ಸಿ.ಸಿ.ಸಿ.ಎಫ್ ಬ್ರಹ್ಮಾವರ ತಾಲೂಕು ಘಟಕಾಧ್ಯಕ್ಷ ಜಯರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ನಿವೃತ್ತ ಮುಖ್ಯೋಪಧ್ಯಾಯ ನೂಜಾಡಿ ಬಗ್ವಾಡಿ ಮೆತ್ತಿನಮನೆ ಬಿ. ರಾಜೀವ ಶೆಟ್ಟಿ ಅವರಿಗೆ ’ಗುರುವಂದನೆ’ ಸಲ್ಲಿಸಲಾಯಿತು. ಲೆಕ್ಕಪರಿಶೋಧಕ ಕಮಲಾಕ್ಷ ಕಾಮತ್ ಕಾರ್ಕಳ ಅವರಿಗೆ ’ಸರಕಾರಿ ಶಾಲೆಗಳ ಅಭಿವೃದ್ಧಿ ಹರಿಕಾರ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

2026-27ನೇ ಸಾಲಿನ ಉಡುಪಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಬೀಜಾಡಿ ಸರಕಾರಿ ಪ್ರೌಢಶಾಲೆ ಸಹಶಿಕ್ಷಕ ಡಾ.ಸದಾನಂದ ಬೈಂದೂರು, ಹೊಸ್ಮಾರು ಕೆ.ಪಿ.ಎಸ್ ಪ್ರಾಥಮಿಕ ವಿಭಾಗದ ಹಿರಿಯ ಮುಖ್ಯಶಿಕ್ಷಕ ನಾಗೇಶ, ಗುಜ್ಜಾಡಿ ಭಾಸ್ಕರ್ ಪೈ ಸ್ಮಾರಕ ಸರಕಾರಿ ಪ್ರೌಢಶಾಲೆ ಮುಖ್ಯೋಪಧ್ಯಾಯ ಉದಯ ಗಾಂರ್ವ್ಕ, ನಕ್ರೆ ಸರಕಾರಿ ಪ್ರೌಢಶಾಲೆಯ ಸಹಶಿಕ್ಷಕ ಸಂತೋಷ್ ಕುರ್ಮಾ ಶೆಟ್ಟಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರೂರು (ಉರ್ದು) ಸಹಶಿಕ್ಷಕಿ ಸಂಧ್ಯಾ ಕುಮಾರಿ ಬಿ., ಕಾಪು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಧ್ಯಾಯಿನಿ ಕಮಲಾಕ್ಷಿ, ಉದ್ಯಾವರ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ಶಾಲೆ ವಿಭಾಗದ ಸಹಶಿಕ್ಷಕಿ ತಾರಾಮತಿ, ದೊಡ್ಡಣಗುಡ್ಡೆ ಸ.ಹಿ.ಪ್ರಾ. ಶಾಲೆ ಪ್ರಭಾರ ಮುಖ್ಯೋಪಧ್ಯಾಯಿನಿ ನಿರ್ಮಲಾ ಸುರೇಂದ್ರ, ಹೈಕಾಡಿ ಸ.ಹಿ.ಪ್ರಾ. ಶಾಲೆ ಹಿರಿಯ ಮುಖ್ಯೋಪಧ್ಯಾಯ ಶೇಖರ ಕುಮಾರ್, ಸೈಬ್ರಕಟ್ಟೆ ಸ.ಹಿ.ಪ್ರಾ. ಶಾಲೆ ಮುಖ್ಯೋಪಧ್ಯಾಯಿನಿ ಜಯಂತಿ, ಪೊಲಿಪು ಸ. ಪ. ಪೂ. ಕಾಲೇಜು ಪ್ರೌಢಶಾಲಾ ವಿಭಾಗದ ಸಹಶಿಕ್ಷಕಿ ಶುಭ ಎಸ್. ಸುವರ್ಣ, ಕೆಪಿಎಸ್ ವಂಡ್ಸೆ-ನೆಂಪು ಪ್ರೌಢಶಾಲೆ ವಿಭಾಗದ ಪ್ರಭಾರ ಮುಖ್ಯೋಪಧ್ಯಾಯ ಶ್ರೀಧರ ಭಟ್, ಸ.ಕಿ.ಪ್ರಾ. ಶಾಲೆ ಕೊಂಜಾಡಿ- ಆಲ್ಬಾಡಿಯ ಪ್ರಭಾರ ಮುಖ್ಯೋಪಧ್ಯಾಯ ನಾರಾಯಣ ನಾಯ್ಕ, ಪರ್ಕಳ ಶೆಟ್ಟಿಬೆಟ್ಟು ಸರಕಾರಿ ಸಂಯುಕ್ತ ಪ್ರೌಢಶಾಲೆಯ ಮುಖ್ಯೋಪಧ್ಯಾಯ ರಾಮಕೃಷ್ಣ ನಾಯಕ್ ಅವರಿಗೆ ನೀಡಲಾಯಿತು.

ಕುಂದಾಪುರ ವಡೇರಹೋಬಳಿ ಪಿಎಂಶ್ರೀ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟದ ಕ್ರೀಡಾಪಟು ವಿಠಲ ಬಾಳಪ್ಪ ಮುನವಳ್ಳಿ ಹಾಗೂ ದೈಹಕ ಶಿಕ್ಷಕಿಯನ್ನು ಸನ್ಮಾನಿಸಲಾಯಿತು. ಮಲ್ಪೆಯ ಗಾಂಧಿ ಶತಾಬ್ದಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಕಂಡ್ಲೂರು ರಾಮ್ಸನ್ ಸರಕಾರಿ ಪ್ರೌಢಶಾಲೆ, ಜಾನುವಾರುಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಪು ಪೊಲಿಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಗ್ವಾಡಿ ನೂಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮುದ್ರಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ’ಜಿಲ್ಲಾ ಮಟ್ಟದ ಅತ್ಯುತ್ತಮ ಎಸ್.ಡಿ.ಎಂ.ಸಿ. ಮತ್ತು ಸರಕಾರಿ ಶಾಲೆ ಪ್ರಶಸ್ತಿ’ ನೀಡಲಾಯಿತು.

ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ.ಕುಂದರ್, ಮಂಗಳೂರು ಪಡಿ ನಿರ್ದೇಶಕ ರೆನ್ನಿ ಡಿಸೋಜ, ಬ್ರಹ್ಮಾವರ ಬಂಟರ ಭವನದ ಸಂಚಾಲಕ ಭುಜಂಗ ಶೆಟ್ಟಿ, ಹಳಗೇರಿ ಜೋಗಿಮನೆ ಟ್ರಸ್ಟ್ ಅಧ್ಯಕ್ಷ ವಸಂತ ಜೋಗಿ, ಎಸ್.ಡಿ.ಎಂ.ಸಿ.ಸಿ.ಸಿ.ಎಫ್ ರಾಜ್ಯ ಸಂಚಾಲಕ ಮೊಯ್ದಿನ್ ಕುಟ್ಟಿ, ಉಡುಪಿ ಜಿಲ್ಲಾ ಘಟಕದ ಗೌರವ ಸಲಹೆಗಾರ್ತಿ ಮಲ್ಲಿಕಾ ಬಾಲಕೃಷ್ಣ ಪೂಜಾರಿ ಮೊದಲಾದವರಿದ್ದರು.

ಎಸ್‌ಡಿಎಂಸಿ ಸಮನ್ವಯ ಕೇಂದ್ರ ವೇದಿಕೆ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಅಬ್ದುಲ್ ಸಲಾಂ ಚಿತ್ತೂರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಎಸ್.ಡಿ.ಎಂ.ಸಿ.ಸಿ.ಸಿ.ಎಫ್ ಕುಂದಾಪುರ ತಾಲೂಕು ಅಧ್ಯಕ್ಷ ಎಸ್.ವಿ. ನಾಗರಾಜ್ ಸ್ವಾಗತಿಸಿದರು. ಶೋಭಾ ಶಾಂತರಾಜ್ ಹಾಗೂ ಮನೀಷಾ ಬಿ.ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಬಾಲಕೃಷ್ಣ ಪೂಜಾರಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X