Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸುಲೋಚನ ಪಿ.ಕೆ.ಗೆ ಪಣಿಯಾಡಿ ಕಾದಂಬರಿ...

ಸುಲೋಚನ ಪಿ.ಕೆ.ಗೆ ಪಣಿಯಾಡಿ ಕಾದಂಬರಿ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ4 Oct 2026 8:14 PM IST
share
ಸುಲೋಚನ ಪಿ.ಕೆ.ಗೆ ಪಣಿಯಾಡಿ ಕಾದಂಬರಿ ಪ್ರಶಸ್ತಿ ಪ್ರದಾನ

ಉಡುಪಿ, ಅ.4: ಉಡುಪಿ ತುಳುಕೂಟದ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ 31ನೇ ವರ್ಷದ ವಿಶ್ವಪ್ರಭಾ ಪ್ರಯೋಜಿತ ಪಣಿಯಾಡಿ ಕಾದಂಬರಿ ಪ್ರಶಸ್ತಿಯನ್ನು ರವಿವಾರ ಉಡುಪಿ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಸುಲೋಚನ ಪಿ.ಕೆ. ಅವರ ‘ದಧೂಟಿಬನ’ ಕೃತಿಗೆ ಪ್ರದಾನ ಮಾಡಲಾಯಿತು.

ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಮಾಜಿ ಶಾಸಕ ರಘುಪತಿ ಭಟ್, ಉದ್ಯಮಿ ಪ್ರಸಾದ್‌ರಾಜ್ ಕಾಂಚನ್, ಅಖಿಲ ಭಾರತ ತುಳು ಒಕ್ಕೂಟದ ಗೌರವಾಧ್ಯಕ್ಷ ಬರೋಡ ಶಶಿಧರ ಶೆಟ್ಟಿ, ಬರೋಡ ತುಳು ಸಂಘದ ಗೌರವಾಧ್ಯಕ್ಷ ದಯಾನಂದ ಬೋಂಟ್ರ, ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷ ಎಂ.ಎಲ್.ಸಾಮಗ, ಉಡುಪಿ ಹೃದಯಂ ಫೌಂಡೇಶನ್‌ನ ಪ್ರವರ್ತಕ ಸುಭಾಷ್ ಸಾಲಿಯಾನ್ ನೆಲ್ಲಿಕಟ್ಟೆ ಮುಖ್ಯ ಅತಿಥಿಗಳಾಗಿದ್ದರು.

ಈ ಸಂದರ್ಭದಲ್ಲಿ ಪ್ರಶಸ್ತಿ ಪುರಸ್ಕೃತ ಕೃತಿ ದಧೂಟಿಬನವನ್ನು ಬಿಡುಗಡೆ ಗೊಳಿಸಲಾಯಿತು. ತೀರ್ಪುಗಾರರಾದ ಲೇಖಕಿ ವಾಸಂತಿ ಅಂಬಲಪಾಡಿ ಕೃತಿ ಪರಿಚಯ ಮಾಡಿದರು. 2025ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ತುಳು ಕಲಿಕೆಯಲ್ಲಿ ಶೇ.100 ಅಂಕ ಗಳಿಸಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಎ.ಸಿ. ಭಂಡಾರಿ ಅವರನ್ನು ವಿಶೇಷವಾಗಿ ಗೌರವಿಸಲಾಯಿತು.

ವೇದಿಕೆಯಲ್ಲಿ ಬೆಹೆರೈನ್ ಕನ್ನಡ ಸಂಘದ ಅಧ್ಯಕ್ಷ ರಾಜ್‌ಕುಮಾರ್, ಸಾಂಗ್ಲಿ ದಿವಾಕರ ಶೆಟ್ಟಿ, ತುಳು ಸಂಶೋಧಕ ಡಾ.ವಿ.ಕೆ.ಯಾದವ್, ಪ್ರಮುಖರಾದ ಶೋಭಾ ಶೆಟ್ಟಿ, ದಿವಾಕರ ಸನಿಲ್, ತುಳುಕೂಟದ ಪ್ರಧಾನ ಕಾರ್ಯದರ್ಶಿ ಗಂಗಾಧರ ಕಿದಿಯೂರು, ಕೋಶಾಧಿಕಾರಿ ಎಂ.ಜಿ.ಚೈತನ್ಯ ಮೊದಲಾದವರು ಉಪಸ್ಥಿತರಿದ್ದರು.

ತುಳುಕೂಟದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಸ್ವಾಗತಿಸಿ ಪ್ರಾಸ್ತಾವಿಕ ವಾಗಿ ಮಾತನಾಡಿದರು. ನಿವೃತ್ತ ಉಪನ್ಯಾಸಕ ದಯಾನಂದ ಡಿ.ಕಿದಿಯೂರು ಕಾರ್ಯಕ್ರಮ ನಿರೂಪಿಸಿದರು. ಪಣಿಯಾಡಿ ಕಾದಂಬರಿ ಪ್ರಶಸ್ತಿ ಸಂಚಾಲಕ ಪ್ರಕಾಶ್ ಸುವರ್ಣ ಕಟಪಾಡಿ ವಂದಿಸಿದರು.

ಇದಕ್ಕೂ ಮುನ್ನಾ ತುಳುಭಾಷೆಗೆ ರಾಜ್ಯದ ಅಧಿಕೃತ ಭಾಷೆಯ ಗೌರವ ದೊರೆತ ಹಿನ್ನೆಲೆಯಲ್ಲಿ ಕುಂಜಿಬೆಟ್ಟು ಬಸ್ ನಿಲ್ದಾಣದಿಂದ ಐವೈಸಿ ಹಾಲ್‌ವರೆಗೆ ತುಳುವರಿಂದ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ರಘುಪತಿ ಭಟ್ ಮೊದಲಾದವರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X