Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ‘ಎಲ್ಲ ವರ್ಗದವರಲ್ಲಿ ಒಗ್ಗಟ್ಟು...

‘ಎಲ್ಲ ವರ್ಗದವರಲ್ಲಿ ಒಗ್ಗಟ್ಟು ಸಾಧಿಸುವುದೇ ಮುಖ್ಯ ಧ್ಯೇಯವಾಗಲಿ’

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಉಲಮಾಗಳ ಸಭೆಯಲ್ಲಿ ಇಂಗಿತ

ವಾರ್ತಾಭಾರತಿವಾರ್ತಾಭಾರತಿ4 Oct 2026 8:25 PM IST
share
‘ಎಲ್ಲ ವರ್ಗದವರಲ್ಲಿ ಒಗ್ಗಟ್ಟು ಸಾಧಿಸುವುದೇ ಮುಖ್ಯ ಧ್ಯೇಯವಾಗಲಿ’

ಉಡುಪಿ, ಅ.4: 25 ವರ್ಷಗಳನ್ನು ಪೂರೈಸಿ ರಜತ ಮಹೋತ್ಸವ ಸಂಭ್ರಮದಲ್ಲಿರುವ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟವು ಉಡುಪಿ ನಗರದ ವಿ.ಕೆ.ಪ್ಯಾರಡೈಸ್ ಕಟ್ಟಡದಲ್ಲಿ ನೂತನವಾಗಿ ಆರಂಭಿಸಿರುವ ತನ್ನ ಸ್ವಂತ ಕಚೇರಿಯ ಉದ್ಘಾಟನಾ ಸಮಾರಂಭದ ಪ್ರಯುಕ್ತ ರವಿವಾರ ಬೆಳಗ್ಗೆ ಉಲಮಾಗಳ ಸಭೆಯನ್ನು ಒಕ್ಕೂಟದ ಕಚೇರಿಯಲ್ಲಿ ಆಯೋಜಿಸಿತ್ತು.

ಉಡುಪಿ ಜಿಲ್ಲಾ ಸಂಯುಕ್ತ ಜಮಾಅತ್‌ನ ಉಪ ಖಾಝಿ ಮೌಲಾನಾ ಅಬ್ದುಲ್ ರಹ್ಮಾನ್ ಮದನಿ ಮಾತನಾಡಿ, ಜನರ ಪ್ರಗತಿಗಾಗಿ ನಾವು ಯಾವುದೇ ಭಿನ್ನಾಭಿಪ್ರಾಯ ಇಲ್ಲದೆ ಒಂದುಗೂಡಬೇಕು. ಜಾತಿ ಧರ್ಮ ಬೇಧ ಇಲ್ಲದೇ ಎಲ್ಲ ವರ್ಗದ ಜನರ ಸೇವೆಗೆ ಸಂಘಟನೆಯೊಂದು ಅತೀ ಅಗತ್ಯವಾಗಿದ್ದು, ಆ ಕಾರ್ಯವನ್ನು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಸಾಧಿಸಿ ತೋರಿಸಿದೆ ಎಂದು ಅಭಿಪ್ರಾಯ ಪಟ್ಟರು.

ಮೂಳೂರು ಅಲ್ ಇಹ್ಸಾನ್ ಸಮೂಹ ಶಿಕ್ಷಣ ಸಂಸ್ಥೆಗಳ ವ್ಯವಸ್ಥಾಪಕ ಮೌಲಾನಾ ಮುಸ್ತಫಾ ಸಅದಿ ಮಾತನಾಡಿ, ಮುಸ್ಲಿಮರು ಸೇರಿದಂತೆ ಸರ್ವ ಜನರ ಸರ್ವಾಂಗೀಣ ಅಭಿವೃದ್ಧಿಗೆ ಮೀಸಲಾಗಿರುವ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದಲ್ಲಿ ಯಾವುದೇ ಭಿನ್ನತೆಗೆ ಅವಕಾಶ ಇಲ್ಲ. ಮುಸ್ಲಿಮರನ್ನು ಒಂದು ಕಡೆ ಸೇರಿ ಅವರಿಗೆ ಸಿಗಬೇಕಾದ ಸರಕಾರಿ ಸವಲತ್ತು ಸಿಗುವಂತೆ ಮಾಡುವುದು ಮತ್ತು ಸಮಸ್ಯೆ ಎದುರಾದಾಗ ಪರಿಹಾರ ಕಂಡುಕೊಳ್ಳುವುದೇ ಒಕ್ಕೂಟದ ಮುಖ್ಯ ಆಶಯವಾಗಿದೆ. 25 ವರ್ಷಗಳಲ್ಲಿ ಈ ಕಾರ್ಯವನ್ನು ಒಕ್ಕೂಟದ ಸಾಧಿಸಿ ತೋರಿಸಿದೆ. ಮನುಷ್ಯರ ನಡುವಿನ ಒಡಕು ನಿವಾರಣೆ ಮಾಡಿ ಒಗ್ಗಟ್ಟಿನಿಂದ ಮುಂದೆ ಸಾಗುವುದೇ ಒಕ್ಕೂಟದ ಧ್ಯೇಯವಾಗಿದೆ ಎಂದು ತಿಳಿಸಿದರು.

ಹೂಡೆಯ ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಗಳ ಮೌಲಾನಾ ಆದಮ್ ಸಾಹೇಬ್ ಮಾತನಾಡಿ, ಮುಸ್ಲಿಮರು ಪ್ರಪಂಚದ ಯಾವುದೇ ಮೂಲೆಯಲ್ಲಿರುವ ಮುಸ್ಲಿಮರಿಗೆ ಅನ್ಯಾಯ ಅಥವಾ ತೊಂದರೆಯಾದಾಗ ಅವರ ನೋವಿಗೆ ಸ್ಪಂದಿಸಬೇಕು. ಎಲ್ಲರೊಂದಿಗೆ ಐಕ್ಯತೆ, ಪ್ರೀತಿ ಮತ್ತು ಸಾಮರಸ್ಯದಿಂದ ಬಾಳಬೇಕು. ಸಣ್ಣಪುಟ್ಟ ಭಿನ್ನಾಭಿಪ್ರಾಯ ಗಳನ್ನು ಮರೆತು ಒಟ್ಟಾಗಿ ಸಾಗಬೇಕು ಎಂದು ಹೇಳಿದರು.

ಇಂದ್ರಾಳಿ ನೂರಾನಿ ಜಾಮಿಯಾ ಮಸೀದಿಯ ಖತೀಬ್ ಮೌಲಾನಾ ಮಸೀಹುಲ್ಲಾಹ್ ಖಾನ್ ಖಾಸ್ಮಿ ಮಾತನಾಡಿ, ಜಿಲ್ಲಾ ಮುಸ್ಲಿಂ ಒಕ್ಕೂಟಕ್ಕೆ 25 ವರ್ಷಗಳು ತುಂಬಿರುವ ಸಂದರ್ಭದಲ್ಲಿ, ಒಕ್ಕೂಟ ಸ್ವಂತ ಕಚೇರಿ ಹೊಂದಿರುವುದು ಬಹಳ ಪ್ರಮುಖ ಹೆಜ್ಜೆಯಾಗಿದೆ. ಒಕ್ಕೂಟವು ಕೇವಲ ಉಡುಪಿ ಜಿಲ್ಲೆಗೆ ಮಾತ್ರ ಸೀಮಿತವಾಗದೆ, ಇಡೀ ಕರ್ನಾಟಕ ರಾಜ್ಯದ ಮುಸ್ಲಿಮರೆಲ್ಲರೂ ಪರಸ್ಪರ ಒಗ್ಗಟ್ಟಿನಿಂದ ಮತ್ತು ಪರಸ್ಪರ ಸಹಕಾರದೊಂದಿಗೆ ಮುನ್ನಡೆಸಿಕೊಂಡು ಹೋಗುವಂತೆ ಆಗಬೇಕು ಎಂದು ಹಾರೈಸಿದರು

ಶಾಂತಿನಗರ ಜಾಮಿಯಾ ಮಸೀದಿಯ ಖತೀಬ್ ಮೌಲಾನಾ ಶೌಕತ್ ಅಲಿ ರಝ್ವಿ ಮಾತನಾಡಿ, ಮುಸ್ಲಿಮ್ ಒಕ್ಕೂಟವು ಕೇವಲ ಧಾರ್ಮಿಕ ಚಟುವಟಿಕೆಗಳಷ್ಟೇ ಅಲ್ಲದೆ, ಸಮಾಜದ ಸೇವೆ ಮತ್ತು ಜನಸಾಮಾನ್ಯರ ಸಮಸ್ಯೆಗಳ ಪರಿಹಾರಕ್ಕಾಗಿಯೂ ಸಾಕಷ್ಟು ಶ್ರಮಿಸುತ್ತಿದೆ ಎಂದು ತಿಳಿಸಿದರು.

ಕಾರ್ಕಳ ಜಾಮಿಯಾ ಮಸೀದಿಯ ಖತೀಬ್ ಮೌಲಾನಾ ಝಹೀರ್ ಅಹ್ಮದ್ ಖಾಸ್ಮಿ ಉಡುಪಿ ಮುಸ್ಲಿಂ ಒಕ್ಕೂಟ ಸ್ಥಾಪನೆಯಾಗಿ ಸುಮಾರು 25 ವರ್ಷಗಳು ಸಂದಿವೆ. ಮುಸ್ಲಿಮರ ನಡುವೆ ಏಕತೆ ಮೂಡಿಸುವುದು ಈ ಒಕ್ಕೂಟದ ಉದ್ದೇಶವಾಗಿದೆ. ಕಳೆದ 25 ವರ್ಷಗಳಿಂದ ಈ ಸಂಸ್ಥೆಯು ಮುಸ್ಲಿಮರ ನಡುವೆ ಒಗ್ಗಟ್ಟು ಮೂಡಿಸಲು ಶ್ರಮಿಸುತ್ತಿದೆ. ಮುಸ್ಲಿಮರ ನಡುವೆ ಐಕ್ಯತೆ ಇಂದಿನ ಅತ್ಯಂತ ಪ್ರಮುಖ ಅಗತ್ಯವಾಗಿದೆ. ನಮ್ಮ ದೇಶದ ಪ್ರಸ್ತುತ ಪರಿಸ್ಥಿತಿಯನ್ನು ಎದುರಿಸಲು ನಾವೆಲ್ಲರೂ ಒಗ್ಗೂಡಬೇಕಾಗಿದೆ ಎಂದರು.

ಅಧ್ಯಕ್ಷತೆಯನ್ನು ವಹಿಸಿದ್ದ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ಮೌಲಾ ಮಾತನಾಡಿ, ಇವತ್ತು ಒಕ್ಕೂಟಕ್ಕೆ ಐತಿಹಾಸಿಕ ದಿನವಾಗಿದೆ. ಉಲಮಾನಗಳ ದುವಾದಿಂದ ದೇವರ ಅನುಗ್ರಹದಿಂದ ಇಂದು ಒಕ್ಕೂಟವು ನಗರದ ಮಧ್ಯಭಾಗದಲ್ಲಿಯೇ ಸ್ವಂತ ಕಚೇರಿಯನ್ನು ಹೊಂದಲು ಸಾಧ್ಯವಾಗಿದೆ. ಹಾಗೇ ಕಚೇರಿ ಖರೀದಿಸಲು ದಾನಿಗಳು ಸಾಕಷ್ಟು ಸಹಕಾರ ನೀಡಿದ್ದಾರೆ. ಅವರೆಲ್ಲರಿಗೂ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದರು.

ಉಡುಪಿ ಜಾಮಿಯಾ ಮಸೀದಿಯ ಖತೀಬ್ ಮೌಲಾನಾ ಅಬ್ದುಲ್ ರಶೀದ್ ಉಮರಿ ಶುಭಹಾರೈಸಿದರು. ಒಕ್ಕೂಟದ ನಿಕಟಪೂರ್ವ ಜಿಲ್ಲಾಧ್ಯಕ್ಷ ಯಾಸೀನ್ ಮಲ್ಪೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಒಕ್ಕೂಟದ ಸಂಘಟನಾ ಕಾರ್ಯ ದರ್ಶಿ ಮೌಲಾನಾ ಝಮೀರ್ ಅಹ್ಮದ್ ರಶಾದಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ವಿವಿಧ ಮಸೀದಿಗಳ ಇಮಾಮರು, ಖತೀಬರು ಹಾಗೂ ಗಣ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X