Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಕೃಷ್ಣ ಮಠದ ವಸತಿಗೃಹದಲ್ಲಿ...

ಉಡುಪಿ ಕೃಷ್ಣ ಮಠದ ವಸತಿಗೃಹದಲ್ಲಿ ಮುಸ್ಲಿಮ್ ಯುವತಿಗೆ ಅನುಮತಿ ನಿರಾಕರಣೆ: ಸಿಪಿಎಂ ಖಂಡನೆ

ವಾರ್ತಾಭಾರತಿವಾರ್ತಾಭಾರತಿ5 Oct 2026 5:38 PM IST
share
ಉಡುಪಿ ಕೃಷ್ಣ ಮಠದ ವಸತಿಗೃಹದಲ್ಲಿ ಮುಸ್ಲಿಮ್ ಯುವತಿಗೆ ಅನುಮತಿ ನಿರಾಕರಣೆ: ಸಿಪಿಎಂ ಖಂಡನೆ

ಉಡುಪಿ, ಅ.5: ಹಿಂದೂ ಕುಟುಂಬದ ಸ್ನೇಹಿತೆಯೊಂದಿಗೆ ಪ್ರವಾಸಕ್ಕಾಗಿ ಉಡುಪಿಗೆ ಬಂದಿದ್ದ ಬಳ್ಳಾರಿಯ ಯುವತಿಗೆ ಮುಸ್ಲಿಂ ಧರ್ಮಕ್ಕೆ ಸೇರಿದವರು ಎಂಬ ಕಾರಣಕ್ಕೆ ರಾತ್ರಿ ಉಳಿದುಕೊಳ್ಳಲು ಅನುಮತಿ ನಿರಾಕರಿಸಿದ ಮಠದ ವಸತಿ ಗೃಹದ ಅಧಿಕಾರಿಗಳ ಕೃತ್ಯವನ್ನು ಸಿಪಿಎಂ ಉಡುಪಿ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದೆ.

ಬಳ್ಳಾರಿ ಜಿಲ್ಲೆಯ ಮಸ್ಲಿಂ ಯುವತಿ ತನ್ನ ಸ್ನೇಹಿತೆ ಶಕುಂತಲಾ ಮತ್ತು ಅವರ ಕುಟುಂಬದೊಂದಿಗೆ ಪ್ರವಾಸಕ್ಕಾಗಿ ಉಡುಪಿ ಜಿಲ್ಲೆಗೆ ಆಗಮಿಸಿದ್ದು ಕೃಷ್ಣ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ಅ.3ರಂದು ರಾತ್ರಿ ಉಳಿದು ಕೊಳ್ಳಲು ಕೃಷ್ಣ ಮಠದ ವಸತಿ ಗೃಹಕ್ಕೆ ಆಗಮಿಸಿದ್ದರು. ಆ ವೇಳೆ ರಾತ್ರಿ 8 ಗಂಟೆ ಆಗಿತ್ತು. ಎಲ್ಲರ ಆಧಾರ್ ಕಾರ್ಡ್ ಪರಿಶೀಲಿಸಿದ ವಸತಿ ಗೃಹದ ಅಧಿಕಾರಿಗಳು ಮುಸ್ಲಿಂ ಯುವತಿಗೆ ರಾತ್ರಿ ಉಳಿದುಕೊಳ್ಳಲು ಅವಕಾಶ ನೀಡಲಿಲ್ಲ. ಸ್ನೇಹಿತೆ ಶಕುಂತಲಾ ಅವರ ಕುಟುಂಬದ ಹಿರಿಯರು, ಆಕೆ ನಮ್ಮ ಮೊಮ್ಮಗಳು ಇದ್ದಂತೆ, ಅಲ್ಲದೆ ರಾತ್ರಿ ಹೊತ್ತಿನಲ್ಲಿ ಅಪರಿಚಿತ ನಗರದಲ್ಲಿ ಒಬ್ಬಳೇ ಎಲ್ಲಿಗೆ ಹೋಗುವುದು ಎಂದು ಅಂಗಲಾಚಿದರೂ ವಸತಿ ಗೃಹದ ಅಧಿಕಾರಿಗಳು ಕೇಳಲಿಲ್ಲ.

ಹಿಂದೆ ಪೇಜಾವರ ಮಠದ ವಿಶ್ವೇಶ್ವರತೀರ್ಥ ಸ್ವಾಮೀಜಿ ತನ್ನ ಕಾರಿನ ಚಾಲಕ ಮುಸ್ಲಿಂ ಧರ್ಮವನ್ನು ಅನುಸರಿಸುವ ವನಾಗಿದ್ದರೂ, ಅವರನ್ನು ಆದರದಿಂದ ನೋಡುತ್ತಿದ್ದುದು ಮಾತ್ರವಲ್ಲದೆ ಇಫ್ತಾರ್ ಕೂಟವನ್ನೂ ಆಯೋಜಿಸಿದ್ದರು. ಉಡುಪಿಯ ಕೊಡುಗೈ ದಾನಿಯೆಂದೇ ಹೆಸರು ಹೊಂದಿದ್ದ ಹಾಜಿ ಅಬ್ದುಲ್ಲಾ ಸಾಹೇಬ್ ಮಠದ ಭಕ್ತರಾಗಿದ್ದು ಮಾತ್ರವಲ್ಲ ದೀಪೋತ್ಸವ ಸಂದರ್ಭದಲ್ಲಿ ತೊಂದರೆಗೆ ಒಳಗಾದ ಮಠಕ್ಕೆ ದೀಪದ ಎಣ್ಣೆ ಒದಗಿಸಿರುವುದನ್ನು ಉಡುಪಿಯ ಜನರು ಇಂದಿಗೂ ನೆನಪಿಸಿಕೊಳ್ಳುತ್ತಾರೆ.

ಇಂತಹ ಸೌಹಾರ್ದ ಪರಂಪರೆ ಇರುವ ಉಡುಪಿಯಲ್ಲಿ ಮತ್ತು ಮಠದಲ್ಲಿ ರಾತ್ರಿ ಹೊತ್ತಿನಲ್ಲಿ ಮುಸ್ಲಿಂ ಯುವತಿಗೆ ಉಳಿದುಕೊಳ್ಳಲು ಅವಕಾಶ ನೀಡದೆ ಇರುವುದು ಅಕ್ಷಮ್ಯ ಅಪರಾಧ. ಇಂತಹ ಘಟನೆಗಳು ಮರುಕಳಿಸಬಾರದೆಂದು ಮಠದ ಅಧಿಕಾರಿಗಳಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಬೇಕೆಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X