Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಂಘಟನೆಯೇ ದಲಿತರ ಶಕ್ತಿ: ಸಂಜೀವ ಬಳ್ಕೂರು

ಸಂಘಟನೆಯೇ ದಲಿತರ ಶಕ್ತಿ: ಸಂಜೀವ ಬಳ್ಕೂರು

ವಾರ್ತಾಭಾರತಿವಾರ್ತಾಭಾರತಿ5 Oct 2026 7:25 PM IST
share
ಸಂಘಟನೆಯೇ ದಲಿತರ ಶಕ್ತಿ: ಸಂಜೀವ ಬಳ್ಕೂರು

ಉಡುಪಿ, ಅ.5: ದಲಿತ ಹಕ್ಕುಗಳ ಸಮಿತಿ ಅಂಪಾರು-ಬಾಲಾಡಿ ಘಟಕದ ಸಭೆಯು ಅ.4ರಂದು ಜಿಲ್ಲಾ ಅಧ್ಯಕ್ಷ ಸಂಜೀವ ಬಳ್ಕೂರು ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಮಾತನಾಡಿದ ಸಂಜೀವ ಬಳ್ಕೂರು, ಪ್ರಸ್ತುತ ಸಂಘಟನೆಯ ವತಿಯಿಂದ ನಡೆಸಲಾಗುತ್ತಿರುವ ವಿವಿಧ ಹೋರಾಟಗಳು ಹಾಗೂ ಸಂಘಟನೆಯ ಕಾರ್ಯಚಟುವಟಿಕೆಗಳ ಕುರಿತು ವಿವರವಾಗಿ ಮಾಹಿತಿ ನೀಡಿದರು. ಸಂಘಟನೆಯೇ ದಲಿತರ ಶಕ್ತಿ ಆಗಿದೆ ಎಂದು ಅವರು ಹೇಳಿದರು.

ಮನೋಜ್ ಸ್ಥಳೀಯವಾಗಿ ಎದುರಾಗುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಸಭೆಯ ಗಮನಕ್ಕೆ ತಂದು, ಮುಂದಿನ ದಿನಗಳಲ್ಲಿ ಕೈಗೊಳ್ಳಬಹುದಾದ ಹೋರಾಟಗಳು ಹಾಗೂ ಸಂಘಟನೆಯ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಕುರಿತು ತಮ್ಮ ಅಭಿಪ್ರಾಯಗಳನ್ನು ತಿಳಿಸಿದರು.

ಗುರುಮೂರ್ತಿ ಸಂಘಟನೆಯ ಮಹತ್ವ, ಸಂಘಟನೆಯ ಒಗ್ಗಟ್ಟು ಹಾಗೂ ಸದಸ್ಯರ ಸಕ್ರಿಯ ಭಾಗವಹಿಸುವಿಕೆಯ ಅಗತ್ಯತೆಯ ಕುರಿತು ಮಾತನಾಡಿದರು. ಸಭೆಯಲ್ಲಿ ಸಂಘಟನೆಯನ್ನು ಮುಂದಿನ ದಿನಗಳಲ್ಲಿ ಮತ್ತಷ್ಟು ಬಲಪಡಿಸು ವುದು, ಹೆಚ್ಚಿನ ಜನರನ್ನು ಸಂಘಟನೆಯೊಂದಿಗೆ ಸಂಪರ್ಕಿಸುವುದು ಹಾಗೂ ಜನರಲ್ಲಿ ಸಂಘಟನೆಯ ಅರಿವು ಮೂಡಿಸುವ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು.

ಅದೇ ರೀತಿ, ನಿವೇಶನ ಹಾಗೂ ವಸತಿ ರಹಿತರ ಸಮಸ್ಯೆಗಳಿಗೆ ಸಂಬಂಧಿಸಿದಂತೆ, ಅರ್ಹ ಫಲಾನುಭವಿಗಳನ್ನು ಒಗ್ಗೂಡಿಸಿ ಸಂಘಟನೆಯ ಮುಖಂಡರ ನೇತೃತ್ವದಲ್ಲಿ ಸಂಬಂಧಪಟ್ಟ ಗ್ರಾಪಂಗೆ ಅರ್ಜಿ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಸಂಘಟನೆಯ ಕಾರ್ಯಚಟುವಟಿಕೆ ಗಳನ್ನು ನಿರಂತರವಾಗಿ ನಡೆಸಿಕೊಂಡು ಹೋಗುವ ಉದ್ದೇಶದಿಂದ ಪ್ರತಿ ತಿಂಗಳಿಗೊಮ್ಮೆ ಸಭೆ ನಡೆಸುವಂತೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಸಭೆಯಲ್ಲಿ ಮುಖಂಡರಾದ ಬಾಬು ಬಳ್ಕೂರು, ರಾಜೀವ, ಜಯರಾಮ, ಸುವರ್ಣ, ಜಯಕರ, ಭೋಜ, ನಾಗರಾಜ, ಮಂಜು ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X