ಪ್ರತ್ಯೇಕ ಪ್ರಕರಣ: ಮೂವರ ಆತ್ಮಹತ್ಯೆ

ಬೈಂದೂರು, ಅ.5: ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆ ಗೊಂಡು ಅ.1ರಂದುಪ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯಡ್ತರೆ ಗ್ರಾಮದ ರಂಗನಾಥ(56) ಎಂಬವರು ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅ.4ರಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಕಳ: ಬೋಳ ಗ್ರಾಮದ ಪಿಲಿಯೂರ ಪದವು ನಿವಾಸಿ ಸಂತೋಷ್ ಆಚಾರ್ಯ (39) ಎಂಬವರು ಅ.3ರಂದು ರಾತ್ರಿ ವೇಳೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಮೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿರಿಯಡ್ಕ: ಅನಾರೋಗ್ಯದಿಂದ ಬಳಲುತ್ತಿದ್ದ ಪೆರ್ಡೂರು ಕುಕ್ಕುಂಜಾರು ನಿವಾಸಿ ಶೇಖರ ಕುಲಾಲ್ (61) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಅ.4ರಂದು ಬೆಳಗ್ಗೆ ಮನೆಯ ಹೊರಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




