Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ‘ಆನ್‌ಲೈನ್ ಪಾಮಿಸ್ಟ್ರಿ’ ಆ್ಯಪ್‌ಗಳ ಬಳಕೆ...

‘ಆನ್‌ಲೈನ್ ಪಾಮಿಸ್ಟ್ರಿ’ ಆ್ಯಪ್‌ಗಳ ಬಳಕೆ ಬಗ್ಗೆ ಎಚ್ಚರಿಕೆ ಅಗತ್ಯ

ಸೈಬರ್ ಸುರಕ್ಷತೆ-ಆನ್‌ಲೈನ್ ವಂಚನೆ ಕುರಿತು ವಿಶೇಷ ಉಪನ್ಯಾಸ

ವಾರ್ತಾಭಾರತಿವಾರ್ತಾಭಾರತಿ7 Oct 2026 7:48 PM IST
share
‘ಆನ್‌ಲೈನ್ ಪಾಮಿಸ್ಟ್ರಿ’ ಆ್ಯಪ್‌ಗಳ ಬಳಕೆ ಬಗ್ಗೆ ಎಚ್ಚರಿಕೆ ಅಗತ್ಯ

ಉಡುಪಿ, ಅ.7: ಅಜ್ಜರಕಾಡಿನ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ರಾಷ್ಟ್ರೀಯ ಸೇವಾ ಯೋಜನೆ(ಎನ್‌ಎಸ್‌ಎಸ್) ಹಾಗೂ ಉಡುಪಿ ಮಹಿಳಾ ಪೊಲೀಸ್ ಠಾಣೆಯ ಸಹಯೋಗದಲ್ಲಿ ವಿದ್ಯಾರ್ಥಿನಿಯರಿಗೆ ಸೈಬರ್ ಸುರಕ್ಷತೆ ಹಾಗೂ ಆನ್‌ಲೈನ್ ವಂಚನೆ ಕುರಿತು ವಿಶೇಷ ಉಪನ್ಯಾಸ ಬುಧವಾರ ನಡೆಯಿತು.

ಪೊಲೀಸ್ ಕಾನ್ಸ್ಟೆಬಲ್ ಮಹದೇವ ಜಿ.ಆರ್. ಮಾತನಾಡಿ, ಸೈಬರ್ ವಂಚಕರು ಅನುಸರಿಸುವ ವಿಧಾನಗಳ ಕುರಿತು ವಿವರಿಸಿದರು. ಆನ್‌ಲೈನ್ ನಲ್ಲಿ ವಸ್ತುಗಳನ್ನು ಖರೀದಿಸಿದ ಬಳಿಕ ಗ್ರಾಹಕರಿಗೆ ಆಕರ್ಷಕ ಕೊಡುಗೆಗಳ ಹೆಸರಿನಲ್ಲಿ ಸಂದೇಶಗಳು ಅಥವಾ ಲಿಂಕ್‌ಗಳು ಬರುತ್ತವೆ. ಅವುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸದೆ ಕ್ಲಿಕ್ ಮಾಡಿದಾಗ ವಂಚಕರು ವೈಯಕ್ತಿಕ ಹಾಗೂ ಹಣಕಾಸು ಮಾಹಿತಿಯನ್ನು ಪಡೆದುಕೊಳ್ಳುತ್ತಾರೆ. ಕೆಲ ಸಂದರ್ಭಗಳಲ್ಲಿ ಒಟಿಪಿಯನ್ನೂ ಪಡೆದು ವಂಚನೆ ಎಸಗುತ್ತಾರೆ ಎಂದು ತಿಳಿಸಿದರು.

ಇತ್ತೀಚೆಗೆ ಉಡುಪಿಯ ಎಂಬಿಬಿಎಸ್ ವೈದ್ಯರೊಬ್ಬರು 1.20 ಕೋಟಿ ರೂ. ವಂಚನೆಗೆ ಒಳಗಾದ ಪ್ರಕರಣವನ್ನು ಅವರು ಉಲ್ಲೇಖಿಸಿದರು. ಪ್ರಕರಣದ ಆರೋಪಿಯನ್ನು ದಕ್ಷಿಣ ಕೊರಿಯಾದಲ್ಲಿ ಪತ್ತೆಹಚ್ಚಲಾಗಿದ್ದು, ಜನರನ್ನು ವಂಚಿಸಲು ವರ್ಚುವಲ್ ಪ್ರೈವೇಟ್ ನೆಟ್‌ವರ್ಕ್(ವಿಪಿಎನ್) ಬಳಸ ಲಾಗಿತ್ತು ಎಂದು ಹೇಳಿದರು. ‘ಆನ್‌ಲೈನ್ ಪಾಮಿಸ್ಟ್ರಿ’(ಹಸ್ತಸಾಮುದ್ರಿಕ) ಆ್ಯಪ್‌ಗಳ ಬಳಕೆಯ ಬಗ್ಗೆಯೂ ಎಚ್ಚರಿಕೆ ನೀಡಿದ ಅವರು, ಇಂತಹ ಆ್ಯಪ್‌ಗಳ ಮೂಲಕ ಬೆರಳಚ್ಚು ಸೇರಿದಂತೆ ಸೂಕ್ಷ್ಮ ಬಯೋಮೆಟ್ರಿಕ್ ಮಾಹಿತಿಯು ಆನ್‌ಲೈನ್ ಸೋರಿಕೆಯಾಗುವ ಸಾಧ್ಯತೆ ಇದೆ ಎಂದರು.

ಇ-ಮೇಲ್ ಪಾಸ್ವರ್ಡ್‌ಗಳನ್ನು ಆಗಾಗ ಬದಲಾಯಿಸುವುದು ಸೈಬರ್ ವಂಚನೆಯನ್ನು ತಡೆಯುವ ಒಂದು ಕ್ರಮವಾಗಿದೆ. ಆ್ಯಪ್‌ಗಳನ್ನು ಡೌನ್ಲೋಡ್ ಮಾಡಲು ಬಳಸುವ ಇ-ಮೇಲ್ ಖಾತೆ ಹ್ಯಾಕ್ ಆದರೆ ಅದರ ಮೂಲಕ ವೈಯಕ್ತಿಕ ಮಾಹಿತಿಯನ್ನು ವಂಚಕರು ಪಡೆಯುವ ಸಾಧ್ಯತೆ ಇದೆ ಎಂದು ಅವರು ಎಚ್ಚರಿಸಿದರು.

ಅಪರಿಚಿತ ಲಿಂಕ್‌ಗಳು ಹಾಗೂ ಕೊಡುಗೆಗಳ ಸಂದೇಶಗಳನ್ನು ಪರಿಶೀಲಿಸದೆ ಕ್ಲಿಕ್ ಮಾಡಬಾರದು. ಒಟಿಪಿ, ಪಾಸ್ವರ್ಡ್ ಸೇರಿದಂತೆ ಯಾವುದೇ ಗೌಪ್ಯ ಮಾಹಿತಿಯನ್ನು ಅಪರಿಚಿತರಿಗೆ ನೀಡಬಾರದು. ಸೈಬರ್ ವಂಚನೆಗೆ ಒಳಗಾದವರು ಕೂಡಲೇ 1930 ಸೈಬರ್ ಕ್ರೈಂ ಸಹಾಯವಾಣಿಗೆ ಕರೆ ಮಾಡಬೇಕು ಎಂದು ಅವರು ಸಲಹೆ ನೀಡಿದರು.

ಕಾಲೇಜಿನ ಪ್ರಾಂಶುಪಾಲೆ ಪ್ರೊ.ನಿಕೇತನ ಮಾತನಾಡಿದರು. ಎಎಸ್‌ಐ ದಿನೇಶ್, ಪೊಲೀಸ್ ಕಾನ್ಸ್ಟೆಬಲ್ ಮಹಾಲಕ್ಷ್ಮಿ, ಎಂ.ಕಾಂ ಸಂಯೋಜಕ ಡಾ. ಅಬ್ದುಲ್ ರಜಾಕ್ ಹಾಗೂ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ರಾಕೇಶ್ ಉಪಸ್ಥಿತರಿದ್ದರು. ಕೃತಿಕಾ ಕಾರ್ಯಕ್ರಮ ನಿರೂಪಿಸಿದರು. ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಡಾ.ಸಫಿಯಾ ಸ್ವಾಗತಿಸಿದರು. ಶ್ರಾವಣಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X