Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಭೋವಿಗಳು ಮಕ್ಕಳ ಶಿಕ್ಷಣಕ್ಕೆ ವಿಶೇಷ...

ಭೋವಿಗಳು ಮಕ್ಕಳ ಶಿಕ್ಷಣಕ್ಕೆ ವಿಶೇಷ ಆದ್ಯತೆ ನೀಡಿ: ರಾಮಪ್ಪ ಎಂ.

ವಾರ್ತಾಭಾರತಿವಾರ್ತಾಭಾರತಿ7 Oct 2026 8:49 PM IST
share
ಭೋವಿಗಳು ಮಕ್ಕಳ ಶಿಕ್ಷಣಕ್ಕೆ ವಿಶೇಷ ಆದ್ಯತೆ ನೀಡಿ: ರಾಮಪ್ಪ ಎಂ.

ಉಡುಪಿ, ಅ.7: ಕರಾವಳಿಯಲ್ಲಿರುವ ಭೋವಿ (ವಡ್ಡರ) ಸಮುದಾಯ ಶಿಕ್ಷಣದಲ್ಲಿ ಈಗಲೂ ತುಂಬಾ ಹಿಂದುಳಿದಿದೆ. ಸಮಾಜದಲ್ಲಿ ಮುಖ್ಯ ವಾಹಿನಿಗೆ ಬರಲು ಶಿಕ್ಷಣ ಅತಿ ಅಗತ್ಯವಾಗಿರುವುದರಿಂದ ಸಮುದಾಯದ ಹಿರಿಯರು ಮಕ್ಕಳ ಶಿಕ್ಷಣಕ್ಕೆ ವಿಶೇಷ ಆದ್ಯತೆ ನೀಡಬೇಕು ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಪ್ಪ ಎಂ. ಹೇಳಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಿಗಮದ ವಿವಿಧ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಹಾಗೂ ಉಭಯ ಜಿಲ್ಲೆಗಳ ಸಮುದಾಯದ ಮುಖಂಡ ರೊಂದಿಗೆ ಸಮಾಲೋಚನಾ ಸಭೆ ನಡೆಸಿದ ಬಳಿಕ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡುತಿದ್ದರು.

ನಿಗಮದ ಪರವಾಗಿ ತಾನು ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಚಂದ್ರಾ ನಾಯ್ಕ್ ಅವರೊಂದಿಗೆ ರಾಜ್ಯಾ ದ್ಯಂತ ಪ್ರವಾಸ ಕೈಗೊಂಡಿದ್ದು, ಈಗಾಗಲೇ 22 ಜಿಲ್ಲೆಗಳ ಪ್ರವಾಸ ಮುಗಿಸಿ 23ನೇ ಜಿಲ್ಲೆಯಾಗಿ ಇಲ್ಲಿಗೆ ಬಂದಿ ದ್ದೇವೆ. ಇಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಪ್ರಗತಿ ಪರಿಶೀಲನೆ ನಡೆಸಿದ್ದೇವೆ ಎಂದರು.

ಪರಿಶಿಷ್ಟ ಜಾತಿಗೆ ಸೇರಿದ ಭೋವಿ ಅಥವಾ ವಡ್ಡರ ಜನಾಂಗದ ಅಭಿವೃದ್ಧಿ ಯನ್ನು ಗಮನದಲ್ಲಿಟ್ಟುಕೊಂಡು 2016 ರಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲಾಗಿದೆ.ಭೋವಿ ಜಾತಿಯ ಐತಿಹಾಸಿಕ ಹಿನ್ನೆಲೆ, ಸಾಂಪ್ರದಾಯಿಕ ಕುಲಕಸಬು, ಹಬ್ಬಗಳ ಆಚರಣೆ, ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳ ಆಧಾರ ದಲ್ಲಿ ಪರಿಶಷ್ಟ ಜಾತಿಯ 9 ಜಾತಿ/ಉಪಜಾತಿಗಳನ್ನು (ಭೋವಿ, ಒಡ್ಡರ್, ವಡ್ಡರ್, ವಡ್ಡರ, ಕಲ್ಲು ಒಡ್ಡರ, ಮಣ್ಣುವಡ್ಡರ ಇತ್ಯಾದಿ) ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಯೋಜನೆಗಳ ಸೌಲಭ್ಯ ಪಡೆಯಲು ಗುರುತಿಸಲಾಗಿದೆ ಎಂದರು.

ಬೆಂಗಳೂರು, ವಿಜಯಪುರ, ಚಿತ್ರದುರ್ಗ, ಕೋಲಾರ ಮುಂತಾದ ಜಿಲ್ಲೆಗಳಲ್ಲಿ ಭೋವಿಗಳ ಜನಸಂಖ್ಯೆ ಅಧಿಕವಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ (3700+) ಮತ್ತು ದಕ್ಷಿಣ ಕನ್ನಡ (2500+) ಜಿಲ್ಲೆಗಳಲ್ಲಿ ಇವರ ಜನಸಂಖ್ಯೆ ಸುಮಾರು 6000ದಷ್ಟಿದೆ. ಕಲ್ಲು ಒಡೆಯುವ ಕುಲಕಸಬನ್ನು ಇವರು ಮುಂದುವರಿಸಿದರೂ, ಇಲ್ಲಿ ಇತರ ಉದ್ಯೋಗ ವನ್ನು ಮಾಡುತಿದ್ದು, ತೀರಾ ಹಿಂದುಳಿದ ಜನಾಂಗವಾದ ಇವರು ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿಲ್ಲ ಎಂದರು.

ಪ್ರಸ್ತುತ ಉಭಯ ಜಿಲ್ಲೆಗಳಲ್ಲಿ ಇವರನ್ನು ಸಂಘಟಿಸುವ ಮೂಲಕ ನಿಗಮದ ವಿವಿಧ ಯೋಜನೆಗಳನ್ನು ಇವರಿಗೆ ತಲುಪಿಸಲು ಪ್ರಯತ್ನಿಸಲಾಗುತ್ತಿದೆ. ಈ ಎರಡು ಜಿಲ್ಲೆಗಳಲ್ಲಿ ಇವರು ಭೂಒಡೆತನವನ್ನು ಹೊಂದಿಲ್ಲದ ಕಾರಣ ಗಂಗಾ ಕಲ್ಯಾಣದಂಥ ಕಾರ್ಯಕ್ರಮಗಳನ್ನು ಇವರಿಗೆ ನೀಡಲು ಸಾಧ್ಯವಾಗುತ್ತಿಲ್ಲ ಎಂದರು.

ಇದೀಗ ಸಮುದಾಯದ ಮಹಿಳೆಯರ ಹೆಸರಿನಲ್ಲಿ ಭೂಖರೀದಿಗಾಗಿ ಪ್ರತಿ ಕುಟುಂಬಕ್ಕೆ 20 ಲಕ್ಷ ರೂ.ಗಳನ್ನು ನೀಡಲಾಗುತ್ತಿದೆ. ಇದರಲ್ಲಿ 10 ಲಕ್ಷ ರೂ.ಸಾಲ ಹಾಗೂ 10 ಲಕ್ಷ ರೂ.ಸಹಾಯಧನ. ಮಹಿಳಾ ಸಬಲೀಕರಣಕ್ಕೆ ವಿಶೇಷ ಯೋಜನೆಗಳನ್ನು ಇವರಿಗಾಗಿ ಜಾರಿಗೊಳಿಸಲಾಗುತ್ತಿದ್ದು, ಇಲಾಖೆಯ ಅಧಿಕಾರಿಗಳು ವಿಶೇಷ ಮುತುವರ್ಜಿ ವಹಿಸುವಂತೆ ಸೂಚಿಸಲಾಗಿದೆ ಎಂದು ರಾಮಪ್ಪ ತಿಳಿಸಿದರು.

ಕರಾವಳಿಯಲ್ಲಿ ಮಾತ್ರ ಭೋವಿ ಯಾನೆ ವಡ್ಡರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆಯಲು ಕೆಲವು ತಾಂತ್ರಿಕ ಸಮಸ್ಯೆಗಳು ಎದುರಾಗಿದ್ದು, ಅದನ್ನು ಸರಿಪಡಿಸಲು ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರೊಂದಿಗೆ ಸಮಾಲೋ ಚನೆ ನಡೆಸಲಾಗಿದೆ. ಎಸ್‌ಸಿ ಜಾತಿ ಪ್ರಮಾಣ ಪತ್ರ ಸಿಕ್ಕಿದರೆ ಮಾತ್ರ ಇವರು ಶಿಕ್ಷಣ ಕ್ಷೇತ್ರದಲ್ಲಿ ಮುಂದೆ ಬರಲು ಸಾಧ್ಯವಾಗುವ ಹಿನ್ನೆಲೆಯಲ್ಲಿ ಈ ಬಗ್ಗೆ ತಕ್ಷಣವೇ ಸೂಕ್ತ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಗಳಿಗೆ ಸೂಚಿಸಲಾಗಿದೆ ಎಂದು ರಾಮಪ್ಪ ಹೇಳಿದರು.

ನಿಗಮದ ಎಂ.ಡಿ. ಚಂದ್ರಾ ನಾಯ್ಕ್ ಹಾಗೂ ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X