ಕಲ್ಯಾ ಶಾಲೆಯಲ್ಲಿ ಉಚಿತ ಕಾನೂನು ಅರಿವು ಕಾರ್ಯಕ್ರಮ

ಉಡುಪಿ, ಅ.8:ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಮತ್ತು ಕಾರ್ಕಳ ತಾಲೂಕು ಕಲ್ಯಾದ ಸರಕಾರಿ ಪ್ರೌಢಶಾಲೆಗಳ ಜಂಟಿ ಸಹಯೋಗದಲ್ಲಿ ಗ್ರಾಹಕ ಸಂರಕ್ಷಣಾ ಕಾಯ್ದೆ-2019ರ ಕುರಿತು ಉಚಿತ ಕಾನೂನು ಅರಿವು ಕಾರ್ಯಕ್ರಮ ಇತ್ತೀಚೆಗೆ ಶಾಲೆಯಲ್ಲಿ ನಡೆಯಿತು.
ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಸುನೀಲ ಟಿ. ಮಾಸರಡ್ಡಿ ಕಾರ್ಯಕ್ರಮ ಉದ್ಘಾಟಿಸಿ, ಕಾನೂನು ಅರಿವು ಮೂಡಿಸಿದರು. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯೆ ಸುಜಾತ ಬಿ ಕೋರಳ್ಳಿ, ಗ್ರಾಹಕ ಸಂರಕ್ಷಣಾ ಕಾಯ್ದೆ 2019ರ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಕಲ್ಯಾ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ರಾಮ ಮೊಗೇರ, ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ರವೀಂದ್ರ ನಾಯ್ಕ ಹಾಗೂ ಇತರರು ಉಪಸ್ಥಿತರಿದ್ದರು.
Next Story




