ಯುವತಿ ನಾಪತ್ತೆ

ಉಡುಪಿ, ಅ.8: ಉಡುಪಿ ಬೀಡಿನಗುಡ್ಡೆ ಹುಲ್ಲಿಕೇರಿ ಪರಿಸರದಲ್ಲಿ ವಾಸವಾಗಿದ್ದ ಐಶ್ವರ್ಯ (18) ಎಂಬ ಯುವತಿ ಮನೆಗೆಲಸ ಮಾಡಿ ಕೊಂಡಿದ್ದು, ಸೆ.28ರಂದು ಮನೆಯಿಂದ ಹೊರಗೆ ಹೋದವರು ಈವರೆಗೂ ಮರಳಿ ಬಾರದೇ ನಾಪತ್ತೆಯಾಗಿದ್ದಾರೆ.
4 ಅಡಿ 10 ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆ ದೂ.ಸಂಖ್ಯೆ: 0820- 2520444, ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820- 2526444, ಪೊಲೀಸ್ ನಿರೀಕ್ಷಕರು ದೂ.ಸಂಖ್ಯೆ: 9480805408 ಹಾಗೂ ಪೊಲೀಸ್ ಉಪ ನಿರೀಕ್ಷಕರು, ಉಡುಪಿ ದೂ.ಸಂಖ್ಯೆ: 9080805445 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Next Story




