Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅರಾಟೆ ಬಳಿ ಕಾರು ಡಿಕ್ಕಿ: ಸ್ಕೂಟರ್ ಸವಾರ...

ಅರಾಟೆ ಬಳಿ ಕಾರು ಡಿಕ್ಕಿ: ಸ್ಕೂಟರ್ ಸವಾರ ಮೃತ್ಯು

ಸೇತುವೆ ಆಮೆಗತಿಯ ಕಾಮಗಾರಿಯಿಂದ ಗೊಂದಲ: ಆರೋಪ

ವಾರ್ತಾಭಾರತಿವಾರ್ತಾಭಾರತಿ12 Oct 2026 8:45 PM IST
share
ಅರಾಟೆ ಬಳಿ ಕಾರು ಡಿಕ್ಕಿ: ಸ್ಕೂಟರ್ ಸವಾರ ಮೃತ್ಯು

ಕುಂದಾಪುರ, ಅ.12: ಮುಳ್ಳಿಕಟ್ಟೆ ಅರಾಟೆ ಸೇತುವೆ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಸೋಮವಾರ ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರರೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮೃತರನ್ನು ಕುಂದಾಪುರ ನಗರದ ಭಂಡಾರ್ಕಾರ್ಸ್ ರಸ್ತೆ ನಿವಾಸಿ ಅಜಿತ್ ಪೌಲ್ ಲೂಯಿಸ್(55) ಎಂದು ಗುರುತಿಸ ಲಾಗಿದೆ. ಮುಳ್ಳಿಕಟ್ಟೆ ಸಮೀಪದ ಶಿಕ್ಷಣ ಸಂಸ್ಥೆಯಲ್ಲಿ ಓದುತ್ತಿದ್ದ ಪುತ್ರಿಯ ಶೈಕ್ಷಣಿಕ ಪ್ರಗತಿ ತಿಳಿಯಲು ಸೋಮವಾರ ಮಧ್ಯಾಹ್ನದ ಸುಮಾರಿಗೆ ಶಾಲೆಗೆ ಭೇಟಿಯಾಗಲೆಂದು ತೆರಳುತ್ತಿದ್ದ ವೇಳೆ ಈ ಅವಘಡ ನಡೆದಿದೆ.

ಇದರಿಂದ ಗಂಭೀರವಾಗಿ ಗಾಯಗೊಂಡ ಅವರನ್ನು ಎಂ.ಎಚ್.ಐ ತುರ್ತು ಆಪತ್ಪಾಂಧವ ಆಂಬುಲೆನ್ಸ್ ಚಾಲಕ ಇಬ್ರಾಹಿಂ ಗಂಗೊಳ್ಳಿ ಹಾಗೂ ಅಬ್ರಾರ್ ಗಂಗೊಳ್ಳಿ ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಆದರೆ ಪರೀಕ್ಷಿಸಿದ ವೈದ್ಯರು ಅಜಿತ್ ಮೃತಪಟ್ಟಿದ್ದಾಗಿ ದೃಢಪಡಿಸಿದ್ದಾರೆ.

ಕಾರು ಚಾಲಕನ ವೇಗದ ಚಾಲನೆ, ನಿರ್ಲಕ್ಷ್ಯವೂ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು ಕಾರು ವೇಗವಾಗಿದ್ದ ಕಾರಣ ಕೆಲ ದೂರ ಸ್ಕೂಟಿ ಸಮೇತ ಸವಾರನನ್ನು ಎಳೆದೊಯ್ದಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕುಂದಾಪುರ ಸಂಚಾರ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಅನೂಪ್ ನಾಯಕ್, ಸುಧಾ ಪ್ರಭು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೃತ ಅಜಿತ್ ಪೌಲ್ ದೆಹಲಿಯಲ್ಲಿ ಕಂಪೆನಿಯೊಂದರಲ್ಲಿ ಜನರಲ್ ಮ್ಯಾನೇಜರ್ ಆಗಿದ್ದು ವರ್ಷದಲ್ಲಿ ನಾಲ್ಕೈದು ಬಾರಿ ಊರಿಗೆ ಬರುತ್ತಿದ್ದರು. ಈ ಬಾರಿ ತಾಯಿ ಅನಾರೋಗ್ಯದ ಹಿನ್ನೆಲೆ ಕಳೆದ 8-10 ದಿನಗಳ ಹಿಂದಷ್ಟೆ ಊರಿಗೆ ಆಗಮಿಸಿದ್ದರು. ಕುಂದಾಪುರ ಹೊರವಲಯದಲ್ಲಿರುವ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಮೃತರ ಪತ್ನಿ ಇಂಗ್ಲೀಷ್ ಪ್ರಾಧ್ಯಾಪಕಿಯಾಗಿದ್ದಾರೆ.

ಆಮೆಗತಿ ಕಾಮಗಾರಿ ವಿರುದ್ಧ ಆಕ್ರೋಶ

ವರ್ಷಗಳಿಂದ ಇಲ್ಲಿನ ಅರಾಟೆ ಸೇತುವೆ ದುರಸ್ಥಿ ಕಾಮಗಾರಿ ಆಮೆಗತಿಯಲ್ಲಿ ನಡೆಯುತ್ತಿದೆ. ಹೀಗಾಗಿ ಒಂದು ಕಡೆಯ ಸೇತುವೆ ಬಂದ್ ಮಾಡಿ ಒಂದೇ ರಸ್ತೆಯಲ್ಲಿ ದ್ವಿಮುಖ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ನಿತ್ಯವೂ ಸಣ್ಣಪುಟ್ಟ ಅವಘಡಗಳು ನಡೆಯುತ್ತಿದೆ.

ಇಲಾಖೆಯು ರಿಪ್ಲೆಕ್ಟರ್ ಕೋನ್ ಅಳವಡಿಕೆಯಂತಹ ಜಾಗೃತಿ ಕೆಲಸ ಮಾಡಿದರೂ ರಾತ್ರಿ ಸಮಯದಲ್ಲಿ ಘನ ವಾಹನಗಳ ಓಡಾಟದಿಂದ ರಿಫ್ಲೆಕ್ಟರ್‌ಗಳು ಸಂಪೂರ್ಣ ನಾಶವಾಗಿದೆ. ವಾಹನ ಸವಾರರು ಪಥ ಶಿಸ್ತು ಪಾಲನೆ ಮಾಡದಿರುವುದು, ಅಜಾಗರುಕವಾಗಿ, ವೇಗವಾದ ಚಾಲನೆ ಕೂಡ ಅಪಘಾತ ಹೆಚ್ಚಳಕ್ಕೆ ಕಾರಣವಾಗಿದ್ದು ಸಾವು-ನೋವುಗಳು ಹೆಚ್ಚಿದೆ. ಅರಾಟೆ ಸೇತುವೆ ಕಾಮಗಾರಿ ಶೀಘ್ರವೇ ಪೂರ್ಣಗೊಳಿಸಿ ರಾಷ್ಟ್ರೀಯ ಹೆದ್ದಾರಿಯ ಎರಡೂ ರಸ್ತೆಗಳಲ್ಲಿ ಏಕಮುಖ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂಬ ಆಗ್ರಹ ಕೇಳಿಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X