ಪ್ರತ್ಯೇಕ ಪ್ರಕರಣ: ಇಬ್ಬರು ಆತ್ಮಹತ್ಯೆ

ಕೋಟ, ಅ.12: ಕಕ್ಕುಂಜೆ ಗ್ರಾಮದ ದೂಪದಕೊಡ್ಲು ಎಂಬಲ್ಲಿಯ ಮನೆಯಲ್ಲಿ ಒಂಟಿಯಾಗಿ ವಾಸ ಮಾಡಿಕೊಂಡಿದ್ದ ರಾಘವೇಂದ್ರ(40) ಎಂಬವರು ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಅ.9ರ ಸಂಜೆಯಿಂದ ಅ.11ರ ಬೆಳಗ್ಗಿನ ಮಧ್ಯಾವಧಿಯಲ್ಲಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಟತಟ್ಟು: ಕೋಟತಟ್ಟು ಗ್ರಾಮದ ಗಿರಿಜ ಮರಕಾಲ್ತಿ ಎಂಬವರ ಮಗ ವಿಜಯ(50) ಎಂಬವರು ವೈಯಕ್ತಿಕ ಕಾರಣದಿಂದ ಮನನೊಂದು ನ.11ರಂದು ಮಧ್ಯಾಹ್ನ ಮನೆಯ ಕೋಣೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




