Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರದ ಕುಂಠಿತ ಯುಜಿಡಿ ಕಾಮಗಾರಿ...

ಕುಂದಾಪುರದ ಕುಂಠಿತ ಯುಜಿಡಿ ಕಾಮಗಾರಿ ಪ್ರಗತಿ ಪರಿಶೀಲನಾ ಸಭೆ; ಯೋಜನೆ ಮುಂದುವರಿಕೆ ಬಗ್ಗೆ ಬೆಂಗಳೂರಿನ ಸಭೆಯಲ್ಲಿ ನಿರ್ಧಾರ

► ಪೌರಾಡಳಿತ ಸಚಿವ ಎಚ್.ಸಿ.ಬಾಲಕೃಷ್ಣ ಸ್ಪಷ್ಟೋಕ್ತಿ; ಅಧಿಕಾರಿಗಳ ವಿರುದ್ಧ ಕೆಂಡಾಮಂಡಲ ► "ಹಿಂದಿನ ಮುಖ್ಯಾಧಿಕಾರಿ ಸಹಿತ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಿ"

ವಾರ್ತಾಭಾರತಿವಾರ್ತಾಭಾರತಿ13 Oct 2026 8:52 PM IST
share
ಕುಂದಾಪುರದ ಕುಂಠಿತ ಯುಜಿಡಿ ಕಾಮಗಾರಿ ಪ್ರಗತಿ ಪರಿಶೀಲನಾ ಸಭೆ; ಯೋಜನೆ ಮುಂದುವರಿಕೆ ಬಗ್ಗೆ ಬೆಂಗಳೂರಿನ ಸಭೆಯಲ್ಲಿ ನಿರ್ಧಾರ

ಕುಂದಾಪುರ, ಅ.13: 2015ರಲ್ಲಿ ಕಾಮಗಾರಿ ಪ್ರಾರಂಭಗೊಂಡು 20217ರಲ್ಲಿ ಮುಕ್ತಾಯಗೊಳ್ಳಬೇಕಿದ್ದ ಕುಂದಾಪುರ ಪಟ್ಟಣಕ್ಕೆ ಒಳಚರಂಡಿ ವ್ಯವಸ್ಥೆ ಕಲ್ಪಿಸುವ ‘ಕುಂದಾಪುರ ಪಟ್ಟಣದ ಒಳಚರಂಡಿ ಯೋಜನೆ (ಯುಜಿಡಿ) 11ವರ್ಷಗಳ ಬಳಿಕವೂ ಪೂರ್ಣಗೊಳ್ಳದೇ ಕುಂಟುತ್ತಾ ಸಾಗಿರುವ ಬಗ್ಗೆ ರಾಜ್ಯ ಪೌರಾಡಳಿತ ಸಚಿವ ಎಚ್.ಸಿ. ಬಾಲಕೃಷ್ಣ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರಲ್ಲದೇ, ಇದಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.

ಕುಂದಾಪುರ ಪುರಸಭೆಯ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಇಂದು ಬೆಂಗಳೂರಿನ ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾ ಲಯ, ಜಿಲ್ಲಾಡಳಿತ, ನಗರಾಭಿವೃದ್ಧಿ ಕೋಶ ಉಡುಪಿ ಜಿಲ್ಲೆ ಹಾಗೂ ಕುಂದಾಪುರ ಪುರಸಭೆಗಳ ಸಹಭಾಗಿತ್ವದಲ್ಲಿ ಪೌರಾಡಳಿತ ಇಲಾಖೆ ಕುಂದಾಪುರ ಪುರಸಭೆಯ ಯುಜಿಡಿ ಕಾಮಗಾರಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಕೈಗೊಂಡಿರುವ ಯುಜಿಡಿ ಕಾಮಗಾರಿ ಅಪೂರ್ಣತೆಯಿಂದಾಗಿ ಸ್ಥಳೀಯ ಸಾರ್ವಜನಿಕರಿಗೆ ಅನಾವಶ್ಯಕ ತೊಂದರೆ ಉಂಟಾಗುತ್ತಿದೆ. ಯಾವುದೇ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳು ವಾಗ ಸರಕಾರದ ಅನುದಾನಗಳು ದುರುಪಯೋಗವಾಗದಂತೆ ನೋಡಿಕೊಳ್ಳಬೇಕು ಎಚ್.ಸಿ ಬಾಲಕೃಷ್ಣ ಆಕ್ರೋಶಭರಿತರಾಗಿ ಹೇಳಿದರು.

ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಸುಮಾರು 56.54 ಕೋಟಿ ರೂ. ಪರಿಷ್ಕೃತ ವೆಚ್ಚದಲ್ಲಿ ಯುಜಿಡಿ ಕಾಮಗಾರಿ ಕೈಗೊಳ್ಳಲು ಸರಕಾರದಿಂದ ಅನುಮೋದನೆ ದೊರಕಿದ್ದು, ಸುಮಾರು 11 ವಷರ್ಗಳು ಕಳೆದರೂ ಭೂಸ್ವಾಧೀನ-ಜಮೀನು ಹಸ್ತಾಂತರದಲ್ಲಿ ವಿಳಂಬ, ಸಿಆರ್‌ಝಡ್ ಅನುಮತಿಗಳ ಅಗತ್ಯತೆ, ಮೂಲ ಗುತ್ತಿಗೆ ದರದದಲ್ಲಿ ಕಾಮಗಾರಿ ನಡೆಸಲು ಗುತ್ತಿಗೆದಾರರ ಅಸಮ್ಮತಿ ಸೇರಿದಂತೆ ವಿವಿಧ ಕಾರಣಗಳಿಂದ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ಸಂಬಂಧಿತ ಅಧಿಕಾರಿಗಳು ವಿವರಣೆ ನೀಡಿದರು.

ಕಾಮಗಾರಿ ಅನುಷ್ಠಾನದಲ್ಲಿ ವಿಳಂಬಕ್ಕೆ ಕಾರಣವಾದ ಅಂಶಗಳ ಬಗ್ಗೆ ಪುರಸಭೆ, ಒಳಚರಂಡಿ ಮಂಡಳಿ ವಿಭಾಗದ ಹಿರಿಯ ಅಧಿಕಾರಿಗಳು, ಇಂಜಿನಿಯರ್‌ಗಳ ಹೇಳಿಕೆಗಳನ್ನು ಕೇಳಿ ಅವರ ಮೇಲೆ ಪ್ರಶ್ನೆಗಳ ಸುರಿಮಳೆಗೆರೆದ ಸಚಿವರು, ಕೊನೆಗೆ ಪುರಸಭೆಯ ಆಡಳಿತಾಧಿಕಾರಿಯಾಗಿರುವ ಕುಂದಾಪುರ ಉಪವಿಭಾಗದ ಸಹಾಯಕ ಕಮಿಷನರ್ ರಶ್ಮಿ ಎಸ್.ಆರ್. ಅವರಿಗೆ ಹಲವು ಸೂಚನೆಗಳನ್ನು ನೀಡಿದರು.

ರಶ್ಮಿ ಅವರು ಕೂಡಲೇ ಯೋಜನೆಗೆ ಸಂಬಂಧಪಟ್ಟಂತೆ ವಿವಿಧ ಇಲಾಖೆಗಳ ಸಂಬಂಧಪಟ್ಟ ಅಧಿಕಾರಿಗಳು, ಅಭಿಯಂತರುಗಳೊಂದಿಗೆ ಸಭೆ ನಡೆಸಿ ಯೋಜನೆಯ ಸ್ಥಿತಿ-ಗತಿಯ ಕುರಿತಂತೆ ಸಮಗ್ರ ವರದಿಯೊಂದನ್ನು ತಯಾರಿಸುವಂತೆ ಸಚಿವ ಬಾಲಕೃಷ್ಣ ಸೂಚಿಸಿದರು.

ವರದಿಯಲ್ಲಿ ಕಾಮಗಾರಿ ವಿಳಂಬಕ್ಕೆ ವಿವಿಧ ಕಾರಣ, ವಿಳಂಬಕ್ಕೆ ಕಾರಣರಾದ ಅಧಿಕಾರಿಗಳ ವಿವರ, ಮುಂದೆ ಕಾಮಗಾರಿ ಮುಂದುವರೆಸಲು ಅವಶ್ಯವಿರುವ ಅನುದಾನ ಸೇರಿದಂತೆ ಎಲ್ಲಾ ಮಾಹಿತಿಗಳನ್ನೊಳಗೊಂಡ ವಿಸ್ತೃತ ವರದಿಯನ್ನು ತಮಗೆ ಸಲ್ಲಿಸುವಂತೆ ತಿಳಿಸಿದ ಅವರು, ಯೋಜನೆಯ ವಿಳಂಬ, ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಬೆಂಗಳೂರಿನಲ್ಲಿ ಪ್ರತ್ಯೇಕ ಸಭೆ ಕರೆದು ಸರಕಾರದ ಹಂತದಲ್ಲಿ ಕೂಲಂಕಷವಾಗಿ ಚರ್ಚಿಸಿ ಈ ಬಗ್ಗೆ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದು ಸಭೆಗೆ ಭರವಸೆ ನೀಡಿದರು.

ಯೋಜನೆಯ ಹಿನ್ನಡೆಗೆ ಕಾರಣರಾದ ಅಂದಿನ ಅಧಿಕಾರಿಗಳ ಸಹಿತ ಎಲ್ಲರೂ ಕಾಮಗಾರಿ ವಿಳಂಬಕ್ಕೆ ಹೊಣೆಗಾ ರರು. ಅವರ ಮೇಲೂ ಕ್ರಮ ಆಗಬೇಕು. ಇದು ಸರಕಾರದ ಹಣ ಎಂದು ಎಲ್ಲರೂ ಹುಡುಗಾಟ ಆಡ್ತಾ ಇದ್ದೀರಾ ಎಂದು ಸಚಿವರು ಪದೇ ಪದೇ ಅಧಿಕಾರಿಗಳನ್ನು ತರಾಟೆಗೆ ತೆಗೆದು ಕೊಂಡರು.

ಯೋಜನೆಯನ್ನು ಪೂರ್ಣಗೊಳಿಸಲು ಇನ್ನು 46 ಕೋಟಿ ರೂ.ಬೇಕು. ಇದರಲ್ಲಿ ಎಸ್‌ಟಿಪಿಗೆ 15 ಕೋಟಿ. ಹಿಂದೆ ಬಿಡುಗಡೆಯಾದ 41.83 ಕೋಟಿ ರೂ.ಗಳಲ್ಲಿ 13.63 ಕೋಟಿ ರೂ. ಅನುದಾನ ಲಭ್ಯವಿದೆ. ಇದನ್ನು ಬಳಸಿಕೊಂಡು ಒಟ್ಟು 46.81ಕೋಟಿ ರೂ.ಗಳ ಪರಿಷ್ಕೃತ ಅಂದಾಜು ಪಟ್ಟಿಯನ್ನು ಆಡಳಿತಾತ್ಮಕ ಅನುಮೋದನೆಗೆ ಸರಕಾರಕ್ಕೆ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಯುಜಿಡಿ ಕಾಮಗಾರಿ ವಿಳಂಬದ ಕುರಿತು ಚರ್ಚಿಸಲು ಕರೆದ ಸಭೆ, ಪುರಸಭೆಯ ಅವ್ಯವಸ್ಥೆ, ಕುಡಿಯುವ ನೀರಿನ ಸಮಸ್ಯೆ, ಸ್ವಚ್ಛತೆ, ದಾರಿದೀಪದ ವ್ಯವಸ್ಥೆ ಕುರಿತು ಸಾರ್ವಜನಿಕರು ವಿಷಯ ಪ್ರಸ್ತಾಪಿಸಿದರು. ಪುರಸಭೆಯಲ್ಲಿ ಹಲವು ಸಮಸ್ಯೆಗಳಿವೆ. ಇವುಗಳ ಬಗ್ಗೆ ಸವಿಸ್ತಾರವಾಗಿ ಚರ್ಚಿಸಲು ಇನ್ನೊಮ್ಮೆ ಇಲ್ಲಿಗೆ ಬಂದು ಸಭೆ ಕರೆಯುವುದಾಗಿ ಸಚಿವ ಬಾಲಕೃಷ್ಮ ಭರವಸೆ ನೀಡಿದರು.

ಪೌರಕಾರ್ಮಿಕರಿಗೆ ಜಮೀನು: ಚರ್ಚೆಯ ಮಧ್ಯೆ ಪುರಸಭೆಯ ಪೌರ ಕಾರ್ಮಿಕರಿಗೆ ಖಾಯಂ ವಸತಿಗೃಹ ನಿರ್ಮಾ ಣಕ್ಕೆ 2 ಎಕರೆ ಜಾಗವನ್ನು ನಗರ ಪ್ರದೇಶದಲ್ಲಿ ಗುರುತಿಸಿ ಅವರಿಗೆ ಕ್ವಾರ್ಟರ್ಸ್‌ ನಿರ್ಮಿಸಿ ಸಕ್ರಿಯ ಪೌರಕಾರ್ಮಿಕರು ನಗರದಲ್ಲೇ ವಾಸವಿರುವಂತೆ ನೋಡಿಕೊಳ್ಳಬೇಕು ಎಂದರು.

ತೆರಿಗೆ ಸಂಗ್ರಹ, ನಳ್ಳಿ ನೀರಿನ ಶುಲ್ಕ ಸಂಗ್ರಹಕ್ಕೆ ಸಂಬಂಧಿಸಿದಂತೆ ನಿಗದಿತ ಗುರಿ ಸಾಧನೆಗೆ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಮುಂದಾಗಬೇಕು. ನಗರದ ಸ್ವಚ್ಛತೆಗೆ ಸ್ಥಳೀಯಾಡಳಿತಗಳು ಮೊದಲ ಆದ್ಯತೆ ನೀಡಬೇಕು. ದಾರಿದೀಪ ಅಳವಡಿಕೆ ಅವುಗಳ ನಿರ್ವಹಣೆ ಸೇರಿದಂತೆ ಅಗತ್ಯ ಸೌಕರ್ಯ ಕಲ್ಪಿಸಬೇಕು ಎಂದರು.

ಪುರಸಭೆಗಳ ಮುಖ್ಯಾಧಿಕಾರಿಗಳು ಬೆಳಗ್ಗೆ 6 ಕ್ಕೆ ಕಚೇರಿಯಲ್ಲಿ ಹಾಜರಿದ್ದು, ಹಾಜರಾತಿ ದಾಖಲಿಸಬೇಕು. 6ರಿಂದ 9ರವರೆಗೆ ಸ್ಥಳ ಪರಿಶೀಲನೆ ನಡೆಸಬೇಕು. ಅಧಿಕಾರಿಗಳು ಪ್ರತಿದಿನ ಅಪರಾಹ್ನ 3:30ರಿಂದ 5:30ರವರೆಗೆ ಕಚೇರಿ ಗಳಲ್ಲಿ ಕಡ್ಡಾಯವಾಗಿ ಹಾಜರಿದ್ದು, ಸಾರ್ವಜನಿಕರ ಭೇಟಿಗೆ ಅವಕಾಶ ಮಾಡಿಕೊಡಬೇಕು ಎಂದು ಪುರಸಭೆಯ ಎಲ್ಲಾ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಕುಂದಾಪುರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ, ಸಹಾಯಕ ಕಮಿಷನರ್ ರಶ್ಮಿ ಎಸ್.ಆರ್, ಜಿಲ್ಲಾ ನಗರಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಬ್ರಹ್ಮಣ್ಯ ಶೆಟ್ಟಿ, ಕುಂದಾಪುರ ಪುರಸಭೆ ಮುಖ್ಯಾಧಿಕಾರಿ ಆನಂದ್ ಜೆ ಮತ್ತಿತರರು ಉಪಸ್ಥಿತರಿದ್ದರು.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X