ಉಡುಪಿ | ಕಾಮಗಾರಿ ಹಿನ್ನೆಲೆ; ಸಂಚಾರಕ್ಕೆ ಬದಲಿ ಮಾರ್ಗ

ಉಡುಪಿ, ಅ.13: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ ಜಾಲದ ಪೈಪ್‌ಲೈನ್ ಬದಲಾವಣೆ ಮಾಡಿ ಕಾಂಕ್ರೀಟ್ ಛೇಂಬರ್ ನಿರ್ಮಾಣ ಕಾಮಗಾರಿಯನ್ನು ಅಕ್ಟೋಬರ್ 15ರಿಂದ ಪ್ರಾರಂಭಿಸಲಾಗುತ್ತಿರುವ ಹಿನ್ನಲೆಯಲ್ಲಿ ಈ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಿ, ಬದಲಿ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.
ಒಳಚರಂಡಿ ಕಾಮಗಾರಿ: ಸಂಚಾರ ನಿಷೇಧ
ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ 3 ನಂಬರಿನ ಒಳಚರಂಡಿ ಛೇಂಬರ್ ನಿರ್ಮಾಣ ಕಾಮಗಾರಿಯನ್ನು ನಿರ್ವಸಬೇಕಾಗಿರುವುದರಿಂದ ಅಕ್ಟೋಬರ್ 18ರಿಂದ ನವಂಬರ್ 7ರವರೆಗೆ (20ದಿನ) ಸದರಿ ರಸ್ತೆಯಲ್ಲಿ ಸಂಚಾರವನ್ನು ನಿಷೇಧಿಸಲಾಗಿದೆ. ಇದಕ್ಕೆ ಬದಲಿ ವ್ಯವಸ್ಥೆಯನ್ನು ಕಲ್ಪಿಸಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹರಿಸುವಂತೆ ಉಡುಪಿ ನಗರಸಭೆ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.
Next Story




