Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಒಳಚರಂಡಿ ಅವ್ಯವಸ್ಥೆಯಿಂದ ರಸ್ತೆ ಮೇಲೆ...

ಒಳಚರಂಡಿ ಅವ್ಯವಸ್ಥೆಯಿಂದ ರಸ್ತೆ ಮೇಲೆ ಕೊಳಚೆ ನೀರು; ಸಮಸ್ಯೆ ಸರಿಪಡಿಸಿದ ಪುರಸಭೆ

ವಾರ್ತಾಭಾರತಿವಾರ್ತಾಭಾರತಿ14 Oct 2026 9:05 PM IST
share
ಒಳಚರಂಡಿ ಅವ್ಯವಸ್ಥೆಯಿಂದ ರಸ್ತೆ ಮೇಲೆ ಕೊಳಚೆ ನೀರು; ಸಮಸ್ಯೆ ಸರಿಪಡಿಸಿದ ಪುರಸಭೆ

ಕುಂದಾಪುರ, ಅ.14: ಕುಂದಾಪುರ ಪುರಸಭಾ ವ್ಯಾಪ್ತಿಯ ಫೆರ್ರಿ ವಾರ್ಡ್‌ನ ವೆಸ್ಟ್ ಬ್ಲಾಕ್ ರಸ್ತೆಯಲ್ಲಿ ಒಳಚರಂಡಿ (ಯುಜಿಡಿ) ಅವಾಂತರದಿಂದಾಗಿ ಕಳೆದ ಎಂಟು ದಿನಗಳಿಂದ ರಸ್ತೆ ಹಾಗೂ ಮಳೆನೀರು ಹರಿಯುವ ಚರಂಡಿ ಯಲ್ಲಿಯೇ ಕೊಳಚೆ ನೀರು ಹರಿಯುತ್ತಿದ್ದು, ಸ್ಥಳೀಯ ನಿವಾಸಿಗರು ತೊಂದರೆ ಅನುಭವಿಸುವಂತಾಗಿತ್ತು. ದುರ್ವಾಸನೆ, ಸೊಳ್ಳೆ ಕಾಟದಿಂದ ಇಲ್ಲಿನ ಜನ ಹೈರಾಣಾಗಿದ್ದರು.

ಈಗ ಸ್ಥಳೀಯರ ದೂರಿನ ಹಿನ್ನೆಲೆಯಲ್ಲಿ ಬುಧವಾರ ಪುರಸಭೆಯಿಂದ ಮಳೆ ನೀರು ಹರಿಯುವ ಪೈಪ್‌ಲೈನ್ ದುರಸ್ತಿ ಗೊಳಿಸುವ ಮೂಲಕ ತಾತ್ಕಾಲಿಕವಾಗಿ ಸಮಸ್ಯೆ ಬಗೆಹರಿಸಿದ್ದಾರೆ. ಸದ್ಯಕ್ಕೆ ಕೊಳಚೆ ನೀರು ರಸ್ತೆ ಹಾಗೂ ಚರಂಡಿ ಯಲ್ಲಿ ಹರಿಯುವುದಕ್ಕೆ ತಡೆ ಬಿದ್ದಿದ್ದು, ಇಲ್ಲಿನ ಜನ ಕೊಂಚ ನಿರಾಳ ಆಗುವಂತಾಗಿದೆ.

ಇಲ್ಲಿನ ಫೆರ್ರಿ ವಾರ್ಡ್‌ನ ವೆಸ್ಟ್ ಬ್ಲಾಕ್ ರಸ್ತೆಯಲ್ಲಿ ಕಳೆದ ಕೆಲ ದಿನಗಳಿಂದ ತ್ಯಾಜ್ಯ ನೀರಿನ ಸಮಸ್ಯೆ ಕಾಡುತ್ತಿತ್ತು. ಈ ಪರಿಸರದಲ್ಲಿ ನ್ಯಾಯಾಧೀಶರ ಮನೆ, ಪೊಲೀಸ್ ವಸತಿಗೃಹ, ಶಿಕ್ಷಣ, ಅರಣ್ಯ ಇಲಾಖೆ ಕಚೇರಿ, ಮಸೀದಿ ಸಹಿತ ನೂರಾರು ಮನೆಗಳು ಇವೆ. ಹೋಟೆಲ್ ಸಹಿತ ವಿವಿಧೆಡೆಯಿಂದ ಬಿಡುವ ಕೊಳಚೆ ನೀರು ಒಳಚರಂಡಿಯಲ್ಲಿ ಹರಿಯದೇ ಸಾಮಾನ್ಯ ಚರಂಡಿ ಹಾಗೂ ಪಿಟ್‌ನಿಂದ ಮೇಲಕ್ಕೆ ಬಂದು ರಸ್ತೆಯಲ್ಲಿಯೇ ಹರಿದು ಬುಧವಾರ ಮಧ್ಯಾಹ್ನದವರೆಗೂ ಇಡೀ ಪರಿಸರ ಗಬ್ಬು ನಾರುತ್ತಿತ್ತು. ಪರಿಸರದಲ್ಲಿ ಸೊಳ್ಳೆ ಕಾಟವೂ ಹೆಚ್ಚಾಗಿತ್ತು.

ಇದರಿಂದ ತೊಂದರೆಗೊಳಗಾದ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಬುಧವಾರ ಸ್ಥಳಕ್ಕೆ ಕುಂದಾಪುರ ಪುರಸಭೆ ಮುಖ್ಯಾಧಿಕಾರಿ ಆನಂದ ಜೆ., ಪರಿಸರ ಇಂಜಿನಿಯರ್ ಗುರುಪ್ರಸಾದ್ ಶೆಟ್ಟಿ ಹಾಗೂ ಆರೋಗ್ಯ ನಿರೀಕ್ಷಕ ರಾಘವೇಂದ್ರ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಪೌರ ಕಾರ್ಮಿಕರು ಕ್ಷಿಪ್ರ ಕಾರ್ಯಾಚರಣೆ ಕೈಗೊಂಡು ಫೆರ್ರಿ ರಸ್ತೆಯಲ್ಲಿರುವ ಮಳೆ ನೀರು ಹರಿದು ಹೋಗಲು ಅಳವಡಿಸಿದ್ದ ಪೈಪ್‌ಲೈನ್ ಸರಿಪಡಿಸಿದ ಬಳಿಕ ತ್ಯಾಜ್ಯ ನೀರು ರಸ್ತೆಯಲ್ಲಿ ಹರಿಯುವುದು ನಿಂತಿದೆ. ಬಳಿಕ ಬ್ಲೀಚಿಂಗ್ ಪೌಡರ್ ಹಾಕಿ, ಈ ಪ್ರದೇಶವನ್ನು ಸ್ವಚ್ಛಗೊಳಿಸಲಾಯಿತು.

ಮಂಗಳವಾರವಷ್ಟೇ ಪೌರಾಡಳಿತ ಸಚಿವರು ಇಲ್ಲಿನ ಯುಜಿಡಿ ಅರೆಬರೆ ಕಾಮಗಾರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ನಗರದ ಒಳಚರಂಡಿ ಅವ್ಯವಸ್ಥೆಯಿಂದ ಬಹಳಷ್ಟು ಸಮಸ್ಯೆಗಳಾಗುತ್ತಿದ್ದು, ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಸ್ಥಳೀಯ ನಾಗರಿಕರು ಮತ್ತೊಮ್ಮೆ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X