Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ವಿದ್ಯಾರ್ಥಿಗಳಲ್ಲಿ ಸಂವಿಧಾನ, ಕಾನೂನು...

ವಿದ್ಯಾರ್ಥಿಗಳಲ್ಲಿ ಸಂವಿಧಾನ, ಕಾನೂನು ಅರಿವು ಅಗತ್ಯ: ಕಿರಣ್ ಕೊಡ್ಗಿ

ಕುಂದಾಪುರದಲ್ಲಿ ’ಯುವ ಸಂಸತ್ತು ಸಭೆ’ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ16 Oct 2026 7:28 PM IST
share
ವಿದ್ಯಾರ್ಥಿಗಳಲ್ಲಿ ಸಂವಿಧಾನ, ಕಾನೂನು ಅರಿವು ಅಗತ್ಯ: ಕಿರಣ್ ಕೊಡ್ಗಿ

ಕುಂದಾಪುರ : ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಸಂಕ್ಷಿಪ್ತ ಪರಿಚಯ, ಕಾನೂನು ಹಾಗೂ ಅದರ ಅನುಷ್ಠಾನಗಳ ಕುರಿತು ಅರಿವು ಮೂಡಿಸಲು ಸರಕಾರ ಯುವ ಸಂಸತ್ತು ಸಭೆಗಳನ್ನು ಆಯೋಜಿಸುತ್ತಿದ್ದು ಸಂವಿಧಾನ, ಕಾನೂನು ಅರಿವು ಅಗತ್ಯ ಎಂದು ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಹೇಳಿದ್ದಾರೆ.

ಕುಂದಾಪುರ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಉನ್ನತ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ, ಸಮಾಜ ಕಲ್ಯಾಣ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಕುಂದಾಪುರದ ಭಂಡಾರ್‌ ಕಾರ್ಸ್‌ ಕಾಲೇಜು ಆವರಣದಲ್ಲಿರುವ ಕುಂಭಾಶಿ ರಾಧಾಬಾಯಿ ವೆಂಕಟರಮಣ ಪ್ರಭು ರಂಗಮಂದಿರದಲ್ಲಿ ಶುಕ್ರವಾರ ನಡೆದ ’ಯುವ ಸಂಸತ್ತು ಸಭೆ’ಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ನ್ಯಾಯಕ್ಕಾಗಿ ಹೋರಾಡುವ ಹಕ್ಕು ಎಲ್ಲರಿಗಿದ್ದರೂ ಕೂಡ ರಾಜ್ಯ, ದೇಶದ ಚಿಂತನೆಯಿಂದ ಅದು ಕೂಡಿರಬೇಕು. ವಿಧಾನಸಭೆ, ಸಂಸತ್‌ನಲ್ಲಿ ನಡೆಯುವ ಚರ್ಚೆ, ಮಂಡನೆ, ಅನುಷ್ಠಾನ ಮೊದಲಾದ ವಿಚಾರಗಳ ಬಗ್ಗೆ ವಿದ್ಯಾರ್ಥಿ ಗಳು ಅರಿತು ಉತ್ತಮ ನಾಗರಿಕರಾಗಿ ಭವ್ಯ ಭಾರತ ನಿರ್ಮಾಣಕ್ಕೆ ಸಹಕಾರಿಗಳಾಗಬೇಕು ಎಂದರು.

ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ತಾ ಮಾತನಾಡಿ, ಯುವಶಕ್ತಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರಿಯಬೇಕು. ವಿದ್ಯಾರ್ಥಿ ಜೀವನದಲ್ಲಿಯೇ ನಾಯಕತ್ವ ಅಳವಡಿಸಿಕೊಳ್ಳುವ ಮೂಲಕ ಭವಿಷ್ಯದಲ್ಲಿ ಮುಂಚೂಣಿ ನಾಯಕರಾಗಲು ಸಾಧ್ಯವಿದೆ. ಸರ್ವರಿಗೂ ಸಮಬಾಳು, ಸಮಪಾಲು, ಬದುಕುವ ಅವಕಾಶ ಕಲ್ಪಿಸಿದ ಸಂವಿಧಾನದ ಆಶಯಗಳನ್ನು ಮೈಗೂಡಿಸಿಕೊಂಡು ಪ್ರತಿಯೊಬ್ಬ ನಾಗರಿಕನು ಗೌರವಯುತ ವಾಗಿ ಬದುಕು ಸಾಗಿಸಲು ಸಂವಿಧಾನ ಸಹಕಾರಿಯಾಗಿದೆ ಎಂದು ಅವರು ತಿಳಿಸಿದರು.

ಕುಂದಾಪುರ ತಹಶೀಲ್ದಾರ್ ಪ್ರದೀಪ್ ಕುರುಡೇಕರ್ ಎಸ್. ಸಂವಿಧಾನ ಪೀಠಿಕೆಯನ್ನು ಬೋಧಿಸಿದರು. ಕುಂದಾಪುರ ತಾಪಂ ಕಾರ್ಯನಿರ್ವಹಣಾಧಿ ಕಾರಿ ಮಹೇಶ್ ಕೆ.ಜಿ., ಕ್ಷೇತ್ರ ಶಿಕ್ಷಣಾಧಿಕಾರಿ ಅರುಣ್ ಕುಮಾರ್ ಶೆಟ್ಟಿ, ಭಂಡಾರ್‌ ಕಾರ್ಸ್ ಆರ್ಟ್ಸ್ ಮತ್ತು ಸೈನ್ಸ್ ಕಾಲೇಜಿನ ಪ್ರಾಂಶುಪಾಲ ಡಾ. ಶುಭಕರಾಚಾರಿ, ಯುವ ಸಂಸತ್ ಸಭೆಯ ಸಭಾಧ್ಯಕ್ಷ, ವಿದ್ಯಾರ್ಥಿ ರೋನಿತ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ಕುಂದಾಪುರ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಮೇಶ್ ಕುಲಾಲ್ ಸ್ವಾಗತಿಸಿ, ಪ್ರಾಸ್ತಾವಿಕ ವಾಗಿ ಮಾತನಾಡಿದರು. ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ ಮೇಲ್ವಿಚಾರಕಿ ರಾಧಿಕಾ ರಾಣಿ ಕಾರ್ಯಕ್ರಮ ನಿರೂಪಿಸಿ, ಕೋಟೇಶ್ವರ ಕೆಪಿಎಸ್ ಶಾಲೆ ಉಪಪ್ರಾಂಶುಪಾಲ ಚಂದ್ರಶೇಖರ ಶೆಟ್ಟಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X