Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರದಲ್ಲಿ ಗಮನ ಸೆಳೆದ ‘ಯುವ...

ಕುಂದಾಪುರದಲ್ಲಿ ಗಮನ ಸೆಳೆದ ‘ಯುವ ಸಂಸತ್ತು’ ಸಭೆ; ವಿಧಾನಸಭಾ ಅಧಿವೇಶನದಂತೆ ವಿದ್ಯಾರ್ಥಿಗಳ ಸಿದ್ಧತೆ

ಆಡಳಿತ, ವಿರೋಧ ಪಕ್ಷಗಳ ಸದಸ್ಯರಿಂದ ಬಿರುಸಿನ ಚರ್ಚೆ

ವಾರ್ತಾಭಾರತಿವಾರ್ತಾಭಾರತಿ16 Oct 2026 9:34 PM IST
share
ಕುಂದಾಪುರದಲ್ಲಿ ಗಮನ ಸೆಳೆದ ‘ಯುವ ಸಂಸತ್ತು’ ಸಭೆ; ವಿಧಾನಸಭಾ ಅಧಿವೇಶನದಂತೆ ವಿದ್ಯಾರ್ಥಿಗಳ ಸಿದ್ಧತೆ

ಕುಂದಾಪುರ : ರಾಜ್ಯ ವಿಧಾನಸಭೆಯ ಮಾದರಿಯಲ್ಲೇ ಯುವ ಸಂಸತ್ತನ್ನು ಆಯೋಜಿಸಿ, ವಿದ್ಯಾರ್ಥಿಗಳಲ್ಲಿ ಪ್ರಜಾ ಪ್ರಭುತ್ವದ ಮೌಲ್ಯಗಳು ಹಾಗೂ ಸಂಸದೀಯ ವ್ಯವಸ್ಥೆಯ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸರಕಾರದ ನಿರ್ದೇಶನದಂತೆ ಕುಂದಾಪುರ ತಾಲೂಕಿನಲ್ಲಿ ನಡೆದ ‘ಯುವ ಸಂಸತ್ತು’ ಕಾರ್ಯಕ್ರಮ ಮಾದರಿಯಾಗಿ ಮೂಡಿಬಂತು.

ಮೊದಲಿಗೆ ವಿಧಾನಸಭೆ ಮಾದರಿಯಲ್ಲೇ ವಿಧಾನಸಭಾ ಅಧ್ಯಕ್ಷರು ಆಗಮಿಸಿ ಪೀಠ ಏರುತ್ತಾರೆ. ‘ಚರ್ಚೆಯ ಮೂಲಕ ಪರಿಹಾರ, ಸಹಕಾರದ ಮೂಲಕ ಅಭಿವೃದ್ದಿ’ ಆಶಯ ಎಂದು ಸ್ಪೀಕರ್ ಆಶಯ ನುಡಿಗಳನ್ನಾಡಿ ಅಧಿವೇಶನ ಆರಂಭಿ ಸುತ್ತಾರೆ. ಸಂತಾಪ ಸೂಚನೆ, ಪ್ರಶ್ನೋತ್ತರ ವೇಳೆ, ಶೂನ್ಯ ವೇಳೆ, ಗಮನ ಸೆಳೆಯುವ ಪ್ರಶ್ನೆ, ಕೊನೆಯಲ್ಲಿ ವಿದೇಯಕ ಮಂಡನೆ ಇತ್ತು. ಉಪ ಸ್ಪೀಕರ್, ಕಾರ್ಯದರ್ಶಿ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಿಬ್ಬರು, ಗೃಹ ಸಚಿವರು, ವಿರೊಧ ಪಕ್ಷದ ನಾಯಕ, ವಿವಿಧ ಇಲಾಖೆ ಮಂತ್ರಿಗಳು, ಆಡಳಿತ-ವಿರೋಧ ಪಕ್ಷದ ಶಾಸಕರು ಇದ್ದರು. ಪತ್ರಕರ್ತರ ಗ್ಯಾಲರಿ, ಪ್ರೇಕ್ಷಕರ ಗ್ಯಾಲರಿ, ಸದನದ ಬಾವಿ ಎಲ್ಲವನ್ನೂ ಸಿದ್ಧಪಡಿಸಲಾಗಿತ್ತು.

ಪ್ರಶ್ನೋತ್ತರ ವೇಳೆಯ ಚುಕ್ಕಿ ಗುರಿತಿನ ಪ್ರಶ್ನೆಯಲ್ಲಿ ಸೈಬರ್ ಕ್ರೈಮ್, ರೈತರ ಸಮಸ್ಯೆ, ಅಂಕಪಟ್ಟಿ, ಶಿಕ್ಷಣದಲ್ಲಿ ಎಐ ಸಮಸ್ಯೆ, ಸರಕಾರಿ ಶಾಲೆ, ಆಸ್ಪತ್ರೆಗಳ ಕಟ್ಟಡ ಸಮಸ್ಯೆ ಬಗ್ಗೆ ತೀವ್ರ ಚರ್ಚೆ ನಡೆಯಿತು. ಗಮನ ಸೆಳೆಯುವ ಪ್ರಶ್ನೆಯಲ್ಲಿ ಬ್ಯಾಂಕಿಂಗ್ ನೇಮಕಾತಿಯಲ್ಲಿ ಸ್ಥಳೀಯರಿಗೆ ಅವಕಾಶ ಕುರಿತು ಚರ್ಚೆ ನಡೆಯಿತು. ಕುಂದಾಪುರ ಹಾಲಿ ಶಾಸಕ ಎ. ಕಿರಣ್ ಕೊಡ್ಗಿ ಸಹಿತ ಹಲವರು ಪ್ರೇಕ್ಷಕರ ಗ್ಯಾಲರಿಯಲ್ಲಿ ಕುಳಿತು ಸದನ ಕಲಾಪವನ್ನು ವೀಕ್ಷಿಸಿದರು.

ಮೂರು ಪ್ರಮುಖ ಮಸೂದೆಗಳ ಅಂಗೀಕಾರ:

ಕುಂದಾಪುರ ತಾಲೂಕಿನ ಯುವ ಸಂಸತ್ತಿನ ಅಧಿವೇಶನದಲ್ಲಿ ಸಮಾಜಕ್ಕೆ ಪ್ರಸ್ತುತವಾಗಿರುವ 3 ಪ್ರಮುಖ ವಿಷಯಗಳು/ಮಸೂದೆಗಳ ಕುರಿತು ಗಂಭೀರ ಚರ್ಚೆ ನಡೆದು ಮಸೂದೆ ಅಂಗೀಕಾರಗೊಂಡಿತು.

* ಮಾದಕ ದ್ರವ್ಯಗಳು ಮತ್ತು ಸೈಕೋ ಟ್ರೋಪಿಕ್ ಪದಾರ್ಥಗಳ ಕಾಯ್ದೆ-1985 (ಮಸೂದೆ): ಯುವ ಪೀಳಿಗೆಯನ್ನು ಮಾದಕ ದ್ರವ್ಯಗಳ ಜಾಲದಿಂದ ರಕ್ಷಿಸುವ ಮತ್ತು ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಕುರಿತು ಕರಡು ಮಸೂದೆಯ ಚರ್ಚೆ.

*ಸಾಮಾಜಿಕ ಜಾಲತಾಣಗಳ ಬಳಕೆದಾರರ ವಯೋಮಿತಿ ನಿಯಂತ್ರಣ ಮಸೂದೆ: ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಸೋಶಿಯಲ್ ಮೀಡಿಯಾ ಬಳಕೆಗೆ ಕಾನೂನಾತ್ಮಕ ವಯೋಮಿತಿ ನಿಗದಿಪಡಿಸುವ ಪ್ರಸ್ತಾಪದಲ್ಲಿ ಚರ್ಚೆಯಾಗಿ 16 ವಯೋಮಾನ ಮಿತಿಗೊಳಿಸಲು ಮಂಡಿಸಲಾಯಿತು.

*ಮೋಟಾರು ವಾಹನ ಕಾಯ್ದೆ-1988 ಕಠಿಣ ಮಸೂದೆ: ಚಾಲನಾ ಪರವಾನಗಿ ವಿತರಣೆ ಮತ್ತು ರಸ್ತೆ ಸುರಕ್ಷತೆಯ ನಿಯಮಗಳನ್ನು ಮತ್ತಷ್ಟು ಬಿಗಿಗೊಳಿಸುವ ನಿಬಂಧನೆಗಳ ಚರ್ಚೆಯಾಯಿತು.

ತಾಲೂಕಿನಲ್ಲಿ ಮೂವರು ಅತ್ಯುತ್ತಮ, ಜಿಲ್ಲಾ ಮಟ್ಟಕ್ಕೆ 74 ಮಂದಿ

ಕುಂದಾಪುರ, ಬೈಂದೂರು ತಾಲೂಕು ಒಳಗೊಂಡಂತೆ ಪ್ರೌಢಶಾಲೆ, ಪದವಿಪೂರ್ವ, ಪದವಿ, ಸ್ನಾತಕೋತ್ತರ ವಿಭಾಗದಲ್ಲಿ ನಿಗದಿತ ಅನುಪಾತದ ಆಧಾರದ ಮೇಲೆ ಒಟ್ಟು 74 ವಿದ್ಯಾರ್ಥಿಗಳನ್ನು ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಕಳುಹಿಸಲು ಆಯ್ಕೆ ಮಾಡಲಾಯಿತು. ಸುಮಾರು 180ಕ್ಕೂ ಅಧಿಕ ವಿದ್ಯಾರ್ಥಿಗಳು ವಿವಿಧ ಶಿಕ್ಷಣ ಸಂಸ್ಥೆಗಳಿಂದ ಆಗಮಿಸಿದ್ದರು.

ತಾಲೂಕಿನಲ್ಲಿ ನಡೆದ ಯುವ ಸಂಸತ್ತು ಕಾರ್ಯಕ್ರಮದಲ್ಲಿ ಅತ್ಯುತ್ತಮ ಚರ್ಚಾ ಸ್ಪರ್ಧೆ ವಿಜೇತರಾಗಿ ಕುಂದಾಪುರ ಡಾ.ಬಿ.ಬಿ ಹೆಗ್ಡೆ ಕಾಲೇಜಿನ ಪ್ರಥಮ ಬಿ.ಕಾಂ ವಿದ್ಯಾರ್ಥಿನಿ ಕೃತಿ ಕೆ. ದೇವಾಡಿಗ, ಮೂಡ್ಲಕಟ್ಟೆ ಎಂಐಟಿ ಕಾಲೇಜಿನ ದ್ವಿತೀಯ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಿಂಚನಾ ಎಸ್. ಮಿರ್ಜಾಕರ್, ಕುಂದಾಪುರ ವಿ.ಕೆ.ಆರಂ. ಆಂಗ್ಲ ಮಾಧ್ಯಮ ಶಾಲೆಯ ಸಮರ್ಥ ಎಸ್. ಶ್ರೀಗಣಿ ಆಯ್ಕೆಯಾದರು.

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವ ಚಲನಶೀಲತೆಯನ್ನು ಮತ್ತಷ್ಟು ವಿಸ್ತರಿಸುವ ಉದ್ದೇಶ ಮತ್ತು ಯುವ ಸಮುದಾಯಕ್ಕೆ ದೇಶದ ಸಂಸದೀಯ ವ್ಯವಸ್ಥೆ ಪರಿಚಯಿಸಲು ಜಿಲ್ಲೆಯಲ್ಲಿ ಸೆ.15 ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಯೋಜಿಸಿದ್ದು ಇದರ ಅಂಗವಾಗಿ ಅ.16ರಂದು ಕುಂದಾಪುರ-ಬೈಂದೂರು ತಾಲೂಕು ಮಟ್ಟದಲ್ಲಿ ಸರಕಾರದ ಮಾರ್ಗಸೂಚಿಯಂತೆ ‘ಯುವ ಸಂಸತ್ತು’ ಸಭೆ ನಡೆಸಲಾಗಿದೆ.

-ರಮೇಶ್ ಕುಲಾಲ್, ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಕುಂದಾಪುರ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X