Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾಮಗಾರಿ ಪೂರ್ಣಗೊಳಿಸದೆ ನೂತನ ಕಟ್ಟಡಕ್ಕೆ...

ಕಾಮಗಾರಿ ಪೂರ್ಣಗೊಳಿಸದೆ ನೂತನ ಕಟ್ಟಡಕ್ಕೆ ಉಡುಪಿ ಜಿಲ್ಲಾಸ್ಪತ್ರೆ ಸ್ಥಳಾಂತರ: ಉಡುಪಿ ಶಾಸಕರ ವಿರೋಧ

ವಾರ್ತಾಭಾರತಿವಾರ್ತಾಭಾರತಿ16 Oct 2026 10:03 PM IST
share
ಕಾಮಗಾರಿ ಪೂರ್ಣಗೊಳಿಸದೆ ನೂತನ ಕಟ್ಟಡಕ್ಕೆ ಉಡುಪಿ ಜಿಲ್ಲಾಸ್ಪತ್ರೆ ಸ್ಥಳಾಂತರ: ಉಡುಪಿ ಶಾಸಕರ ವಿರೋಧ

ಉಡುಪಿ: ಉಡುಪಿಯ ನೂತನ ಜಿಲ್ಲಾಸ್ಪತ್ರೆ ಕಟ್ಟಡದ ಕಾಮಗಾರಿ ಪೂರ್ಣಗೊಳಿಸುವ ಮೊದಲೇ ತರಾತುರಿಯಲ್ಲಿ ಪೂರ್ವ ಸಿದ್ಧತೆಯಿಲ್ಲದೆ, ಜಿಲ್ಲೆಯ ಐವರು ಶಾಸಕರು ಹಾಗೂ ಸಾರ್ವಜನಿಕರಿಗೆ ಯಾವುದೇ ಮಾಹಿತಿ ನೀಡದೆ ಏಕಾಏಕಿ ಹಳೆಯ ಕಟ್ಟಡದಲ್ಲಿದ್ದ ಜಿಲ್ಲಾಸ್ಪತ್ರೆಯನ್ನು ಹೊಸ ಕಟ್ಟಡಕ್ಕೆ ಸ್ಥಳಾಂತರಿಸಲಾಗುತ್ತಿದೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಆರೋಪಿಸಿದ್ದಾರೆ.

ನೂತನ ಉಡುಪಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಸ್ಥಳಾಂತರ ಪ್ರಕ್ರಿಯೆ ಪರಿಶೀಲನೆ ನಡೆಸಿದ ಬಳಿಕ ಅವರು, ನೂತನ ಜಿಲ್ಲಾಸ್ಪತ್ರೆಗೆ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಿ ಪೂರ್ಣಪ್ರಮಾಣದ ಆಸ್ಪತ್ರೆಯನ್ನಾಗಿಸುವಂತೆ ಮುಖ್ಯ ಮಂತ್ರಿ ಹಾಗೂ ಸಚಿವರುಗಳನ್ನು ಭೇಟಿ ಮನವಿ ಸಲ್ಲಿಸಿದರೂ ಯಾವುದೇ ಸ್ಪಂದನೆ ಮಾಡಿಲ್ಲ. ಆದರೆ ಇದೀಗ ಏಕಾಏಕಿ ಹಳೆ ಆಸ್ಪತ್ರೆಯ ತುಕ್ಕು ಹಿಡಿದ 30 ವರ್ಷಗಳ ಹಳೆಯ 120 ಬೆಡ್‌ಗಳು, ಪೀಠೋಪಕರಣಗಳನ್ನು ಹೊಸ ಕಟ್ಟಡಕ್ಕೆ ಸ್ಥಳಾಂತರ ಮಾಡಿ ಶೀಘ್ರದಲ್ಲೇ ಆಸ್ಪತ್ರೆ ಆರಂಭಿಸಲು ಮುಂದಾಗಿರುವುದು ಉಡುಪಿ ಜಿಲ್ಲೆಯ ಆರೋಗ್ಯ ವ್ಯವಸ್ಥೆಗೆ ಮಾಡಿದ ದ್ರೋಹ ಎಂದು ದೂರಿದರು.

ರಾಜ್ಯದ ಇತರ ಜಿಲ್ಲಾಸ್ಪತ್ರೆಯ ಸೌಲಭ್ಯಗಳನ್ನು ನೀಡದೇ, 250 ಬೆಡ್ ಆಸ್ಪತ್ರೆಗೆ ಅಗತ್ಯವಿರುವ ವೈದ್ಯರು, ನರ್ಸಿಂಗ್ ಸಿಬ್ಬಂದಿಗಳ ನೇಮಕಾತಿ ಮಾಡದೆ, ತುರ್ತು ಚಿಕಿತ್ಸೆ, ಅಪರೇಷನ್ ಥಿಯೇಟರ್ ಸಹಿತ ಯಾವುದೇ ಅಗತ್ಯ ವ್ಯವಸ್ಥೆಗಳನ್ನು ಮಾಡದೆ ಗುಪ್ತವಾಗಿ ಸ್ಥಳಾಂತರ ಮಾಡಲು ಮುಂದಾಗಿರುವ ಅನಿವಾರ್ಯತೆಯನ್ನು ಆರೋಗ್ಯ ಇಲಾಖೆ ಬಹಿರಂಗ ಪಡಿಸಬೇಕು ಎಂದು ಅವರು ಆಗ್ರಹಿಸಿದರು.

ತಕ್ಷಣ ಆರೋಗ್ಯ ಸಚಿವರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪೂರ್ಣ ಪ್ರಮಾಣದ ಜಿಲ್ಲಾಸ್ಪತ್ರೆಯ ಸೌಲಭ್ಯ ಹಾಗೂ ಸಿಬ್ಬಂದಿಗಳನ್ನು ನಿಯೋಜಿಸಿ ಆಸ್ಪತ್ರೆ ಸ್ಥಳಾಂತರಿಸುವ ಬಗ್ಗೆ ಭರವಸೆ ನೀಡುವವರೆಗೆ ಈ ಸ್ಥಳಾಂತರ ಪ್ರಕ್ರಿಯೆಗೆ ಅವಕಾಶ ನೀಡುವುದಿಲ್ಲ. ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆ ಯಂತೆಯೇ ಉಡುಪಿಯ ನೂತನ ಜಿಲ್ಲಾಸ್ಪತ್ರೆಯಲ್ಲಿಯೂ ಬಡರೋಗಿಗಳಿಗೆ ಎಲ್ಲಾ ಸೇವೆಗಳು ಸಿಗುವಂತಾಗಬೇಕು. ಇಲ್ಲದಿದ್ದರೆ ಜಿಲ್ಲೆಯ ಐವರು ಶಾಸಕರು ಸಾರ್ವಜನಿಕರ ರೊಂದಿಗೆ ಸೇರಿ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಪ್ರಭಾಕರ ಪೂಜಾರಿ, ಜಿಪಂ ಮಾಜಿ ಅಧ್ಯಕ್ಷ ದಿನಕರ ಬಾಬು, ದಿನೇಶ್ ಅಮೀನ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X