ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಬೈಂದೂರು, ಅ.16: ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹ ಬಿಜೂರು ಗ್ರಾಮದ ರೈಲ್ವೆ ಸ್ಟೇಶನ್ ಹತ್ತಿರದಲ್ಲಿರುವ ಗದ್ದೆಯಲ್ಲಿ ಪತ್ತೆಯಾಗಿದೆ.
ಮೃತರನ್ನು ಕೆರ್ಗಾಲ್ ಗ್ರಾಮದ ಶಂಕರ ದೇವಾಡಿಗ(72) ಎಂದು ಗುರುತಿಸಲಾಗಿದೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಇವರು, ಅ.11ರಂದು ನಾಪತ್ತೆಯಾಗಿದ್ದರು. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹುಡುಕಾಡಿದಾಗ ಇವರ ಮೃತದೇಹವು ಅ.15ರಂದು ಸಂಜೆ ಗದ್ದೆಯಲ್ಲಿ ಕವುಚಾಗಿ ಬಿದ್ದು ಮೃತಪಟ್ಟು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




