ಪ್ರತ್ಯೇಕ ಪ್ರಕರಣ: ಇಬ್ಬರು ಆತ್ಮಹತ್ಯೆ
ಬ್ರಹ್ಮಾವರ, ಅ.16: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಕುದಿ ಗ್ರಾಮದ ಮೋಹನ(64) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಅ.14ರ ರಾತ್ರಿ ಯಿಂದ ಅ.16ರ ಬೆಳಗ್ಗಿನ ಮಧ್ಯಾವಧಿಯಲ್ಲಿ ಮನೆಯ ಹತ್ತಿರದ ಗದ್ದೆಯಲ್ಲಿರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಡುಬಿದ್ರಿ: ಅನಾರೋಗ್ಯದಿಂದ ಬಳಲುತ್ತಿದ್ದ ಎಲ್ಲೂರು ಗ್ರಾಮದ ಶಂಕರ ಶೆಟ್ಟಿ(70) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಅ.15ರಂದು ಬೆಳಗ್ಗೆ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




